ದೇಶದ ಹೆಮ್ಮೆ ಹಿಮಾ ದಾಸ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ..!

First Published Feb 27, 2021, 10:04 AM IST

ನವದೆಹಲಿ: ಇದು ಕಲ್ಲರಳಿ ಹೂವಾದ ಕಥೆ. ಬಡತನದ ಬೇಗೆಯಿಂದ ಬೆಂದು ತನ್ನ ಓಟದ ಮೂಲಕವೇ ಇಂದು ಇಡೀ ದೇಶದ ಮನೆಮಗಳಾಗಿ ಗುರುತಿಸಿಕೊಂಡಿರುವ ಖ್ಯಾತ ಅಥ್ಲೀಟ್‌ ಹಿಮಾ ದಾಸ್‌ ಈಗ ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿ(ಡಿಎಸ್‌ಪಿ)ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇದರೊಂದಿಗೆ ಹಿಮಾ ದಾಸ್‌ ಬಾಲ್ಯದಲ್ಲಿ ಕಂಡಂತಹ ಕನಸು ನನಸಾಗಿದೆ. ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌ ದೇಶದ ಹೆಮ್ಮೆಯ ಕ್ರೀಡಾಪಟುವಿಗೆ ನೇಮಕಾತಿ ಪತ್ರ ನೀಡುವ ಮೂಲಕ ಸನ್ಮಾನಿಸಿದ್ದಾರೆ.