- Home
- News
- State
- ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು
ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಫಲಕ ಬ್ಯಾನರ್‌ಗಳ ತೆರವು
ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ, ಬಾಗಲಕೋಟೆ ನಗರದಲ್ಲಿ ರಾಜಕೀಯ ನಾಯಕರ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗುತ್ತಿದೆ.ಎಚ್ ವೈ ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಉಪಚುನಾವಣೆಗಳು ನಡೆಯುತ್ತಿವೆ.

ಬಾಗಲಕೋಟೆ ನಗರದಲ್ಲಿ ಬ್ಯಾನರ್ ತೆರವು
ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿವೆ. ರಾಜಕೀಯ ನಾಯಕರ ಭಾವಚಿತ್ರ, ಸರ್ಕಾರಿ ಜಾಹೀರಾತುಗಳ ನಾಮಫಲಕ, ಬ್ಯಾನರ್‌ಗಳ ತೆರವು ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಬದಲು ಈ ಬಾರಿ ಕೇವಲ 2 ಹಂತಗಳಲ್ಲಿ ಮತದಾನ ಏಕೆ?
ಪ್ಲೆಕ್ಸ್, ಬ್ಯಾನರ್‌ಗಳ ತೆರವು
ಬಾಗಲಕೋಟೆ ನಗರಸಭೆ ಸಿಬ್ಬಂದಿ, ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂಭಾಗ ಸೇರಿ ವಿವಿಧೆಡೆ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸುತ್ತಿದ್ದಾರೆ.
ಇದನ್ನೂ ಓದಿ: ಸತ್ಯ ಬಯಲಾಗುವ ಮೊದಲೇ ಸಂಭ್ರಮಿಸಿ ಪೇಚಿಗೆ ಸಿಲುಕಿದ ಊರ ಜನ: ಆಗಿದ್ದೇನು?
ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
ಕೇಂದ್ರ ಚುನಾವಣಾ ಆಯೋಗವು ಪಂಚರಾಜ್ಯಗಳ ಚುನಾವಣೆಯೂ ಸೇರಿದಂತೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಮಾಡಿರುವುದರಿಂದ ಈ ಎರಡು ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಇದನ್ನೂ ಓದಿ: ಸಿಎಂ ಆಗಮನಕ್ಕೆ ಕೆಲ ನಿಮಿಷ ಮೊದಲು ಹೆಲಿಪ್ಯಾಡ್‌ಗೆ ನುಗ್ಗಿದ್ದ ಗೂಳಿ: ಭದ್ರತೆಗಿದ್ದ ಪೊಲೀಸರನ್ನೇ ಓಡಿಸಿದ ಹೋರಿ
ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಚುನಾವಣೆ
ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹಾಗೆಯೇ ಕರ್ನಾಟಕದ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರ ಬರಲಿದೆ.
ಇದನ್ನೂ ಓದಿ: ಬಹು ನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ
ಶಾಮನೂರು ಶಿವಶಂಕರಪ್ಪ ಹಾಗೂ ಹೆಚ್ ವೈ ಮೇಟಿ
ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ನಿಧನದಿಂದಾಗಿ ಈ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ನಿಧನದಿಂದ ಈ ಎರಡು ಕ್ಷೇತ್ರಗಳು ತೆರವಾಗಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

