ಸರ್ ಸರ್ ಅನ್ನಬೇಕು, ಮೆಸೇಜ್ ಮಾಡಬೇಕು: ನಿರ್ಮಾಪಕರ ಮೇಲೆ Me Too ಆರೋಪ ಮಾಡಿದ ನಟಿ ಆಶಿತಾ
ಮತ್ತೆ ಶುರುವಾಯ್ತು Me Too. ರೋಡ್ ರೋಮಿಯೋ ಆಶಿತಾ ಆರೋಪ ಮಾಡಿದ್ದು ಯಾರ ಮೇಲೆ?
ಅಕ್ಟೋವರ್ 3,1984ರಲ್ಲಿ ಹುಟ್ಟಿರುವ ಆಶಿತಾ ಮಾರಿಯಾ ಕ್ರಾಸ್ತಾ ಮೂಲತಃ ಮುಂಬೈನವರಾಗಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಮಾಡಲಿಂಗ್ ಮತ್ತು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ.
Masters Of Business Administration ಪದವಿ ಪಡೆದಿರುವ ಆಶಿತಾ 16ನೇ ವಯಸ್ಸಿಗೆ ಮಾಡಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿ, ಹತ್ತು ಹಲವು ಬ್ರ್ಯಾಂಡ್‌ಗಳ ರಾಯಭಾರಿ ಆಗಿದ್ದರು.
ಮೈ ಗ್ರೀಟಿಂಗ್ಸ್, ತವರಿನ ಸಿರಿ, ರೋಡ್ ರೋಮಿಯೋ, ಗ್ರೀನ್ ಸಿಗ್ನಲ್ ಮತ್ತು ಬಾ ಬಾರೋ ರಸಿಕ ಸಿನಿಮಾಗಳಲ್ಲಿ ಆಶಿತಾ ಅಭಿನಯಿಸಿದ್ದಾರೆ. ವೃತ್ತಿ ಜೀವನದಲ್ಲಿ ಪೀಕ್‌ನಲ್ಲಿರುವಾಗ ಸಿನಿಮಾ ಲೋಕಕ್ಕೆ ಗುಡ್ ಬೈ ಹೇಳುತ್ತಾರೆ.
ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ ಎಂದಿರುವ ನಟಿ ಆಶಿತಾ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ಕೆಟ್ಟ ಅನುಭವಗಳು ಆದವು ಎಂದಿದ್ದಾರೆ. ಸಿನಿಮಾ ಪಯಣ ಪ್ರಾರಂಭ ಆದಾಗ ಅಂತ ಕೆಟ್ಟ ಸಮಸ್ಯೆ ಆಗಿಲ್ಲ. ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಬಳಿಕ ತನಗೆ ಕೆಟ್ಟ ಅನುಭವವಾಯಿತು ಎಂದು ಹೇಳಿದರು.
ಆ ನಿರ್ದೇಶಕರ ಹೆಸರು ಹೇಳುವುದು ಬೇಡ, ಅವರು ತನ್ನೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ' ಎಂದು ಆಶಿತಾ ಅನೇಕ ವರ್ಷಗಳ ಬಳಿಕ ಬಹಿರಂಗ ಪಡಿಸಿದ್ದಾರೆ.
'ಸರ್, ಸರ್, ಸರ್ ಅನ್ನಬೇಕು, ಮೆಸೇಜ್ ಮಾಡಬೇಕು, ಹಾಯ್ ಅಂತ ಹೇಳ್ತಾ ಇರಬೇಕು ಇದನ್ನೆಲ್ಲ ನಾನು ಮಾಡ್ತಾ ಇರ್ಲಿಲ್ಲ ಅಂತ ಎಷ್ಟು ಕಷ್ಟ ಕೊಟ್ಟಿದ್ದಾರೆ ಎಂದರೆ ಅಷ್ಟು ಕೊಟ್ಟಿದ್ದಾರೆ.'
'ಇದು ನನ್ನ ಜೀವನದಲ್ಲಿ ಪೀಕ್ ನಲ್ಲಿ ಇದ್ದಾಗ ಆಗಿದ್ದು. ದೊಡ್ಡ ದೊಡ್ಡ ಕಲಾವಿದರ ಜೊತೆ ಕೆಲಸ ಮಾಡಿದಾಗ ನನಗೆ ಏನು ಆಗಿರ್ಲಿಲ್ಲ. ಹೊಸಬರು ಜೊತೆ ಕೆಲಸ ಮಾಡುವಾಗ ಇಂಥ ಕೆಟ್ಟ ಅನುಭವವಾಗಿದೆ' ಎಂದು ಹೇಳಿದ್ದಾರೆ.
'ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾಗಿರುವಾಗ, ಇನ್ನು ಹೊಸ ಹುಡುಗಿಯರು ಎಷ್ಟು ಕಷ್ಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು' ಎಂದು ಹೇಳಿದರು.