- Home
- Entertainment
- Sandalwood
- Bossಗೆ ಎದುರಾಯ್ತು ಮತ್ತೊಂದು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ
Bossಗೆ ಎದುರಾಯ್ತು ಮತ್ತೊಂದು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ
ವಿ. ಲವ ನಿರ್ದೇಶನದ 'ಬಾಸ್' ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲೇ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದ ಕಥೆಯು ನಟ ದರ್ಶನ್ ಅವರ ಪ್ರಕರಣವನ್ನು ಹೋಲುತ್ತದೆ ಎಂಬ ಕಾರಣಕ್ಕೆ, ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಚಿತ್ರದ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬಾಸ್ ಸಿನಿಮಾ ಸಂಕಷ್ಟ
ನಾಡಿದ್ದು ಅರ್ಥಾತ್ ಇದೇ 19ರಂದು ಬಿಡುಗಡೆಯಾಗಬೇಕಿದ್ದ ಬಾಸ್ ಸಿನಿಮಾಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ವಿ. ಲವ ನಿರ್ದೇಶನದ Boss Movie ಆರಂಭದಿಂದಲೂ ವಿವಾದದ ಸುಳಿಯಲ್ಲಿಯೇ ಸಿಲುಕಿದ್ದು, ಬಿಡುಗಡೆಯ ಹೊತ್ತಿನಲ್ಲಿಯೇ ಮತ್ತೊಂದು ಸಂಕಷ್ಟ ಚಿತ್ರತಂಡಕ್ಕೆ ಎದುರಾಗಿದೆ.
ತಡೆ ಕೋರಿ ಹೈಕೋರ್ಟ್ಗೆ
ಅದೇನೆಂದರೆ, ಈ ಚಿತ್ರದ ಬಿಡುಗಡೆಗೆ ಕೋರಿ ವಿಜಯಲಕ್ಷ್ಮಿ ಮತ್ತು ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಷ್ಟಕ್ಕೂ ಈ ಚಿತ್ರದ ಟೀಸರ್ ಬಿಡುಗಡೆಯಾದಾಗಿನಿಂದಲೂ ಇದು ಗದ್ದಲ ಸೃಷ್ಟಿಸುತ್ತಲೇ ಇದೆ. ತನಿಷ್ ಶಿವಣ್ಣ ನಟನೆಯ ಈ ಚಿತ್ರದ ಟೀಸರ್ ಬಿಡುಗಡೆ ಆದ ದಿನದಿಂದಲೂ ವಿವಾದ ಶುರು ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ ಎಂಬುದನ್ನು ಟೀಸರ್ನಲ್ಲಿ ಉಲ್ಲೇಖಿಸಲಾಗಿತ್ತು. ಟೀಸರ್ ನೋಡಿದರೆ ನಟ ದರ್ಶನ್ (Darshan) ಕೇಸ್ ರೀತಿಯೇ ಈ ಸಿನಿಮಾದ ಕಥೆ ಇದೆ ಎಂಬ ಅನುಮಾನ ಮೂಡುತ್ತದೆ. ಆ ಕಾರಣದಿಂದ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ‘ಬಾಸ್’ ಸಿನಿಮಾದ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸೆಷನ್ಸ್ ಕೋರ್ಟ್ಗೆ ಅರ್ಜಿ
ಈ ಮೊದಲು ಸೆಷನ್ಸ್ ಕೋರ್ಟ್ನಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ಚಿತ್ರಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ವಜಾಗೊಂಡಿತು. ಅದರಿಂದ ಚಿತ್ರತಂಡ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಮತ್ತೆ ಈಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಜೂನ್ 19ರಂದು ಸಿನಿಮಾ ರಿಲೀಸ್ ಎಂದು ಮಾಧ್ಯಮಗಳಲ್ಲಿ ಜಾಹೀರಾತು ಕೂಡ ನೀಡಲಾಗಿದ್ದು, ಈಗ ಸಂಕಷ್ಟ ಬಂದಿದೆ.
ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ
ಸೆನ್ಸಾರ್ ಮಂಡಳಿಯಿಂದ ಈ ಸಿನಿಮಾಗೆ ಪ್ರಮಾಣಪತ್ರ ಸಿಕ್ಕಿದೆ. ಯು/ಎ ಪ್ರಮಾಣಪತ್ರವನ್ನು ನೀಡಲಾಗಿದೆ. ‘ಬಾಸ್’ ಸಿನಿಮಾದ ಬಿಡುಗಡೆಗೆ ಈ ಮೊದಲು ಸೆಷನ್ಸ್ ಕೋರ್ಟ್ ನೀಡಿದ್ದ ಅನುಮತಿಯನ್ನು ಈಗ ಹೈಕೋರ್ಟ್ ಎತ್ತಿ ಹಿಡಿಯುತ್ತಾ ಅಥವಾ ಚಿತ್ರಕ್ಕೆ ತಡೆ ನೀಡುತ್ತಾ ಎಂಬುದು ಗೊತ್ತಾಗಬೇಕಿದೆ.
ರೇಣುಕಾಸ್ವಾಮಿ ಪ್ರಕರಣ?
ಇದು ರೇಣುಕಾಸ್ವಾಮಿ ಕೊ*ಲೆ ಪ್ರಕರಣವನ್ನು (Renukaswamy Case) ಆಧರಿಸಿದ ಸಿನಿಮಾ ಎಂದೇ ಹೇಳಲಾಗುತ್ತಿತ್ತು. ಇದೀಗ ಈ ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಿಸುತ್ತಿದ್ದಂತೆಯೇ ಮತ್ತೊಂದು ಕಾನೂನು ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಸ್ ಸಿನಿಮಾ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

