ಕೃಷ್ಣನಾಗಿ ಮಿಂಚಿದ ಅವ್ಯಾನ್ ದೇವ್; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಯಲ್ಲಿ ಸಂಭ್ರಮ!
ಪುತ್ರನಿಗೆ ಕೃಷ್ಣನಂತೆ ಅಲಂಕಾರ ಮಾಡಿದ ನಿಖಿಲ್. ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಮೊಮ್ಮಗನ ಫೋಟೋ ವೈರಲ್....
ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಮನೆಯಲ್ಲಿ ಅದ್ಧೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದಾರೆ.
ಮಗನಿಗೆ ಕೃಷ್ಣನ ರೀತಿ ಅಲಂಕಾರ ಮಾಡಿದ್ದಾರೆ. ಅಜ್ಜಿ ಅನಿತಾ ಮತ್ತು ತಾತಾ ಕುಮಾರಸ್ವಾಮಿ ಅವರ ಬಳಿ ಕುಳಿತು ಅವ್ಯಾನ್ ಪೋಸ್ ಕೊಟ್ಟಿದ್ದಾನೆ.
'ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಆ ಕೃಷ್ಣ ಪರಮಾತ್ಮನು ಎಲ್ಲರಿಗೂ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ನಿಖಿಲ್ ಬರೆದುಕೊಂಡಿದ್ದಾರೆ.
ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರೋ ಕುಮಾರಸ್ವಾಮಿ ರವರು ಮೊಮ್ಮಗನಿಗೆ ಕೃಷ್ಣನ ವೇಷ ಧರಿಸಿ ಖುಷಿ ಪಟ್ಟ ಸಂಭ್ರಮಿಸಿದ್ದಾರೆ.
ಹೊಸ ಸಿನಿಮಾದಲ್ಲಿ ನಿಖಿಲ್ ಬ್ಯುಸಿಯಾಗಿದ್ದರೂ ಸಮಯ ಮಾಡಿಕೊಂಡು ಈ ನಡುವೆಯೂ ತಪ್ಪದೇ ಮನೆಯ ಸಮಾರಂಭದಲ್ಲಿ ಭಾಗಿಯಾಗುತ್ತಾರೆ.
ಜ್ಯೂನ್ 8ರಂದು ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಸಮಾರಂಭ ನಡೆಯುತ್ತಿದೆ. 10:30 ರಿಂದ 12:20 ರವರೆಗೂ ನಡೆಯುವ ಶುಭ ಲಗ್ನದಲ್ಲಿ ಅವ್ಯಾನ್ ದೇವ್ ಎಂದು ಹೆಸರಿಟ್ಟರು.
ಅವ್ಯಾನ್ ದೇವ್ (Avyan Dev) ದೇವರ ಹೆಸರು. ಹೌದು, ಗಣಪತಿಯ ಮತ್ತೊಂದು ಹೆಸರು. ಅದೃಷ್ಟದಿಂದ ಜನಿಸಿದವನು ಎಂದು ಸೂಚಿಸುತ್ತದೆ.