- Home
- Entertainment
- Sandalwood
- ಕನ್ನಡದಲ್ಲಿ ಮತ್ತೊಂದು ಥ್ರಿಲ್ಲಿಂಗ್ ಸಿನಿಮಾ 'ಬುಲೆಟ್': ಮತ್ತೊಮ್ಮೆ ಮಿಂಚಲು ಧರ್ಮ ಕೀರ್ತಿರಾಜ್ ರೆಡಿ
ಕನ್ನಡದಲ್ಲಿ ಮತ್ತೊಂದು ಥ್ರಿಲ್ಲಿಂಗ್ ಸಿನಿಮಾ 'ಬುಲೆಟ್': ಮತ್ತೊಮ್ಮೆ ಮಿಂಚಲು ಧರ್ಮ ಕೀರ್ತಿರಾಜ್ ರೆಡಿ
ಸತ್ಯಜಿತ್ ಅವರ ನಿರ್ದೇಶನದಲ್ಲಿ ಉತ್ತಮ ಚಿತ್ರ ನಿರ್ಮಾಣವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಈ ವರ್ಷದಲ್ಲಿ ನಾನು ನಾಯಕನಾಗಿ ನಟಿಸಿ ಬಿಡುಗಡೆಯಾಗುತ್ತಿರುವ ಮೂರನೇ ಚಿತ್ರ ಇದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಧರ್ಮಕೀರ್ತಿರಾಜ್ ನಾಯಕರಾಗಿ ನಟಿಸಿರುವ ಬುಲೆಟ್ ಚಿತ್ರ ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ಸತ್ಯಜಿತ್ ಶಬ್ಬೀರ್ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಹಾಡು ಹಾಗೂ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು.
ನಾಯಕ ನಟ ಧರ್ಮ ಮಾತನಾಡಿ, ಸತ್ಯಜಿತ್ ಅವರ ನಿರ್ದೇಶನದಲ್ಲಿ ಉತ್ತಮ ಚಿತ್ರ ನಿರ್ಮಾಣವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಈ ವರ್ಷದಲ್ಲಿ ನಾನು ನಾಯಕನಾಗಿ ನಟಿಸಿ ಬಿಡುಗಡೆಯಾಗುತ್ತಿರುವ ಮೂರನೇ ಚಿತ್ರ ಇದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ಮೊದಲ ಚಿತ್ರವನ್ನು ಕನ್ನಡದಲ್ಲೇ ನಿರ್ಮಿಸಿ, ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಬುಲೆಟ್ ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ಅಭಿನಯಿಸಿದ್ದಾರೆ.
ಶ್ರೀಯಾ ಶುಕ್ಲ ನಾಯಕಿ. ಹಿರಿಯ ನಟಿ ಭವ್ಯ, ಶೋಭ ರಾಜ್, ಶಿವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ವಿ.ಆರ್. ಸ್ವಾಮಿ ಛಾಯಾಗ್ರಹಣ, ರಾಜ್ ಭಾಸ್ಕರ್ ಸಂಗೀತ ನಿರ್ದೇಶನ ಹಾಗೂ ಗುರುಪ್ರಸಾದ್ ಸಂಕಲನ ಈ ಚಿತ್ರಕ್ಕಿದೆ.
ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೂಡಿಬಂದಿದೆ. ಇದೇ ಜೂನ್ 20 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಜಯದೇವ ಫಿಲಂಸ್ ಮೂಲಕ ಮರಿಸ್ವಾಮಿ ಅವರು ವಿತರಣೆ ಮಾಡಲಿದ್ದಾರೆ ಎನ್ನುವುದು ಸತ್ಯಜಿತ್ ಶಬ್ಬೀರ್ ಮಾತು. ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಟಿ ಭವ್ಯ ಹೇಳಿದರು.