Chiranjeevi Sarja Rajamarthanda : ಮತ್ತೊಂದು ಸುದ್ದಿ ಕೊಟ್ಟ ರಾಜಮಾರ್ತಾಂಡ
ಬೆಂಗಳೂರು(ಜ. 03) ದಿವಂಗತ ಚಿರಂಜೀವಿ ಸರ್ಜಾ (Chiranjeevi Sarja) ಅಭಿನಯದ " ರಾಜಮಾರ್ತಾಂಡ" (Rajamartanda) ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಸಹಜವಾಗಿಯೇ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು. ಹಾಗಾಗಿ ಅವರು ಚಿತ್ರೀಕರಣ ಮುಗಿಸಿದ್ದ ಕೊನೆಯ ಚಿತ್ರ ಅನ್ನಬಹುದು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಚಿರು ಅವರ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಲಿದ್ದಾರೆ.
ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಜೆ.ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀ ಮಾದೇಶ್ವರ ಪ್ರೊಡಕ್ಷನ್ಸ್ ಮೂಲಕ ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ "ರಾಜಮಾರ್ತಾಂಡ' ನ ವೈಭವವನ್ನು ಮತ್ತಷ್ಟು ಹೆಚ್ಚಿಸಿದೆ.
ಜೆ.ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ಜರ ನಿರ್ದೇಶನ ಈ ಚಿತ್ರಕ್ಕಿದೆ.
ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.