MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • Rishab Shetty Movie: ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಮುಹೂರ್ತ! ರಿಷಬ್‌ ಶೆಟ್ಟಿ ಭಾಗಿ

Rishab Shetty Movie: ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಮುಹೂರ್ತ! ರಿಷಬ್‌ ಶೆಟ್ಟಿ ಭಾಗಿ

ಕಾಂತಾರ ಪಾರ್ಟ್- 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ. 

1 Min read
Author : Padmashree Bhat
Published : Feb 22 2026, 04:54 PM IST
Share this Photo Gallery
  • FB
  • TW
  • Linkdin
  • Whatsapp
14
ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ
Image Credit : instagram

ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ, ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

24
ಸೀಕ್ವೆಲ್ ಸಿನಿಮಾ
Image Credit : instagram

ಸೀಕ್ವೆಲ್ ಸಿನಿಮಾ

2 ವರ್ಷಗಳ ಹಿಂದೆ 'ಹನುಮಾನ್' ಚಿತ್ರ ಕಟ್ಟಿಕೊಟ್ಟಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. 'ಪುಷ್ಪ', 'ವಾಲ್ತೇರು ವೀರಯ್ಯ', 'ವೀರ ಸಿಂಹ ರೆಡ್ಡಿ', 'ರಂಗಸ್ಥಲಂ' ರೀತಿಯ ಅನೇಕ ಹಿಟ್ ಸಿನಿಮಾಗಳನ್ನು ನಿರ್ಮಾಣ ಸಂಸ್ಥೆ ಈ ಬ್ಯಾನರ್‌ನಲ್ಲಿ ಈಗ ರಿಷಬ್ ಶೆಟ್ಟಿ ಅವರ ಜೈ ಹನುಮಾನ್ ಸಿನಿಮಾ ತಯಾರಾಗುತ್ತಿದೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.‌

Related Articles

Related image1
ಪ್ರತಿದಿನ ಹನುಮಾನ್‌ ಚಾಲೀಸಾ ಪಠಣದಿಂದ ಆಗುವ ಪ್ರಯೋಜನಗಳು!
Related image2
ಉ.ಪ್ರ. ಜೈಲಲ್ಲಿ ಇನ್ನು ಹನುಮಾನ್‌ ಚಾಲೀಸಾ, ಸುಂದರಕಾಂಡ ಪಠಣ!
34
 ಶೀಘ್ರದಲ್ಲೇ ಶೂಟಿಂಗ್ ಶುರು
Image Credit : instagram

ಶೀಘ್ರದಲ್ಲೇ ಶೂಟಿಂಗ್ ಶುರು

ಈ 'ಜೈ ಹನುಮಾನ್‌' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

44
ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ
Image Credit : instagram

ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್
ರಿಷಬ್ ಶೆಟ್ಟಿ

Latest Videos
Recommended Stories
Recommended image1
ಕಾವ್ಯಾ ಗೌಡ ಕುಟುಂಬ ಕಲಹ: ವಿಡಿಯೋ ರಿಲೀಸ್ ಬಗ್ಗೆ ಸ್ಪಷ್ಟನೆ, ಬೆಡ್‌ ರೂಂನಲ್ಲಿಯೂ ಸಿಸಿಟಿವಿ ಹಾಕಿಸಿರುವ ನಟಿ
Recommended image2
'ಜೈ ಹನುಮಾನ್' ಮುಹೂರ್ತಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ದಂಪತಿಗಳು; ಅಂಜನಾದ್ರಿ ಬೆಟ್ಟದಲ್ಲಿ ಕಾಂತಾರ 'ಶಿವ'ನ ಮಿಂಚು!
Recommended image3
Filmfare Awards 2026: ದಾವಣಗೆರೆ ಹುಡುಗಿ, ಕಲಬುರಗಿ ಸೊಸೆ ಶ್ರುತಿ ಪ್ರಹ್ಲಾದ್‌ಗೆ ಫಿಲ್ಮ್‌ಫೇರ್ ಕಿರೀಟ
Related Stories
Recommended image1
ಪ್ರತಿದಿನ ಹನುಮಾನ್‌ ಚಾಲೀಸಾ ಪಠಣದಿಂದ ಆಗುವ ಪ್ರಯೋಜನಗಳು!
Recommended image2
ಉ.ಪ್ರ. ಜೈಲಲ್ಲಿ ಇನ್ನು ಹನುಮಾನ್‌ ಚಾಲೀಸಾ, ಸುಂದರಕಾಂಡ ಪಠಣ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved