ವಿವಾಹ ವಾರ್ಷಿಕೋತ್ಸವ: ಈ ಸ್ಟಾರ್ ದಂಪತಿ ಮಾಡಿದ್ರು 'ಅಮೂಲ್ಯ'ವಾದ ಕೆಲಸ
ಬಾಲನಟಿಯಾಗಿ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು ನಂತರ ಅನೇಕ ಸ್ಟಾರ್ ನಟರ ಜೊತೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಮದುವೆ ಆದ್ಮೇಲೆ ನಟನೆಗೆ ಬ್ರೇಕ್ ನೀಡಿರುವ ಅಮೂಲ್ಯ ಅವರಿಗೆ ಮೇ 13ರಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ.ಈ ವಿಶೇಷ ದಿನವನ್ನು ದಂಪತಿಗಳಿಬ್ಬರು ವಿಭಿನ್ನ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿದ್ದು ಹೀಗೆ ...
2001 ರಲ್ಲಿ ಡಾ ವಿಷ್ಣುವರ್ಧನ್ ಅವರ ಪರ್ವ ಚಿತ್ರದ ಮೂಲಕ ಬಾಲನಟಿಯಾಗಿ ಪದಾರ್ಪಣೆ ಮಾಡಿದರು.
ಪರ್ವ, ಚಂದು , ಲಾಲಿಹಾಡು ಚಿತ್ರಗಳಲ್ಲಿ ವಿಷ್ಣುವರ್ಧನ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ಹೀಗೆ ಹಲವಾರು ಸ್ಟಾರ್ ನಟರ ಸಿನಿಮಾಗಳಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದಾರೆ.
2007ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಾಯಕಿಯಾಗಿ ಐಸು ಪಾತ್ರದಲ್ಲಿ ಕಾಣಿಸಿಕೊಂಡರು.ಈ ಚಿತ್ರವನ್ನು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ.
ಹತ್ತು ಹಲವು ಸಮಾಜಿ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಅಮೂಲ್ಯ ಜಗದೀಶ್.
2007ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಾಯಕಿಯಾಗಿ ಐಸು ಪಾತ್ರದಲ್ಲಿ ಕಾಣಿಸಿಕೊಂಡರು.ಈ ಚಿತ್ರವನ್ನು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ.
ಪ್ರೇಮಿಸಂ, ಚಿತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯ , ಮಾಸ್ತಿಗುಡಿ, ರಾಮ್ ಲೀಲಾ, ಗಜಕೇಸರಿ, ಖುಷಿಖುಷಿಯಾಗಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ಇವರ ನಟನೆಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ.
ಶ್ರಾವಣಿ ಸುಬ್ರಮಣ್ಯ ಚಿತ್ರದಲ್ಲಿ ಇವರ ಉತ್ತಮ ನಟನೆಗೆ ಸೈಮಾ ಮತ್ತು ಫಿಲಂ ಫೇರ್ ಪ್ರಶಸ್ತಿ ಲಭ್ಯವಾಗಿವೆ.
2017 ರಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರಾದ ರಾಮಚಂದ್ರ ಅವರ ಪುತ್ರ ಜಗದೀಶ್ ಅವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ರಾಜರಾಜೇಶ್ವರ ನಗರದಲ್ಲಿ ಕಾರ್ಪೋರೇಟರ್ ಆಗಿದ್ದ ರಾಜಕಾರಣಿ ಮಗನೊಂದಿಗೆ ದಾಂಪತ್ಯ ಕಾಲಿಟ್ಟ ಅಮೂಲ್ಯ.
RSS ಜೊತೆಗೂಡಿ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ಬಡವರಿಗೆ,ಕಾರ್ಮಿಕರಿಗೆ ಆಹಾರ ಮತ್ತು ಮುಂತಾದ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದರು.
ಕೊರೋನಾ ಲಾಕ್ ಡೌನ್ ನಿಂದಾಗಿ ಈ ವರ್ಷ ಮದುವೆಯ ವಾರ್ಷಿಕೋತ್ಸವವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಈ ಸ್ಟಾರ್ ದಂಪತಿಗಳು ಇತರರಿಗೆ ಮಾದರಿಯಾಗಿದ್ದಾರೆ.
ಈ ವಿಶೇಷ ದಿನದಂದು ರಾಜರಾಜೇಶ್ವರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಮಾಡಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.