- Home
- Entertainment
- Sandalwood
- ಅಣ್ಣನ ಮಗ ನಿರಂಜನ್ ಜೊತೆ ಮೊದಲ ಬಾರಿಗೆ ಉಪೇಂದ್ರ ನಟನೆ: 'ನೆಕ್ಸ್ಟ್ ಲೆವೆಲ್'ನಲ್ಲಿ ಶಾಕಿಂಗ್ ಟ್ವಿಸ್ಟ್!
ಅಣ್ಣನ ಮಗ ನಿರಂಜನ್ ಜೊತೆ ಮೊದಲ ಬಾರಿಗೆ ಉಪೇಂದ್ರ ನಟನೆ: 'ನೆಕ್ಸ್ಟ್ ಲೆವೆಲ್'ನಲ್ಲಿ ಶಾಕಿಂಗ್ ಟ್ವಿಸ್ಟ್!
‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ನಿರ್ದೇಶಕ ಅರವಿಂದ್ ಕೌಶಿಕ್ ಹಾಗೂ ನಿರ್ಮಾಪಕ ತರುಣ್ ಶಿವಪ್ಪ ಸೇರಿ ದೊಡ್ಡ ತಾರಾಬಳಗವನ್ನೇ ಒಟ್ಟುಗೂಡಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ‘ನೆಕ್ಸ್ಟ್ ಲೆವೆಲ್’
ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಭರ್ಜರಿಯಾಗಿ ನಿರ್ಮಾಣವಾಗುತ್ತಿರುವ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ನಿರ್ದೇಶಕ ಅರವಿಂದ್ ಕೌಶಿಕ್ ಹಾಗೂ ನಿರ್ಮಾಪಕ ತರುಣ್ ಶಿವಪ್ಪ ಸೇರಿ ದೊಡ್ಡ ತಾರಾಬಳಗವನ್ನೇ ಒಟ್ಟುಗೂಡಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
ಒಂದೇ ಸಿನಿಮಾದಲ್ಲಿ ಅಪ್ಪ-ಮಗ
ಚಿತ್ರದ ವಿಶೇಷವೆಂದರೆ ಇದೀಗ ಉಪೇಂದ್ರ ಅವರ ಅಣ್ಣನ ಮಗ ನಟ ನಿರಂಜನ್ ಸುಧೀಂದ್ರ ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಅಪ್ಪ-ಮಗ ಇಬ್ಬರೂ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿ ಆಗಿದ್ದು, ಇದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.
ಅಭಿಮಾನಿಗಳ ಬಹುದಿನಗಳ ಆಸೆ
ಈ ಹಿಂದೆ ಉಪೇಂದ್ರ ಹಾಗೂ ನಿರಂಜನ್ ಇಬ್ಬರೂ ಒಟ್ಟಿಗೆ ತೆರೆ ಹಂಚಿಕೊಳ್ಳಬೇಕು ಎಂಬುದು ಅಭಿಮಾನಿಗಳ ಬಹುದಿನಗಳ ಆಸೆಯಾಗಿತ್ತು. ಆ ನಿರೀಕ್ಷೆ ಇದೀಗ ‘ನೆಕ್ಸ್ಟ್ ಲೆವೆಲ್’ ಚಿತ್ರದ ಮೂಲಕ ಸಾಕಾರವಾಗುತ್ತಿದೆ. ಇವರಿಬ್ಬರ ಆನ್‌ಸ್ಕ್ರೀನ್ ಜುಗಲ್‌ಬಂದಿ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಆರಾಧನಾ ರಾಮ್ ನಾಯಕಿ
ಚಿತ್ರದಲ್ಲಿ ಉಪೇಂದ್ರಗೆ ನಾಯಕಿಯಾಗಿ ಮಾಲಾಶ್ರೀ ಮಗಳು ಆರಾಧನಾ ರಾಮ್ ಕಾಣಿಸಿಕೊಳ್ಳುತ್ತಿದ್ದಾರೆ. ರೋಜ್, ಮಾಸ್ ಲೀಡರ್, ವಿಕ್ಟರಿ-2, ಖಾಕಿ ಹಾಗೂ ಛೂ ಮಂತರ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್ ಶಿವಪ್ಪ ತಮ್ಮದೇ ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

