ಫೆ.17ರಂದು ಶ್ರೀರಂಗಪಟ್ಟಣದಲ್ಲಿ ನಟ ದರ್ಶನ್ ; ಬೆಳ್ಳಿ ಪರ್ವ ಡಿ-25 ಬರಲು ರೆಡಿನಾ?
ನೆಚ್ಚಿನ ನಟನ 25ನೇ ವರ್ಷ ಸಂಭ್ರಮ ಆಚರಣ ಮಾಡಲು ಸಜ್ಜಾದ ಆಪ್ತ ಗೆಳೆಯರು. ಸಾವಿರಾರೂ ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆ.....

ನಟ ದರ್ಶನ್ ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ ಆದ ಹಿನ್ನೆಲೆಯಲ್ಲಿ ಅವರ ಆಪ್ತರು ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಆಯೋಜಿಸಿದ್ದಾರೆ.
ಈ ಕಾರ್ಯಕ್ರಮ ಫೆಬ್ರವರಿ 17ರಂದು ಸಂಜೆ 5 ಗಂಟೆಗೆ ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಆದಿಚುಂಚನಗಿರಿ ಶ್ರೀಗಳು, ಸುತ್ತೂರು ಶ್ರೀಗಳು, ಬೀಬಿಮಠದ ಶ್ರೀಗಳು, ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹರಿಕೃಷ್ಣ ಸಂಗೀತ ಸಂಜೆ ನಡೆಸಿಕೊಡಲಿದ್ದಾರೆ. ವಿನೋದ್ ರಾಜ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಭಾಗಿಯಾಗಲಿದ್ದಾರೆ.
ಧನ್ವೀರ್, ಚಿಕ್ಕಣ್ಣ, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಉಸ್ತುವಾರಿಯನ್ನು ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ.
ಫೆಬ್ರವರಿ 16ರಂದು ನಟ ದರ್ಶನ್ ಹುಟ್ಟುಹಬ್ಬ. ಅಭಿಮಾನಿಗಳು ಕೇಕ್, ಹಾರ್ ಮತ್ತು ಗಿಫ್ಟ್ ಎಂದು ಹಣ ವ್ಯರ್ತ ಮಾಡದೆ ದಿನಸಿ ಸಾಮಾಗ್ರಿ ತಂದುಕೊಟ್ಟರೆ ಅದನ್ನು ಅನಾಥಾಶ್ರಮ ಮತ್ತು ವೃದ್ಧಾಶ್ರಮ ಸೇರಿಸುವ ವ್ಯವಸ್ಥೆ ಮಾಡುವುದಾಗಿ ತಿಳಿದಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.