- Home
- Entertainment
- Sandalwood
- Puneeth Rajkumar James: ಗಣರಾಜ್ಯೋತ್ಸವ ಸಂದರ್ಭ ಪುನೀತ್ ಅಭಿಮಾನಿಗಳಿಗೆ ದೊಡ್ಡ ನ್ಯೂಸ್!
Puneeth Rajkumar James: ಗಣರಾಜ್ಯೋತ್ಸವ ಸಂದರ್ಭ ಪುನೀತ್ ಅಭಿಮಾನಿಗಳಿಗೆ ದೊಡ್ಡ ನ್ಯೂಸ್!
ಬೆಂಗಳೂರು(ಜ. 26) ಗಣರಾಜ್ಯೋತ್ಸವದ ದಿವವೇ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಲಿದೆ. ಪುನೀತ್ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್ 17ರಂದು ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಅಶ್ವಿನಿ ಪುನೀತ್ ರಾಜ್‍ಕುಮಾರ್ ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇದೆ.
PRK ಮೂರು ಹೊಸ ಸಿನಿಮಾ ಅಮೇಜಾನ್ ಪ್ರೈಮ್‌ನಲ್ಲಿ; ಅಪ್ಪು 5 ಸಿನಿಮಾಗಳು ಉಚಿತ ಪ್ರಸಾರ!
ಇದರ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿತ್ತು. ಈಗ ಗಣರಾಜ್ಯೋತ್ಸವದ ಪ್ರಯುಕ್ತ ಸಿನಿಮಾದಿಂದ ವಿಶೇಷ ಪೋಸ್ಟರ್ ಒಂದು ರಿಲೀಸ್ ಆಗಲಿದೆ. ಅಪ್ಪು ಅಗಲಿಕೆ ನೋವಲ್ಲಿ ಕಾಲ ಕಳೆಯುತ್ತಿರುವ ಅಭಿಮಾನಿಗಳಿಗೆ ಈ ವಿಚಾರ ಖುಷಿ ನೀಡಿದೆ.
ಬೆಳಗ್ಗೆ 11.11 ಗಂಟೆಗೆ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಲಿದೆ. ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.
ನಟ ಪುನೀತ್ ನಮ್ಮೊಂದಿಗೆ ಇಲ್ಲವಾಗಿದ್ದರೂ ಅವರ ದನಿಯನ್ನು ಬಳಸಿಕೊಳ್ಳುವ ಉದ್ದೇಶ ಇದೆ. ಪುನೀತ್ ಅವರ ಧ್ವನಿಯನ್ನು ಇಟ್ಟುಕೊಂಡೇ ಏನಾದರೂ ಹೊಸ ಪ್ರಯತ್ನ ಮಾಡಬೇಕು ಎಂಬ ಆಸೆಯನ್ನು ಈ ಹಿಂದೆ ನಿರ್ದೇಶಕರು ವ್ಯಕ್ತಪಡಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.