ವಿಭಿನ್ನ ಲುಕ್‌ನಲ್ಲಿ ಮಿಂಚಿದ 'ಕಾಂತಾರ' ಲೀಲಾ; ಸಪ್ತಮಿ ಗೌಡ ಫೋಟೋ ವೈರಲ್
ಕಾಂತಾರ ನಟಿ ಸಪ್ತಮಿ ಗೌಡ ವಿಭಿನ್ನ ಲುಕ್‌ನಲ್ಲಿ ಕಂಗೊಳಿಸುತ್ತಿದ್ದಾರೆ. ಹೊಸ ಫೋಟೋಶೂಟ್ ವೈರಲ್ ಆಗಿದೆ.

ಕಾಂತಾರ ಸಿನಿಮಾ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ನಟಿ ಸಪ್ತಮಿ ಗೌಡ ಹೊಸ ಲುಕ್‌ನಲ್ಲಿ ಮಿಂಚುತ್ತಿದ್ದಾರೆ. ಬ್ಲಾಕ್‌ಬಸ್ಟರ್ ಕಾಂತಾರ ಬಳಿಕ ಸಪ್ತಮಿ ಗೌಡ ಬೇಡಿಕೆ ಹೆಚ್ಚಾಗಿದೆ. ಹಾಗಂತ ಸಪ್ತಮಿ ಎಲ್ಲಾ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ಸಪ್ತಮಿ ಸದ್ಯ ಕನ್ನಡ ಸಿನಿಮಾ ಜೊತೆಗೆ ಹಿಂದಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಸಪ್ತಮಿ ಆಗಾಗ ಹೊಸ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ. ಇದೀಗ ಸಪ್ತಮಿ ಹೊಸ ಫೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.
ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಕಂಗೊಳಿಸುತ್ತಿರುವ ಸಪ್ತಮಿ ವಿಭಿನ್ನ ಹೇರ್ ಸ್ಟೈಲ್ ಮಾಡಿಕೊಂಡಿದ್ದಾರೆ. ಕ್ಯಾಮರಾಗೆ ಮಸ್ತ್ ಪೋಸ್ ನೀಡಿರುವ ಸಪ್ತಮಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಬಣ್ಣದ ಲೋಕದ ಜರ್ನಿ ಪ್ರಾರಂಭಿಸಿದ ಸಪ್ತಮಿ ಕಾಂತಾರ ಮೂಲಕ ದೊಡ್ಡ ಸಕ್ಸಸ್ ಕಂಡರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡರು.
ಕಾಂತಾರ ಬಳಿಕ ಸಪ್ತಮಿ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಮತ್ತೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಕುತೂಹಲಕ್ಕೆ ತೆರೆ ಎಳೆದರು.
ಯುವರಾಜ್ ಕುಮಾರ್ ನಟನೆಯ ಯುವ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸಂತೋಷ್ ಆನಂದ್ ರಾಮ್ ಸಾರಥ್ಯದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಸಿನಿಮಾ ಜೊತೆಗೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.