- Home
- Entertainment
- Sandalwood
- ರಾಕಿಂಗ್ ಸ್ಟಾರ್ ಮನೆಯಲ್ಲಿ ಸಂಕ್ರಾಂತಿ ಬಲು ಜೋರು: ಮಡದಿ, ಮಕ್ಕಳ ಜೊತೆ ಗಾಳಿಪಟ ಹಾರಿಸಿದ ಯಶ್!
ರಾಕಿಂಗ್ ಸ್ಟಾರ್ ಮನೆಯಲ್ಲಿ ಸಂಕ್ರಾಂತಿ ಬಲು ಜೋರು: ಮಡದಿ, ಮಕ್ಕಳ ಜೊತೆ ಗಾಳಿಪಟ ಹಾರಿಸಿದ ಯಶ್!
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮನೆಯಲ್ಲಿ ಹಬ್ಬಗಳ ಆಚರಣೆ ಯಾವಾಗಲೂ ವಿಶೇಷವಾಗಿರುತ್ತದೆ. ಯಾವ ಹಬ್ಬಗಳನ್ನು ಮಿಸ್ ಮಾಡದೇ ರಾಕಿ ಭಾಯ್ ಕುಟುಂಬದ ಜೊತೆಗೆ ಸೆಲೆಬ್ರೇಟ್ ಮಾಡುತ್ತಾರೆ.

ಇದೀಗ ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ಖುಷಿಯಿಂದ ಯಶ್ ದಂಪತಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಕುರಿತ ಸುಂದರ ಫೋಟೋಗಳನ್ನ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಟಾಕ್ಸಿಕ್ ಸಿನಿಮಾ ಶೂಟಿಂಗ್ ಬ್ಯುಸಿಯಲ್ಲಿರುವ ನಟ ಯಶ್, ಮಕ್ಕಳ ಜೊತೆ ಸಂಕ್ರಾಂತಿ ಹಬ್ಬವನ್ನು ಜೋರಾಗಿ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಇನ್‌ಸ್ಟಾಗ್ರಾಮ್‌ದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಯಶ್ ಹಾಗೂ ಮಕ್ಕಳ ಜೊತೆಗೆ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ ಫೋಟೋಗಳನ್ನು ರಾಧಿಕಾ ಶೇರ್ ಮಾಡಿ, ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಯಶ್ ಸಂಕ್ರಾಂತಿ ಹಬ್ಬದ ದಿನ ಮಕ್ಕಳ ಜೊತೆ ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸಿದ್ದಾರೆ. ಈ ಮೂಲಕ ತಮ್ಮ ಬಾಲ್ಯದ ದಿನಗಳನ್ನು ರಾಕಿಂಗ್ ಸ್ಟಾರ್ ನೆನಪು ಮಾಡಿಕೊಂಡಿದ್ದಾರೆ.
ಮದುವೆ, ಮಕ್ಕಳಾದ ಬಳಿಕ ನಟಿ ರಾಧಿಕಾ ಪಂಡಿತ್ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ಬಣ್ಣದ ಲೋಕದಿಂದ ದೂರ ಇದ್ರೂ ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಸ್ಯಾಂಡಲ್ವುಡ್ನ ಬ್ಯೂಟಿಫುಲ್ ಜೋಡಿಯಾಗಿದೆ. ಕೆಜಿಎಫ್ ಸಿನಿಮಾ ಬಳಿಕ ನಟ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಪಾರ ಫ್ಯಾನ್ ಫಾಲೋವರ್ಸ್ ಇದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.