MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಅರಬ್ಬೀ ಸಮುದ್ರದಲ್ಲಿ ವೇಗ ಪಡೆದ ಮುಂಗಾರು ಮಾರುತ; ರಾಜ್ಯದ 16 ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುನ್ಸೂಚನೆ!

ಅರಬ್ಬೀ ಸಮುದ್ರದಲ್ಲಿ ವೇಗ ಪಡೆದ ಮುಂಗಾರು ಮಾರುತ; ರಾಜ್ಯದ 16 ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುನ್ಸೂಚನೆ!

ಅರಬ್ಬೀ ಸಮುದ್ರ ದಲ್ಲಿ ನೈರುತ್ಯ ಮಾರುತಗಳು ವೇಗ ಪಡೆದಿದ್ದು ಕರ್ನಾಟಕಕ್ಕೆ ಶೀಘ್ರದಲ್ಲೇ ಮುಂಗಾರು  ಪ್ರವೇಶಿಸಲಿದೆ. ಅದರ ಪೂರ್ವಭಾವಿಯಾಗಿ ರಾಜ್ಯದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿಮ್ಮ ಜಿಲ್ಲೆ ಇದೆಯೇ ನೋಡಿ.

2 Min read
Author : Sathish Kumar KH
Published : May 18 2026, 08:11 PM IST
Share this Photo Gallery
  • FB
  • TW
  • Linkdin
  • Whatsapp
18
ರಾಜ್ಯಾದ್ಯಂತ ಭಾರೀ ಮಳೆ
Image Credit : Asianet News

ರಾಜ್ಯಾದ್ಯಂತ ಭಾರೀ ಮಳೆ

ನೈರುತ್ಯ ಮುಂಗಾರು (Southwest Monsoon) ಅರಬ್ಬೀ ಸಮುದ್ರ (Arabian sea) ಮತ್ತು ಬಂಗಾಳ ಕೊಲ್ಲಿಯ (Bay of Bengal) ಹಲವು ಭಾಗಗಳಲ್ಲಿ ವೇಗವಾಗಿ ಮುನ್ನಡೆಯುತ್ತಿದ್ದು, ಕರ್ನಾಟಕಕ್ಕೂ ಶೀಘ್ರದಲ್ಲೇ ಮಳೆರಾಯನ ಆಗಮನವಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ಬಾರಿ ಮುಂಗಾರು ಮಳೆಯ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rain) ಮತ್ತು ಭಾರಿ ಗಾಳಿ ಬೀಸುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred
28
ಮುಂಗಾರು ಪ್ರವೇಶದ ದಿನಾಂಕ ಪ್ರಕಟ:
Image Credit : @bykarthikreddy/X

ಮುಂಗಾರು ಪ್ರವೇಶದ ದಿನಾಂಕ ಪ್ರಕಟ:

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ನೈರುತ್ಯ ಮುಂಗಾರು ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಸದ್ಯ ನೈರುತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಮುಂದಿನ 3-4 ದಿನಗಳಲ್ಲಿ ಇವು ಮತ್ತಷ್ಟು ಚುರುಕುಗೊಳ್ಳಲಿವೆ.

Related Articles

Related image1
ಸಿಡಿಲ ಮಳೆಗೆ ರಾಜ್ಯದಲ್ಲಿ 3 ಬಲಿ; 10 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮುಂಗಾರು ಪೂರ್ವ ಮಳೆ
Related image2
ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!
38
ಇಂದು ರಾತ್ರಿ ಭಾರೀ ಮಳೆ ಎಚ್ಚರಿಕೆ:
Image Credit : Asianet News

ಇಂದು ರಾತ್ರಿ ಭಾರೀ ಮಳೆ ಎಚ್ಚರಿಕೆ:

ಮೇ 18 ಮತ್ತು 19ರಂದು ರಾಜ್ಯದ ಕೆಲವು ಆಯ್ದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

48
ಜಿಲ್ಲಾವಾರು ಹವಾಮಾನ ಮುನ್ಸೂಚನೆ:
Image Credit : Asianet News

ಜಿಲ್ಲಾವಾರು ಹವಾಮಾನ ಮುನ್ಸೂಚನೆ:

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿಯ ಅಬ್ಬರವಿರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು: ಬೆಳಗಾವಿ ಜಿಲ್ಲೆಯಲ್ಲಿ ಗುಡುಗು ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ. ಧಾರವಾಡ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

58
ದಕ್ಷಿಣ ಒಳನಾಡಲ್ಲಿ ಹೆಚ್ಚಿನ ಮಳೆ
Image Credit : Asianet News

ದಕ್ಷಿಣ ಒಳನಾಡಲ್ಲಿ ಹೆಚ್ಚಿನ ಮಳೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗದಲ್ಲಿ ಹಗುರ ಮಳೆಯಾಗಲಿದೆ.

68
ಬೆಂಗಳೂರು ಹವಾಮಾನ ಹೇಗಿರಲಿದೆ?
Image Credit : Asianet News

ಬೆಂಗಳೂರು ಹವಾಮಾನ ಹೇಗಿರಲಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರಲಿದೆ. ಮಧ್ಯಾಹ್ನದ ನಂತರ ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 33°C ರಿಂದ 34°C ಹಾಗೂ ಕನಿಷ್ಠ ತಾಪಮಾನವು 22°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

78
ರೈತರಿಗೆ ಮತ್ತು ಸಾರ್ವಜನಿಕರಿಗೆ ಸೂಚನೆ:
Image Credit : Asianet News

ರೈತರಿಗೆ ಮತ್ತು ಸಾರ್ವಜನಿಕರಿಗೆ ಸೂಚನೆ:

ಗುಡುಗು ಮಿಂಚಿನ ಸಂದರ್ಭದಲ್ಲಿ ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಭಾರಿ ಗಾಳಿ ಬೀಸುವ ಕಾರಣ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸೂಚಿಸಲಾಗಿದೆ. ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕ.

88
ಕೃಷಿ ಪೂರಕ ವಾತಾವರಣ
Image Credit : Asianet News

ಕೃಷಿ ಪೂರಕ ವಾತಾವರಣ

ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯ ಆರ್ಭಟ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಮಳೆ
ಮಳೆ
ಹವಾಮಾನ ಮುನ್ಸೂಚನೆ
ಕರ್ನಾಟಕ ಹವಾಮಾನ

Latest Videos
Recommended Stories
Recommended image1
ಕಾರಲ್ಲಿ ಎಸಿ ಹಾಕ್ಕೊಂಡು ಮಲಗುವ ಮುನ್ನ ಎಚ್ಚರ! ಬೆಂಗಳೂರಲ್ಲಿ ಗ್ಲಾಸ್ ಏರಿಸಿ ಮಲಗಿದ್ದ ಕ್ಯಾಬ್ ಚಾಲಕ ಕುಳಿತಲ್ಲೇ ಸಾವು
Recommended image2
ಕರ್ನಾಟಕಕ್ಕೆ ವಂದೇ ಭಾರತ್ ಸ್ಲೀಪರ್, ಬುಲೆಟ್ ಟ್ರೈನ್: ಹೈದರಾಬಾದ್‌ಗೆ ಕೇವಲ 2 ಗಂಟೆ, ಚೆನ್ನೈಗೆ 75 ನಿಮಿಷ ಅಷ್ಟೇ!
Recommended image3
ಜೈಲಧಿಕಾರಿಗಳಿಗೆ ತಲೆಬಾಗಿದ ನಟ ದರ್ಶನ್: ಜೈಲಿನಲ್ಲಿ ಒಂದೇ ಒಂದು ಬಾರಿ ಹೆಂಡತಿ-ಮಗನ ಒಳ ಸಂದರ್ಶನಕ್ಕೆ ಮನವಿ!
Related Stories
Recommended image1
ಸಿಡಿಲ ಮಳೆಗೆ ರಾಜ್ಯದಲ್ಲಿ 3 ಬಲಿ; 10 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮುಂಗಾರು ಪೂರ್ವ ಮಳೆ
Recommended image2
ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved