ಆನೇಕಲ್: ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗು ನಿಗೂಢ ಸಾವು
ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ತಾಯಿ ಲಾವಣ್ಯ ಮತ್ತು ಅವರ 8 ವರ್ಷದ ಮಗಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಸೂರ್ಯಸಿಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆನೇಕಲ್: ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗು ಸಾವನ್ನಪ್ಪಿದ ಆಘಾತಕಾರಿ ಘಟನೆ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಲಾವಣ್ಯ ಹಾಗೂ ಅವರ 8 ವರ್ಷದ ಹೆಣ್ಣು ಮಗು ಸಾವನ್ನಪ್ಪಿದವರು.
ಲಾವಣ್ಯ ಅವರು ತಮಿಳುನಾಡು ಮೂಲದವರಾಗಿದ್ದು, 2017ರಲ್ಲಿ ಸಂಪತ್‌ಕುಮಾರ್ ಅವರ ಜೊತೆ ಅವರ ಮದುವೆ ನಡೆದಿತ್ತು. ದಂಪತಿ ಸೂರ್ಯ ಸಿಟಿ ಪೋಲೀಸ್ ಠಾಣಾ ವ್ಯಾಪ್ತಿಯ ಲಕ್ಷೀ ಸಾಗರ ಗ್ರಾಮದಲ್ಲಿ ನೆಲೆಸಿದ್ದರು.
ಆದರೆ ನಿನ್ನೆ ತಾಯಿ ಮಗು ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಘಟನೆಗೆ ಸಂಬಂಧಿಸಿದಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಟ್ರೋಲಿಗರಿಗೆ ಅಂಕಗಳ ಮೂಲಕವೇ ತಿರುಗೇಟು ನೀಡಿದ ಪ್ರಾಚಿ ನಿಗಮ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

