MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Dhananjay: ಡಾಲಿಯ 'ಬಡವ ರಾಸ್ಕಲ್' ಚಿತ್ರಕ್ಕೆ ವಿಭಿನ್ನ ರೀತಿಯ ಪ್ರಚಾರ

Dhananjay: ಡಾಲಿಯ 'ಬಡವ ರಾಸ್ಕಲ್' ಚಿತ್ರಕ್ಕೆ ವಿಭಿನ್ನ ರೀತಿಯ ಪ್ರಚಾರ

ಇತ್ತೀಚೆಗೆ 'ಬಡವ ರಾಸ್ಕಲ್' ಚಿತ್ರಕ್ಕೆ ಹೊಸ ರೀತಿಯಲ್ಲಿ ಅಭಿಮಾನಿಗಳು ಪ್ರೋತ್ಸಾಹ ನೀಡಿ ಸ್ವಯಂಪ್ರೇರಿತರಾಗಿ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಬಗ್ಗೆ ಧನಂಜಯ್ ಇನ್‌ಸ್ಟಾಗ್ರಾಮ್‌ನಲ್ಲಿ ಹಲವಾರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

2 Min read
Suvarna News | Asianet News
Published : Nov 29 2021, 10:30 PM IST
Share this Photo Gallery
  • FB
  • TW
  • Linkdin
  • Whatsapp
19

ಡಾಲಿ ಧನಂಜಯ್ 'ಟಗರು' (Tagaru) ಚಿತ್ರದ ನಂತರ ಕನ್ನಡ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳಿವೆ. ಇದೀಗ ಅವರ ಅಭಿನಯದ 'ಬಡವ ರಾಸ್ಕಲ್' (Badava Rascal) ಚಿತ್ರವು ಡಿಸೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

29

ಈಗಾಗಲೇ ಚಿತ್ರದ ಗ್ಲಿಂಪ್ಸ್ ವಿಡಿಯೋ ಬಿಡುಗಡೆಯಾಗಿದ್ದು, ಧನಂಜಯ್, ಶಂಕರ್ ಅಲಿಯಾಸ್ ಬಡವ ರಾಸ್ಕಲ್... ಎಂದು ಮಾಸ್ ಎಂಟ್ರಿ ಕೊಟ್ಟಿದ್ದು, ಜೊತೆಯಲ್ಲಿ ಪಿಟ್ಟ, ಪ್ಯಾಕೆಟ್, ಕಬಾಬ್, ಬೆಂಕಿ,  ಸಣ್ಣಪ್ಪ, ಡೌನ್ ಟು ಅರ್ಥ್, ನಾಗ ಎಂಬ ಪಾತ್ರಗಳ ಪರಿಚಯವಿದೆ.

39

ಇತ್ತೀಚೆಗೆ 'ಬಡವ ರಾಸ್ಕಲ್' ಚಿತ್ರಕ್ಕೆ ಹೊಸ ರೀತಿಯಲ್ಲಿ ಅಭಿಮಾನಿಗಳು ಪ್ರೋತ್ಸಾಹ ನೀಡಿ ಸ್ವಯಂಪ್ರೇರಿತರಾಗಿ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಬಗ್ಗೆ ಧನಂಜಯ್ ಇನ್‌ಸ್ಟಾಗ್ರಾಮ್‌ನಲ್ಲಿ ಹಲವಾರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

49

ಶಾಲಾ ಮಕ್ಕಳಿಂದ ಹಿಡಿದು ತರಕಾರಿ ಅಂಗಡಿ, ಮಾಂಸದ ಅಂಗಡಿ, ದಿನಸಿ ಅಂಗಡಿ, ಆಸ್ಪತ್ರೆ ರಶೀದಿ ಚೀಟಿ, ಕಾರು ಗ್ಯಾರೇಜ್, ಆಟೋ ಚಾಲಕರವರೆಗೂ ಬಹಳ ವರ್ಗಗಳಲ್ಲಿ ದುಡಿಯುವ ಅಭಿಮಾನಿಗಳು 'ಬಡವ ರಾಸ್ಕಲ್' ಚಿತ್ರಕ್ಕೆ ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

59

ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ನಡೆಯುವ ಈ ಚಿತ್ರದಲ್ಲಿ ಧನಂಜಯ್‌ ಆಟೋ ಡ್ರೈವರ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, 'ಡಾಲಿ ಪಿಕ್ಚರ್' (Dolly Picture) ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. 

69

ಚಿತ್ರದಲ್ಲಿ ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್‌ (Amrutha Iyengar) ಅಭಿನಯಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್‌, ಪೂರ್ಣಚಂದ್ರ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

79

ಈ ಚಿತ್ರದಲ್ಲಿ 'ಮಠ' ಗುರುಪ್ರಸಾದ್‌ (Guruprasad) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಕತೆಗೆ ತಿರುವು ಕೊಡುವ ಪಾತ್ರ ಇದಾಗಿದ್ದು, ಚಿತ್ರದಲ್ಲಿನ ಅವರ ಗೆಟಪ್‌ ಈ ಹಿಂದೆ ರಿವೀಲ್ ಆಗಿತ್ತು. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್‌ (vasuki Vaibhav) ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. 

89

'ಬಡವ ರಾಸ್ಕಲ್' ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದ್ದು, ಬಾಲಾಜಿ ಡಿಜಿಟಲ್‌ ಸ್ಟುಡಿಯೋದಲ್ಲಿ ಚಿತ್ರದ ಡಬ್ಬಿಂಗ್ ನಡೆದಿದೆ. ಡಿಸೆಂಬರ್ 24 ಕ್ರಿಸ್‌ಮಸ್ (Christmas) ಹಬ್ಬದಂದು ಚಿತ್ರ ಬಿಡುಗಡೆಯಾಗಲಿದೆ.

99

ಸದ್ಯ ಧನಂಜಯ್ ಮಾನ್ಸೂನ್ ರಾಗ (Monsoon Raga) ಸೇರಿದಂತೆ ಹೆಡ್​ ಬುಷ್ (Head Bush)​ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಡಾಲಿ ಧನಂಜಯ್ ಅಭಿನಯದ 'ಹೆಡ್​ ಬುಷ್'​ ಸಿನಿಮಾಕ್ಕೆ ಅಗ್ನಿ ಶ್ರೀಧರ್ ಕತೆ ಬರೆದಿದ್ದು, ಶೂನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

About the Author

SN
Suvarna News
ಇನ್‌ಸ್ಟಾಗ್ರಾಂ
ಸ್ಯಾಂಡಲ್‌ವುಡ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved