ಕರ್ನಾಟಕದಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಪ್ರಕರಣಗಳು; ಇಲ್ಲಿದೆ ಇಂದಿನ ಕೊರೊನಾ ರಿಪೋರ್ಟ್
ಕರ್ನಾಟಕದಲ್ಲಿ ಇಂದು 37 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ, ಬೆಂಗಳೂರಿನಲ್ಲಿ 35 ಪ್ರಕರಣಗಳು ದಾಖಲಾಗಿವೆ.

ರಾಜ್ಯ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವರ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿಂದು ಹೊಸ 37 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಎಲ್ಲೆಲ್ಲಿ ಎಷ್ಟು ಪ್ರಕರಣಗಳು ಎಂಬುದರ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಬಿಡುಗಡೆ ಮಾಡಿದೆ.
ರಾಜಧಾನಿ ಬೆಂಗಳೂರಿನಲ್ಲಿಯೇ ಹೊಸದಾಗಿ 35 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ತಲಾ ಒಂದು ಕೊರೊನಾ ಸೋಂಕಿತರು ಪತ್ತೆಯಾಗಿವೆ. ಇಂದು ಒಟ್ಟು 191 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 80 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 73, ಬೆಂಗಳೂರು ಗ್ರಾಮಾಂತರದಲ್ಲಿ 2, ದಕ್ಷಿಣ ಕನ್ನಡದಲ್ಲಿ 3 ಮತ್ತು ಮೈಸೂರಿನಲ್ಲಿ ಒಂದು ಸಕ್ರಿಯ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಮೂವರು ಮತ್ತು ಬಳ್ಳಾರಿಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ.
ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ನಾನು ಮನವಿ ಮಾಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಾಲೆಗೆ ಬರುವ ಮಕ್ಕಳಿಗೆ ಜ್ವರ, ಕೆಮ್ಮು ಸೇರಿ ಇತರೆ ಕೋವಿಡ್ ಲಕ್ಷಣಗಳಿದ್ದಲ್ಲಿ ಅಂಥ ಮಕ್ಕಳಿಗೆ ರಜೆ ಕೊಟ್ಟು ಮನೆಗೆ ಕಳುಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ಗರ್ಭಿಣಿಯರು, ಅನಾರೋಗ್ಯ ಪೀಡಿತರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

