ದಕ್ಷಿಣದ ಸ್ಟಾರ್ಸ್‌ಗೆ ಡ್ಯಾನ್ಸ್ ಕೊರೆಯೋಗ್ರಾಫಿ ಮಾಡಿ ಸೈ ಎನಿಸಿಕೊಂಡ ಶ್ರೀ ರಸ್ತು ಶುಭಮಸ್ತು ನಟಿ!
ಹೆಡ್ಡಿಂಗ್ ನೋಡಿ, ಅದು ಯಾವ ನಟಿನಪ್ಪಾ ದಕ್ಷಿಣದ ನಟರಿಗೆ ಡ್ಯಾನ್ಸ್ ಕೊರಿಯೋಗ್ರಾಫಿ ಮಾಡಿದ್ದು, ಎಂದು ನೀವು ಅಂದುಕೊಳ್ಳಬಹುದು ಅಲ್ವಾ? ಈ ನಟಿ ಬೇರಾರು ಅಲ್ಲ, ಶ್ರೀರಸ್ತು ಶುಭಮಸ್ತು ಸೀರಿಯಲ್ ನಟಿ ದರ್ಶಿನಿ ಡೆಲ್ಟ ನಾಗರಾಜ್.
ಈ ನಟಿ ಅಲ್ಲೊಂದು ಇಲ್ಲೊಂದು ಸೀರಿಯಲ್ (serial) ಗಳಲ್ಲಿ ಸಹನಟಿಯಾಗಿ ನಟಿಸ್ತಿದ್ದಾರೆ, ಆದರೆ ಇವರು ಕನ್ನಡ ಮಾತ್ರವಲ್ಲ ತೆಲುಗು ಫಿಲಂ ಇಂಡಸ್ಟ್ರಿಯಲ್ಲೂ ಸಖತ್ ಫೇಮಸ್. ಅದು ನಟಿಯಾಗಿ ಅಲ್ಲ, ಕೊರಿಯೋಗ್ರಾಫರ್ (choreographer) ಆಗಿ.
ಯಾವ ನಟಿ ಕೊರಿಯೋಗ್ರಾಫರ್ ಆಗಿದ್ದಾರೆ ಎಂದು ಯೋಚ್ನೆ ಮಾಡ್ತಿದ್ದೀರಾ? ಅವರು ಬೇರಾರು ಅಲ್ಲ ದರ್ಶಿನಿ ಡೆಲ್ಟಾ ನಾಗರಾಜ್ (Darshini Delta Nagraj). ಯಾರಿವರು ಅಂತ ಯೋಚನೆ ಮಾಡ್ಬೇಡಿ. ಇವರು ಬೇರೆ ಯಾರೂ ಅಲ್ಲ ಶ್ರೀರಸ್ತು ಶುಭಮಸ್ತು ಸೀರಿಯಲ್ ನಲ್ಲಿ ದೀಪಿಕಾ ಪಾತ್ರ ಮಾಡುತ್ತಿರುವ ನಟಿ.
ದರ್ಶಿನಿ ನಟಿಯಾಗೋ ಮೊದಲು ಮಾಡೆಲ್ (Model), ಜೊತೆಗೆ ಕೊರಿಯೋಗ್ರಾಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಾಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಾಫರ್ ಆಗಿ ಇವರು ಕೆಲಸ ಮಾಡಿದ್ದಾರೆ.
ದರ್ಶಿನಿ ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಾಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಾಫರ್ ಆಗಿ ಭಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು.
ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.
ಓಪನ್ ದ ಬಾಟಲ್ ಹಾಡಿಗೆ ಪುನೀತ್ ರಾಜ್ ಕುಮಾರ್ ಗೆ ಜಾನಿ ಮಾಸ್ಟರ್ ಗೆ ಅಸಿಸ್ಟಂಟ್ ಕೊರಿಯೋಗ್ರಫಿ ಮಾಡಿದ ದರ್ಶಿನಿ, ನನ್ನ ಕೊರಿಯೋಗ್ರಫಿ ಮೇಲೆ ನನಗಿಂತ ಹೆಚ್ಚಿನ ನಂಬಿಕೆ ಇಟ್ಟಿದ್ದ ಪುನೀತ್ ರಾಜ್ ಕುಮಾರ್ (Punith Rajkumar) ಅವರ ಆಶೀರ್ವಾದದಿಂದಲೇ ನಾನು ಇವತ್ತು ಈ ಹಂತಕ್ಕೆ ಬಂದಿದ್ದೇನೆ ಎಂದು ಹೇಳ್ತಾರೆ.
ಅಪ್ಪನ ಕನಸಿನಂತೆ ಡ್ಯಾನ್ಸರ್ (dancer) ಆಗಿ ಕರಿಯರ್ ಆರಂಭಿಸಿದ ದರ್ಶಿನಿ, ಮೊದಲಿಗೆ ತಮಿಳು ಮತ್ತು ತೆಲುಗು ರಿಯಾಲಿಟಿ ಶೋಗಳಲ್ಲಿ ಬಾಲ್ಯದಲ್ಲಿಯೇ ಭಾಗವಹಿಸಿದ್ದರು. ಕನ್ನಡದಲ್ಲಿ ನಟಿಯಾಗೋ ಮುನ್ನವೇ ಅವರು ತೆಲುಗು, ತಮಿಳು ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡರು.
ಇದೀಗ ಕನ್ನಡ, ತೆಲುಗಿನ ಸೂಪರ್ ಸ್ಟಾರ್ ನಾಯಕರಿಗೆ ಅಂದರೆ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್, ಶರಣ್, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿಯಂತಹ ಮಹಾನ್ ನಟರಿಗೆ ಕೊರಿಯೋಗ್ರಫಿ ಮಾಡಿದ್ದಾರೆ.
ತಮಿಳಿನಲ್ಲಿ ಜಾನಿ ಮಾಸ್ಟರ್ (Jani Master) ಅವರಿಗೆ ಅಸಿಸ್ಟಂಟ್ ಆಗಿ ಪ್ರಭುದೇವ (Prabhudeva) ಅವರಿಗೆ ಕೊರಿಯೋಗ್ರಫಿ ಮಾಡಿದ ದರ್ಶಿನಿ ಡೆಲ್ಟಾ ನಾಗರಾಜ್, ಸದ್ಯ ಕನ್ನಡದ ಮೊದಲ ಡ್ಯಾನ್ಸ್ ಕೊರಿಯೋಗ್ರಫರ್ ಆಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರಿಗೆ ಆಲ್ ದ ಬೆಸ್ಟ್ ಹೇಳೋಣ.