- Home
- Jobs
- State Government Jobs
- ಕರ್ನಾಟಕ ಪೊಲೀಸ್ ನೇಮಕಾತಿ: 3,395 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, 35 ವರ್ಷದವರೆಗೆ ವಯೋಮಿತಿ ಸಡಿಲಿಕೆ!
ಕರ್ನಾಟಕ ಪೊಲೀಸ್ ನೇಮಕಾತಿ: 3,395 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, 35 ವರ್ಷದವರೆಗೆ ವಯೋಮಿತಿ ಸಡಿಲಿಕೆ!
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು (Karnataka State Polce Department) 3395 ಸಿವಿಲ್ ಕಾನ್ಸ್ಟೇಬಲ್ (Civil Police Constable recruitment) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. PUC ಪಾಸಾದ ಅಭ್ಯರ್ಥಿಗಳು ಜುಲೈ 3ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿ ತಿಳಿಯಿರಿ.

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬಯಸುವ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು (KSP) ಖಾಲಿ ಇರುವ 3395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (Civil Police Constable) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ:
ಹುದ್ದೆಯ ಹೆಸರು: ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) - ಮಿಕ್ಕುಳಿದ ವೃಂದ
ಒಟ್ಟು ಹುದ್ದೆಗಳು: 3395
ವೇತನ ಶ್ರೇಣಿ: ತಿಂಗಳಿಗೆ ರೂ. 37,500 ರಿಂದ ರೂ. 76,100/-
ವಿದ್ಯಾರ್ಹತೆ (Educational Qualification):
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಕಂಡ ವಿದ್ಯಾರ್ಹತೆ ಹೊಂದಿರಬೇಕು:
ಸಿಬಿಎಸ್‌ಇ/ ಐಸಿಎಸ್‌ಇ/ ಎನ್‌ಐಒಎಸ್/ ರಾಜ್ಯ ಮಂಡಳಿಯಿಂದ ಪಿಯುಸಿ (PUC) ಅಥವಾ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಐಟಿಐ (2 ವರ್ಷ) ಅಥವಾ ಡಿಪ್ಲೊಮಾ ಅಭ್ಯರ್ಥಿಗಳು ಸಹ ಅಧಿಸೂಚನೆಯಲ್ಲಿನ ನಿಬಂಧನೆಗಳಂತೆ ಅರ್ಹರಿರುತ್ತಾರೆ.
ವಯೋಮಿತಿ (Age Limit):
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:
ಸಾಮಾನ್ಯ ವರ್ಗ (GM): 33 ವರ್ಷಗಳು
SC/ ST/ ಹಿಂದುಳಿದ ವರ್ಗಗಳು (2A, 2B, 3A, 3B): 35 ವರ್ಷಗಳು
ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳು: 38 ವರ್ಷಗಳು
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ (2A, 2B, 3A, 3B): ರೂ. 750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: ರೂ. 500/-
ನೇಮಕಾತಿ ಹಂತಗಳು:
ಲಿಖಿತ ಪರೀಕ್ಷೆ (Written Exam): 100 ಅಂಕಗಳ ವಸ್ತುನಿಷ್ಠ ಮಾದರಿಯ ಪರೀಕ್ಷೆ.
ದೈಹಿಕ ಸಹಿಷ್ಣುತೆ ಮತ್ತು ಪ್ರಮಾಣಿತ ಪರೀಕ್ಷೆ (ET & PST): ಓಟ, ಉದ್ದ ಜಿಗಿತ/ಎತ್ತರ ಜಿಗಿತ, ಮತ್ತು ಗುಂಡು ಎಸೆತ.
ವೈದ್ಯಕೀಯ ಪರೀಕ್ಷೆ: ಅಂತಿಮ ಆಯ್ಕೆ ಪಟ್ಟಿಯಲ್ಲಿರುವವರಿಗೆ ವೈದ್ಯಕೀಯ ತಪಾಸಣೆ ನಡೆಯಲಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ಜೂನ್ 08, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 03, 2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 04, 2026
ಲಿಖಿತ ಪರೀಕ್ಷೆಯ ದಿನಾಂಕ: ಆಗಸ್ಟ್ 02, 2026 (ಬೆಳಿಗ್ಗೆ 10:30 ರಿಂದ 12:00 ರವರೆಗೆ)
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಈ ಕೆಳಗಿನ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು:
https://cetonline.karnataka.gov.in/kea/
ಅಥವಾ https://ksp-recruitment.in/
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

