7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ ಮುಖ ತೋರಿಸಿದ ಧ್ರುವ ಸರ್ಜಾ: ಹೆಸರೇನು?
ಸ್ಯಾಂಡಲ್‌ವುಡ್ ಸ್ಟಾರ್ ಧ್ರುವ ಸರ್ಜಾ ಮತ್ತು ಪ್ರೇರಣ ದಂಪತಿ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ್ದಾರೆ.
ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಮತ್ತು ಪ್ರೇರಣ ದಂಪತಿ ಇದುವರೆಗೂ ಮಗಳ ಫೋಟೋ ಹಂಚಿಕೊಂಡಿರಲಿಲ್ಲ. ಧ್ರುವ ಸರ್ಜಾ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಮೊದಲ ಬಾರಿಗೆ ಧ್ರುವ ದಂಪತಿ ಮಗಳ ಫೋಟೋ ಶೇರ್ ಮಾಡಿದ್ದಾರೆ.
ಅಂದಹಾಗೆ ಧ್ರುವ ಸರ್ಜಾ ಮಗಳಿಗೀಗ 7 ತಿಂಗಳು. 7 ತಿಂಗಳ ಬಳಿಕ ಮೊದಲ ಫೋಟೋ ಶೇರ್ ಮಾಡಿದ್ದಾರೆ. ಅಂದಹಾಗೆ ಇದು 7 ತಿಂಗಳ ಮಗಳ ಫೋಟೋವಲ್ಲ. ಒಂದು ತಿಂಗಳಿದ್ದಾಗ ಕ್ಲಿಕ್ ಮಾಡಿದ ಫೋಟೋ ಇದಾಗಿದೆ ಎಂದು ಧ್ರುವ ಸರ್ಜಾ ಹೇಳಿದ್ದಾರೆ.
ಮಗಳ ಫೋಟೋ ಶೇರ್ ಮಾಡಿ ಧ್ರುವ ದಂಪತಿ ದೀರ್ಘವಾದ ಸಾಲು ಹಂಚಿಕೊಂಡಿದ್ದಾರೆ. ಹಲೋ ಸ್ನೇಹಿತರೆ ಹಾಗೂ ಕುಟುಂಬದವರೆ, ನಿಮ್ಮೆಲ್ಲರಿಗೂ ನನ್ನ ಪ್ರೀತಿ. ನನಗೆ ಇನ್ನೂ ಹೆಸರಿಟ್ಟಿಲ್ಲ. ನನಗೆ ಈಗ 7 ತಿಂಗಳು. ನನ್ನ ಪಯಣವನ್ನು ಹಂಚಿಕೊಳ್ಳಲು ಖುಷಿ ಆಗುತ್ತದೆ. ನಾನು ಒಂದು ತಿಂಗಳ ಮಗುವಾಗಿದ್ದಾಗ ಕ್ಲಿಕ್ ಮಾಡಿದ ಕೆಲವು ಫೋಟೋಗಳನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ' ಎಂದು ಬರೆದಿದ್ದಾರೆ.
'ನಾನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್‌ಡೇಟ್ ಹಂಚಿಕೊಳ್ಳುತ್ತೇನೆ. ನಿಮ್ಮ ಆಶೀರ್ವಾದ ಇರಲಿ. ಜೈ ಹನುಮಾನ್' ಎಂದು ಹೇಳಿದ್ದಾರೆ.
ಧ್ರುವ ಸರ್ಜಾ ಮತ್ತು ಪ್ರೇರಣ 2019 ನವೆಂಬರ್ 24ರಂದು ದಾಂಪತ್ಯಕ್ಕೆ ಕಾಲಿಟ್ಟರು. ಮದುವೆಯಾಗಿ 3 ವರ್ಷಗಳ ಬಳಿಕ ಮೊದಲ ಮಗುವನ್ನು ಸ್ವಾಗತಿಸಿದರು. ಕಳೆದ ವರ್ಷ ಸೆಪ್ಟಂಬರ್ 3ಕ್ಕೆ ಪ್ರೇರಣ ಮುದ್ದದ ಮಗಳಿಗೆ ಜನ್ಮ ನೀಡಿದರು.
ಸಂತಸದ ವಿಚಾರವನ್ನು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಆದರೆ ಮಗಳ ಫೋಟೋವನ್ನು ರಿವೀಲ್ ಮಾಡಿರಲಿಲ್ಲ. ಇದೀಗ ಮೊದಲ ಬಾರಿಗೆ ಮಗಳ ಒಂದು ತಿಂಗಳಿನ ಫೋಟೋ ಹಂಚಿಕೊಂಡಿದ್ದಾರೆ.