'ರಾಘವೇಂದ್ರ ಸ್ಟೋರ್ಸ್' ಚಿತ್ರದಲ್ಲಿ Shwetha Srivatsav!
ಮಗಳು ಹುಟ್ಟಿದ ಮೇಳೆ ಎರಡನೇ ಸಿನಿಮಾ ಸಹಿ ಮಾಡಿದ ನಟಿ ಶ್ವೇತಾ ಶ್ರೀವಾತ್ಸವ. ಇದು ನವರಸ ನಾಯನ ಸಿನಿಮಾ.
ಜಗ್ಗೇಶ್ (Jaggesh) ನಟನೆಯ ‘ರಾಘವೇಂದ್ರ ಸ್ಟೋರ್ಸ್’ (Raghavendra Stores) ಚಿತ್ರದಲ್ಲಿ ಶ್ವೇತಾ ಶ್ರೀವಾತ್ಸವ ನಟಿಸಲಿದ್ದಾರೆ.
ಶಿವಮೊಗ್ಗ (Shivamogga), ತೀರ್ಥಹಳ್ಳಿ (Thirthahalli) ಮೊದಲಾದೆಡೆ ಇದೀಗ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ.
ಡಿಸೆಂಬರ್ ವೇಳೆ ಶ್ವೇತಾ ಭಾಗದ ಚಿತ್ರೀಕರಣ ನಡೆಯುವ ಸಾಧ್ಯತೆ ಇದೆ. ಸೋಷಿಯಲ್ ಮೀಡಿಯಾದಲ್ಲಿ ಶ್ವೇತಾ ಅಪ್ಡೇಟ್ಸ್ ಹಂಚಿಕೊಳ್ಳುತ್ತಿದ್ದಾರೆ.
ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ (Hombale Films) ಮೂಲಕ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ.
ಶ್ವೇತಾ ಮತ್ತು ಜಗ್ಗೇಶ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಲಿದ್ದು, ಸಿನಿ ರಸಿಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ.
ಲಾಕ್‌ಡೌನ್‌ನೂ ಮುನ್ನ ಶ್ವೇತಾ 'ಹೋಪ್' ಸಿನಿಮಾ ಚಿತ್ರೀಕರಣ ಮುಗಿಸಿದ್ದರು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಶೀಘ್ರದಲ್ಲಿ ಬಿಡುಗಡೆ ಮಾಡುವ ಪ್ಲ್ಯಾನಿಂಗ್ ಮಾಡುತ್ತಿದ್ದಾರೆ..