ಜು.13ರಂದು ನಟ ದರ್ಶನ್ ‘ಡೆವಿಲ್’ ಹಾಡಿನ ಶೂಟಿಂಗ್ ಥೈಲ್ಯಾಂಡ್‌ನಲ್ಲಿ ಶುರು!
ನಟ ದರ್ಶನ್ ನಟನೆಯ ಡೆವಿಲ್ ಚಿತ್ರದ ಬಾಕಿ ಇರುವ ಒಂದೇ ಒಂದು ಹಾಡಿನ ಶೂಟಿಂಗ್‌ಗಾಗಿ ಥೈಲ್ಯಾಂಡ್ ದೇಶಕ್ಕೆ ಹಾರಲಿದ್ದಾರೆ.

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಹಾಡಿನ ಚಿತ್ರೀಕರಣ ನಾಳೆಯಿಂದ (ಜು.13) ಥೈಲ್ಯಾಂಡ್‌ನಲ್ಲಿ ನಡೆಯಲಿದೆ. ಹತ್ತು ದಿನಗಳಿಗೂ ಹೆಚ್ಚು ಕಾಲ ಚಿತ್ರತಂಡ ಥೈಲ್ಯಾಂಡ್‌ನ ಫುಕೆಟ್‌ನಲ್ಲಿ ಚಿತ್ರೀಕರಣ ನಡೆಸಲಿದೆ.
ಹಿಂದೆ ಈ ಚಿತ್ರದ ಶೂಟಿಂಗ್ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆಸುವ ಪ್ಲಾನ್ ಆಗಿತ್ತು ಎನ್ನಲಾಗಿದೆ. ದರ್ಶನ್ ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಶೂಟಿಂಗ್ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಇರುವ ಹಿನ್ನೆಲೆಯಲ್ಲಿ ಅವರ ಹೆಚ್ಚಿನ ಸಿನಿಮಾಗಳ ಶೂಟಿಂಗ್ ಅಲ್ಲೇ ನಡೆದಿತ್ತು.
ಇದೀಗ ಈ ಸಿನಿಮಾದ ಹಾಡಿನ ಚಿತ್ರೀಕರಣವನ್ನು ಅಲ್ಲೇ ನಡೆಸಲು ಯೋಜಿಸಲಾಗಿತ್ತು. ಆದರೆ ಈ ಬಾರಿ ದರ್ಶನ್ ಮೇಲೆ ಆರೋಪ ಇರುವ ಕಾರಣ ಸ್ವಿಟ್ಜರ್‌ಲ್ಯಾಂಡ್ ಸರ್ಕಾರ ವೀಸಾ ನಿರಾಕರಿಸಿದೆ.
ಈ ಹಿಂದೆ ಯುರೋಪ್ ಕೂಡ ವೀಸಾ ನಿರಾರಿಸಿತ್ತು ಎನ್ನಲಾಗಿದೆ. ಥೈಲ್ಯಾಂಡ್‌ನಲ್ಲಾದರೆ ಅಲ್ಲಿಗೆ ಹೋಗಿಯೇ ಪಡೆಯಬಹುದಾದ ವೀಸಾ ಆನ್ ಅರೈವಲ್ ವ್ಯವಸ್ಥೆ ಇರುವ ಕಾರಣ ಚಿತ್ರತಂಡ ಅಲ್ಲಿ ಚಿತ್ರೀಕರಣ ನಡೆಸಲು ಪ್ಲಾನ್ ಮಾಡಿದೆ.
ಹಾಡಿನ ಚಿತ್ರೀಕರಣ ಮುಗಿದರೆ ‘ಡೆವಿಲ್’ ಸಿನಿಮಾದ ಶೂಟಿಂಗ್ ಸಂಪೂರ್ಣ ಮುಕ್ತಾಯಗೊಳ್ಳುತ್ತದೆ. ಪ್ರಕಾಶ್ ವೀರ್ ನಿರ್ದೇಶನದ ‘ಡೆವಿಲ್’ ಸಿನಿಮಾಕ್ಕೆ ಜೆ ಜಯಮ್ಮ ನಿರ್ಮಾಪಕರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

