- Home
- Entertainment
- Sandalwood
- ಸುಪ್ರೀಂ ತೀರ್ಪಿನ ಬಳಿಕ ಆತ್ಮ*ಹತ್ಯೆಗೆ ಯತ್ನಿಸಿದ್ರಾ ದರ್ಶನ್? ಆತಂಕದಲ್ಲಿ ಫ್ಯಾನ್ಸ್- ಡಿಜಿಪಿ ಏನು ಹೇಳಿದ್ರು
ಸುಪ್ರೀಂ ತೀರ್ಪಿನ ಬಳಿಕ ಆತ್ಮ*ಹತ್ಯೆಗೆ ಯತ್ನಿಸಿದ್ರಾ ದರ್ಶನ್? ಆತಂಕದಲ್ಲಿ ಫ್ಯಾನ್ಸ್- ಡಿಜಿಪಿ ಏನು ಹೇಳಿದ್ರು
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ ನಂತರ, ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದು, ದರ್ಶನ್ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ನಲ್ಲಿ ಸಿಗಲಿಲ್ಲ ಜಾಮೀನು
ರೇಣುಕಾಸ್ವಾಮಿ ಕೇಸ್ನಲ್ಲಿ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿ ಇರುವ ನಟ ದರ್ಶನ್‌ಗೆ ಮೊನ್ನೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ್ದು, ಮತ್ತೊಂದು ವರ್ಷ ಜೈಲಿನಲ್ಲಿಯೇ ಕಳೆಯುವಂತಾಗಿದೆ. ದರ್ಶನ್ ಅವರು ಇದಾಗಲೇ ತಮಗೆ ನೀಡ್ತಿರೋ ಸೌಲಭ್ಯ ಸರಿಯಿಲ್ಲ ಎಂದು ಕೋರ್ಟ್ ಮೊರೆ ಹೋಗಿದ್ದರು. ಅವರಿಗೆ ನೀಡ್ತಿರೋ ಐಷಾರಾಮಿ ವ್ಯವಸ್ಥೆ ಕುರಿತು ಪೊಲೀಸ್ ಇಲಾಖೆ ಕೋರ್ಟ್ಗೆ ಮಾಹಿತಿ ನೀಡಿತ್ತು.

ದರ್ಶನ್ ಆತ್ಮ*ಹತ್ಯೆಗೆ ಯತ್ನ?
ಈ ಜಟಾಪಟಿಯ ನಡುವೆಯೇ, ಮೊನ್ನೆ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಖಿನ್ನತೆಗೆ ಜಾರಿದ್ದ ದರ್ಶನ್ ಆತ್ಮ*ಹತ್ಯೆಗೆ ಯತ್ನಿಸಿದರು ಎನ್ನುವ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ಇದು ದರ್ಶನ್ ಅಭಿಮಾನಿಗಳನ್ನು ಶಾಕ್ಗೊಳಿಸಿತು. ಆತಂಕದಿಂದ ಕೆಲವು ಅಭಿಮಾನಿಗಳು ಜೈಲಿಗೆ ಹೋಗಿದ್ದರು ಎಂದೂ ಹೇಳಲಾಗುತ್ತಿದೆ.
ಡಿಜಿಪಿ ಸ್ಪಷ್ಟನೆ
ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ತಿಳಿದ ಬಳಿಕ ಇದೀಗ ಖುದ್ದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕ ಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದೊಂದು ಶುದ್ಧ ಸುಳ್ಳು ಸುದ್ದಿ. ಯಾರೂ ಭಯಪಡಬೇಡಿ ಎಂದಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ. ಇದು ಗಾಳಿಸುದ್ದಿ ಎಂದಿದ್ದಾರೆ ಡಿಜಿಪಿ ಅಲೋಕ್ ಕುಮಾರ್. ಅಂತಹ ಯಾವುದೇ ಘಟನೆ ನಡೆದಿಲ್ಲ. ಈ ಸುದ್ದಿ ಸತ್ಯಕ್ಕೆ ದೂರವಾಗಿದೆ. ದರ್ಶನ್ ಚೆನ್ನಾಗಿದ್ದಾರೆ ಎಂದಿದ್ದಾರೆ.
ವಿವಾಹ ವಾರ್ಷಿಕೋತ್ಸವ
ಇದಾಗಲೇ ಮೊನ್ನೆ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವದ ನಿಮಿತ್ತ ವಿಜಯಲಕ್ಷ್ಮಿ ಅವರ ಮನವಿಯ ಮೇರೆಗೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ನಟ ದರ್ಶನ್ ಅವರು ಪತ್ನಿ ಹಾಗೂ ಮಗನನ್ನು ಅಪ್ಪಿಕೊಂಡು ಭಾವುಕರಾಗಿದ್ದರು
ವಿಜಯಲಕ್ಷ್ಮೀ ಮನವಿ
. ಪತ್ನಿ ವಿಜಯಲಕ್ಷ್ಮಿ ಸಹ ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಪತ್ರ ಬರೆದು ಪತಿ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು. ಈ ಮನವಿ ಸ್ಪಂದಿಸಿದ ಜೈಲು ಅಧಿಕಾರಿಗಳು ಇಂದು ಪತ್ನಿ ಹಾಗೂ ಮಗನ ಭೇಟಿಗೆ ಅವಕಾಶ ಕಲ್ಪಿಸಿದ್ದರು.
ಪತ್ನಿ-ಮಗನ ಭೇಟಿಗೆ ಅವಕಾಶ
ದರ್ಶನ್ ಕೂಡ ಪತ್ನಿ ಹಾಗೂ ಪುತ್ರನ ಭೇಟಿಗೆ ಅವಕಾಶ ಕಲ್ಪಿಸುವಂತೆ ಕೋರಿ ಜೈಲಿನ ಮುಖ್ಯ ಅಧೀಕ್ಷಕ ಅಂಶುಕುಮಾರ್ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜೈಲಿನ ನಿಯಮಾನುಸಾರ ಈ ಅನುವು ಮಾಡಿಕೊಡಲಾಗಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

