ಕಬಿನಿಯಲ್ಲಿ ನಟ ಶಿವರಾಜ್ ಕುಮಾರ್ ವಿಹಾರ: ಪತ್ನಿ ಗೀತಾ ಸಾಥ್
ನಟ ಶಿವರಾಜ್ ಕುಮಾರ್ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.

ಬಿಡುವಿಲ್ಲದ ಸಿನಿಮಾ ಚಟುವಟಿಕೆಗಳ ನಡುವೆ ಶಿವರಾಜ್ ಕುಮಾರ್ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.
ಸದ್ಯ ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರು ನಟಿಸುತ್ತಿದ್ದಾರೆ.
ಕನ್ನಡದಲ್ಲಿ ‘ಆನಂದ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ‘45’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ ನಟಿಸಲಿದ್ದಾರೆ.
ತಮಿಳಿನಲ್ಲಿ ಒಂದು ಪ್ರತ್ಯೇಕ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದೆಲ್ಲದರ ನಡುವೆ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ನಟಿಸುತ್ತಿದ್ದಾರೆ.
ಇನ್ನು ಶಿವಣ್ಣ ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಭಾರತೀಯ ಚಿತ್ರರಂಗದ ಗಣ್ಯರು ನಟನ ಕುರಿತು ಪ್ರಶಂಸೆಯ ಮಳೆ ಹರಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

