- Home
- Entertainment
- Sandalwood
- X&Y Movie: ರಿಲೀಸ್‌ಗೆ ರೆಡಿಯಾಗಿರೋ 'ರಾಮಾ ರಾಮಾ ರೇʼ ಸಿನಿಮಾ ನಿರ್ದೇಶಕ ಡಿ ಸತ್ಯಪ್ರಕಾಶ್‌ರ X&Y ಸಿನಿಮಾ!
X&Y Movie: ರಿಲೀಸ್‌ಗೆ ರೆಡಿಯಾಗಿರೋ 'ರಾಮಾ ರಾಮಾ ರೇʼ ಸಿನಿಮಾ ನಿರ್ದೇಶಕ ಡಿ ಸತ್ಯಪ್ರಕಾಶ್‌ರ X&Y ಸಿನಿಮಾ!
"ರಾಮಾ ರಾಮಾ ರೇ" ಸಿನಿಮಾ ಮಾಡಿದ ಖ್ಯಾತಿ ಎಲ್ಲರಿಗೂ ಗೊತ್ತಿದೆ. ಈ ಸಿನಿಮಾದ ನಿರ್ದೇಶಕ ಡಿ.ಸತ್ಯಪ್ರಕಾಶ್ ಅವರೇ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ "X&Y" ಚಿತ್ರ ರಿಲೀಸ್‌ಗೆ ರೆಡಿಯಿದೆ.

ಹೌದು, ಈ ವಾರ ಜೂನ್ 26(ಗುರುವಾರ) ರಂದು X&Y ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ‘ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’ ಮತ್ತು ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನಿಮಾಗಳನ್ನು ನಿರ್ದೇಶಿಸಿರುವ ಡಿ ಸತ್ಯಪ್ರಕಾಶ್ ಅವರಿಗೆ ʼX&Yʼ ನಾಲ್ಕನೇ ನಿರ್ದೇಶನದ ಸಿನಿಮಾವಿದು.
ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ ʼX&Yʼ ಚಿತ್ರ ಈ ವಾರ ತೆರೆಗೆ ಬರುತ್ತಿದ್ದು, ಈ ಚಿತ್ರ ಕೂಡ ಪ್ರೇಕ್ಷಕರ ಮನ ಗೆಲ್ಲಲ್ಲಿದೆ ಎಂಬ ಅಭಿಪ್ರಾಯ ಚಿತ್ರತಂಡದ್ದು.
ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ.
ಸತ್ಯ ಪಿಕ್ಚರ್ಸ್ ನಿರ್ಮಾಣದ "X&Y" ಚಿತ್ರದ ತಾರಾಬಳಗದಲ್ಲಿ ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರಿದ್ದಾರೆ.
ಈ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದ್ದು, ಚಿತ್ರತಂಡವು ಭರ್ಜರಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದೆ.