'ಫ್ಯಾಮಿಲಿ ಪ್ಯಾಕ್' ಶೂಟಿಂಗ್ ಸೆಟ್‌ನಲ್ಲಿ ಪುನೀತ್ ರಾಜ್‌ಕುಮಾರ್!
‘ಸಂಕಷ್ಟಕರ ಗಣಪತಿ’ ಚಿತ್ರ ನಿರ್ದೇಶಕ ಅರ್ಜುನ್ ನಿರ್ದೇಶಿಸುತ್ತಿರುವ ‘ಫ್ಯಾಮಿಲಿ ಪ್ಯಾಕ್’ ಸಿನಿಮಾ ಶೂಟಿಂಗ್ ಸೆಟ್‌ಗೆ ಪುನೀತ್ ರಾಜ್‌ಕುಮಾರ್ ಹಾಗೂ ಅವರ ಪತ್ನಿ ಅಶ್ವಿನಿ ಭೇಟಿ ನೀಡಿದರು.
ಕೊನೆಯ ದಿನದ ಚಿತ್ರೀಕರಣದಲ್ಲಿ ಪಾಲ್ಗೊಂಡ ಪವರ್ ಸ್ಟಾರ್ ಚಿತ್ರತಂಡಕ್ಕೆ ಶುಭ ಕೋರಿದರು.
ಲಿಖಿತ್ ಶೆಟ್ಟಿ ಹಾಗೂ ಅಮೃತಾ ಅಯ್ಯಂಗಾರ್ ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಪುನೀತ್ ರಾಜ್‌ಕುಮಾರ್ ತಮ್ಮ ಪಿಆರ್‌ಕೆ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.
ಬೆಂಗಳೂರಿನ ಅನೇಕ ಕಡೆ ಮೂವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಭರದಿಂದ ಸಾಗಿದೆ.
ನಾಯಕ ಲಿಖಿತ್ ಶೆಟ್ಟಿ, ಅಮೃತ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತಕುಮಾರ್, ಪದ್ಮಜಾರಾವ್, ಶರ್ಮಿತಾ ಗೌಡ, ಸಿಹಿಕಹಿ ಚಂದ್ರು ಮುಂದಿನ ಕಲಾವಿದರು ಅಂದಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು
ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ.
ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆದಿದ್ದಾರೆ.
ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ .