ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು: ಬೈಕ್‌ನಿಂದ ಬಿದ್ದವರ ಮೇಲೆ ಹರಿದ ಲಾರಿ
ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಲಾರಿ ಹರಿದು ಅಜ್ಜ ಮೊಮ್ಮಗಳು ಮೃತಪಟ್ಟಿದ್ದಾರೆ. ಪರೀಕ್ಷೆ ಮುಗಿಸಿ ಮೊಮ್ಮಗಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದಾಗ, ರಸ್ತೆಯಲ್ಲಿದ್ದ ರಾಗಿಯ ಮೇಲೆ ಬೈಕ್ ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬಳ್ಳಾರಿ : ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ಅಜ್ಜ, ಮೊಮ್ಮಗಳು ಸಾವನ್ನಪ್ಪಿದ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಅಜ್ಜ ಮೊಮ್ಮಗಳು ಪ್ರಯಾಣಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಬಿದ್ದಾಗ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಪರಿಣಾಮ ಅಜ್ಜ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಈಶ್ವರಪ್ಪ ಹಾಗೂ ಮೊಮ್ಮಗಳು 14 ವರ್ಷದ ಸೃಷ್ಟಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಯಾದಗಿರಿ: ಸುರಪುರ ಬಳಿ ಬೈಕ್‌ಗೆ ಕ್ರೂಸರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಮೃತ ಬಾಲಕಿ ಸೃಷ್ಟಿ ಕರ್ನಾರ್ ಹಟ್ಟಿ ಗ್ರಾಮದವರಾಗಿದ್ದು, ಕೂಡ್ಲಿಗಿ ಪಟ್ಟಣದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು.
ಇದನ್ನೂ ಓದಿ: ಬಾಗಲಕೋಟೆ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ: ಲಕ್ಷಾಂತರ ಮೌಲ್ಯದ ಆಸ್ತಿ ಹಾನಿ
ವಾರ್ಷಿಕ ಪರೀಕ್ಷೆ ಮುಗಿದ ಕಾರಣ ಸೃಷ್ಟಿಯನ್ನು ಅಜ್ಜ ಬೈಕಿನಲ್ಲಿ ಕರೆದುಕೊಂಡು ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿರುವಾಗ ಕ್ಯಾಸನಕೆರೆ ಹೆದ್ದಾರಿಯಲ್ಲಿ ರಸ್ತೆ ಮೇಲೆ ಹಾಕಿದ್ದ ರಾಗಿ ಮೇಲೆ ಸಾಗುವಾಗ ಬೈಕ್ ನಿಯಂತ್ರಣ ತಪ್ಪಿ ಇಬ್ಬರು ಕೆಳಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಒಣ ಮೇವು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ
ಇದೇ ವೇಳೆ ಹಿಂದೆ ಬಂದ ಲಾರಿ ಇಬ್ಬರ ಮೇಲೆ ಹರಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅಜ್ಜ ಮೊಮ್ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊಪ್ಪಳ: ಕೌಟುಂಬಿಕ ಕಲಹ, ಇಬ್ಬರು ಮಕ್ಕಳ ಸಮೇತ ಕೆರೆಗೆ ಹಾರಿದ ಅಮ್ಮ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

