- Home
- Entertainment
- Sandalwood
- ಅಭಿಷೇಕ್-ಅವಿವಾ ನಿಶ್ಚಿತಾರ್ಥ ಸಂಭ್ರಮದಲ್ಲಿ ಯಶ್-ರಾಧಿಕಾ; ಯಾರೆಲ್ಲ ಭಾಗಿಯಾಗಿದ್ದರು, ಫೋಟೋ ಗ್ಯಾಲರಿ
ಅಭಿಷೇಕ್-ಅವಿವಾ ನಿಶ್ಚಿತಾರ್ಥ ಸಂಭ್ರಮದಲ್ಲಿ ಯಶ್-ರಾಧಿಕಾ; ಯಾರೆಲ್ಲ ಭಾಗಿಯಾಗಿದ್ದರು, ಫೋಟೋ ಗ್ಯಾಲರಿ
ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಷ್ ಬಹುಕಾಲದ ಗೆಳತಿ ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಅದ್ದೂರಿಯಾಗಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಯಶ್, ರಾಧಿಕಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಷ್ ಬಹುಕಾಲದ ಗೆಳತಿ ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಇಂದು (ಡಿಸೆಂಬರ್ 11) ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಅದ್ದೂರಿ ನಿಶ್ಚಿತಾರ್ಥ ಸಮಾರಂಭದಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದ ಉಂಗುರ ಬದಲಾಯಿಸಿಕೊಂಡರು.
ಅಭಿಷೇಕ್ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಭಾಗಿಯಾಗಿದ್ದರು. ಸದ್ಯ ಅಭಿಷೇಕ್ ನಿಶ್ಚಿತಾರ್ಥದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದೆ. ಅಭಿಷೇಕ್ ಮತ್ತು ಅವಿವಾ ಜೋಡಿಗೆ ಅಭಿಮಾನಿಗಳು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ.
ಅದ್ದೂರಿಯಾಗಿ ನಡೆದ ಅಭಿಷೇಕ್ ಮತ್ತು ಅವಿವಾ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಮತ್ತು ಅನೇಕ ಸಿನಿಮಾ ಗಣ್ಯರು ಭಾಗಿಯಾಗಿದ್ದರು. ಅವಿವಾ ಮತ್ತು ಅಭಿಷೇಕ್ ಜೋಡಿಗೆ ಶುಭಹಾರೈಸಿದರು. ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ರಾಕಿಂಗ್ ಸ್ಟಾರ್ ದಂಪತಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಗುರುಕಿರಣ್ ದಂಪತಿ, ನಿರ್ದೇಶಕ ಆರ್ ಚಂದ್ರು ಮತ್ತು ಹೆಬ್ಬುಲಿ ಕೃಷ್ಣ, ನಟ ಅನಿರುದ್ಧ ಸೇರಿದಂತೆ ಅನೇಕರು ಭಾಗಿಯಾಗಿ ನವ ಜೋಡಿಗೆ ಶುಭಹಾರೈಸಿದರು. ಸಿನಿಮಾ ಮಾತ್ರವಲ್ಲದೇ ರಾಜಕೀಯ ಗಣ್ಯರು ಭಾಗಿಯಾಗಿದ್ದರು. ಆರ್ ಅಶೋಕ್, ಸತೀಶ್ ರೆಡ್ಡಿ, ಉದಯ್ ಗರಡಾಚಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಅಭಿಷೇಕ್ ಮತ್ತು ಅವಿವಾ ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಸುಂದರವಾಗಿ ಕಂಕೊಳಿಸಿದ್ದರು. ಪಿಂಕ್ ಬಣ್ಣದ ಜೆರಿ ಸೀರೆಯಲ್ಲಿ ಅವಿವಾ ಮಿಂಚಿದ್ರೆ ಬಿಳಿ ಮತ್ತು ಪಿಂಕ್ ಬಣ್ಣದ ಶೇರ್ವಾನಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ. ಇಬ್ಬರ ಫೋಟೋಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ ಹರಿದುಬರುತ್ತಿದೆ.
ಅಂದಹಾಗೆ ಅಭಿಷೇಕ್ ಮದುವೆಯಾಗುತ್ತಿರುವ ಅವಿವಾ ಬಿದ್ದಪ್ಪ ಫ್ಯಾಷನ್ ಡಿಸೈನರ್. ಖ್ಯಾತ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಮಗಳು. ಅಭಿಷೇಕ್ ಮತ್ತು ಅವಿವಾ ಅವರದ್ದು 4 ವರ್ಷಗಳ ಪ್ರೀತಿ. ಇಬ್ಬರೂ 4 ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಇದೀಗ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ಸದ್ಯ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಇಬ್ಬರೂ ಉಂಗುರ ಬದಲಾಯಿಸಿಕೊಂಡರು. ಮುಂದಿನ ವರ್ಷದ ಪ್ರಾರಂಭದಲ್ಲಿ ಇಬ್ಬರೂ ದಾಂಪತ್ಯಕ್ಕೆ ಕಾಲಿಡುವ ಸಾಧ್ಯತೆ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.