MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬೆಂಗಳೂರು ಬಿಲ್ಡಲ್ ಮನೆಯಿಂದ ಕದ್ದ ₹18 ಕೋಟಿ ಚಿನ್ನ ಎಲ್ಲಣ್ಣ? ನೇಪಾಳಕ್ಕೋದ್ರೂ ಕಳ್ಳರು ಸಿಗ್ಲಿಲ್ಲ ಎಂದ ಪೊಲೀಸಣ್ಣ!

ಬೆಂಗಳೂರು ಬಿಲ್ಡಲ್ ಮನೆಯಿಂದ ಕದ್ದ ₹18 ಕೋಟಿ ಚಿನ್ನ ಎಲ್ಲಣ್ಣ? ನೇಪಾಳಕ್ಕೋದ್ರೂ ಕಳ್ಳರು ಸಿಗ್ಲಿಲ್ಲ ಎಂದ ಪೊಲೀಸಣ್ಣ!

ಬೆಂಗಳೂರಿನ ಯಮಲೂರಿನಲ್ಲಿ ನೇಪಾಳಿ ಮನೆಗೆಲಸದವರು ₹18 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಆಗಿದ್ದರು. ಆರೋಪಿಗಳ ಪತ್ತೆಗಾಗಿ ನೇಪಾಳಕ್ಕೆ ತೆರಳಿದ್ದ ಪೊಲೀಸರ ತಂಡ, ಒಂದು ತಿಂಗಳ ಸತತ ಹುಡುಕಾಟದ ನಂತರ ಯಾವುದೇ ಸುಳಿವು ಸಿಗದೆ ಬರಿಗೈಯಲ್ಲಿ ಹಿಂದಿರುಗಿದೆ.

2 Min read
Author : Sathish Kumar KH
Published : Mar 05 2026, 11:58 AM IST
Share this Photo Gallery
  • FB
  • TW
  • Linkdin
  • Whatsapp
15
₹18 ಕೋಟಿ ಮೌಲ್ಯದ ಚಿನ್ನ ಎಗರಿಸಿದ ನೇಪಾಳಿ ಮನೆಗೆಲಸದವರು
Image Credit : Asianet News

₹18 ಕೋಟಿ ಮೌಲ್ಯದ ಚಿನ್ನ ಎಗರಿಸಿದ ನೇಪಾಳಿ ಮನೆಗೆಲಸದವರು

ಬೆಂಗಳೂರು (ಮಾ.05): ಸಿಲಿಕಾನ್ ಸಿಟಿ ಬೆಂಗಳೂರಿನ ಮಾರತ್‌ಹಳ್ಳಿ ಸಮೀಪದ ಯಮಲೂರಿನಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣದ ತನಿಖೆ ಈಗ ಅಕ್ಷರಶಃ ಕಗ್ಗಂಟಾಗಿ ಪರಿಣಮಿಸಿದೆ. ಮನೆಯೊಂದರಿಂದ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ನೇಪಾಳಿ ಮೂಲದ ಖದೀಮರ ಪತ್ತೆಗಾಗಿ ನೇಪಾಳಕ್ಕೆ ತೆರಳಿದ್ದ ವೈಟ್‌ಫೀಲ್ಡ್ ವಿಭಾಗದ ಪೊಲೀಸರ ನಾಲ್ಕು ತಂಡಗಳು ಒಂದು ತಿಂಗಳ ಸತತ ಹುಡುಕಾಟದ ನಂತರ ಬರಿಗೈಲಿ ಮರಳಿವೆ.

25
ಒಂದು ತಿಂಗಳು ನೇಪಾಳದ ಗುಡ್ಡಗಾಡುಗಳಲ್ಲಿ ಶೋಧ:
Image Credit : Asianet News

ಒಂದು ತಿಂಗಳು ನೇಪಾಳದ ಗುಡ್ಡಗಾಡುಗಳಲ್ಲಿ ಶೋಧ:

ಕಳೆದ ಜನವರಿ 25ರಂದು ಈ ಭೀಕರ ದರೋಡೆ ನಡೆದಿತ್ತು. ಕೃತ್ಯ ನಡೆದು ಒಂದೂವರೆ ತಿಂಗಳು ಕಳೆದರೂ ಆರೋಪಿಗಳ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸರು ನೇಪಾಳದ ಗಡಿ ದಾಟಿ ಅಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳ ಫೋಟೋ ಹಿಡಿದುಕೊಂಡು ನೇಪಾಳದ ಗಂಜ್ ಹಾಗೂ ಅಕ್ಕಪಕ್ಕದ ಗುಡ್ಡಗಾಡು ಪ್ರದೇಶಗಳಲ್ಲಿ ಪೊಲೀಸರು ಮನೆಮನೆಗೂ ತೆರಳಿ ತಪಾಸಣೆ ನಡೆಸಿದ್ದಾರೆ.

ಅತ್ಯಂತ ಕಠಿಣವಾದ ಭೌಗೋಳಿಕ ಪರಿಸ್ಥಿತಿಗಳ ನಡುವೆಯೂ ನಡೆಸಿದ ಈ ಕಾರ್ಯಾಚರಣೆಯ ವಿಡಿಯೋಗಳು ಈಗ ಲಭ್ಯವಾಗಿವೆ. ಆದರೆ, ಕಿಲೆಬಾಜ ಕಳ್ಳರು ಪೊಲೀಸರಿಗೆ ಯಾವುದೇ ಸುಳಿವು ಬಿಟ್ಟುಕೊಡದೆ ನಾಪತ್ತೆಯಾಗಿದ್ದಾರೆ.

Related Articles

Related image1
ತಿರುಪತಿಗೆ ತೆರಳಿದ್ದಾಗ ಬಿಜೆಪಿ ನಾಯಕನ ಮನೆ ದೋಚಿದ ನೇಪಾಳಿ ವಾಚ್‌ಮನ್‌ ದಂಪತಿ
Related image2
ಪಕ್ಕಾ ಪ್ಲಾನ್ ಮಾಡಿ ಬೆಂಗಳೂರಿನ ಮನೆಯಿಂದ 18 ಕೋಟಿ ರೂ ಚಿನ್ನಾಭರಣ ಕಳವು, ಕೆಲಸದವರ ಕೈಚಳಕ
35
18 ಕೋಟಿ ಚಿನ್ನ ಸಾಗಿಸಿದ ರೋಚಕ ಹಾದಿ
Image Credit : Asianet News

18 ಕೋಟಿ ಚಿನ್ನ ಸಾಗಿಸಿದ ರೋಚಕ ಹಾದಿ

ಬೆಂಗಳೂರಿನಿಂದ 18 ಕೋಟಿ ಮೌಲ್ಯದ ಚಿನ್ನವನ್ನು ಈ ಗ್ಯಾಂಗ್ ನೇಪಾಳಕ್ಕೆ ಸಾಗಿಸಿದ ಹಾದಿ ಸಿನಿಮಾ ಕಥೆಯನ್ನೂ ಮೀರಿಸುವಂತಿದೆ.

ತಾಂತ್ರಿಕ ದಾಖಲೆಗಳ ಪ್ರಕಾರ ಆರೋಪಿಗಳ ಪಯಣ ಹೀಗಿತ್ತು:

ಜನವರಿ 25 ಮುಂಜಾನೆ: ದರೋಡೆ ಮುಗಿಸಿ ಯಮಲೂರಿನಿಂದ ಬಿಎಂಟಿಸಿ ಬಸ್ ಏರಿದ ಗ್ಯಾಂಗ್, ಮಾರತ್‌ಹಳ್ಳಿ ಬ್ರಿಡ್ಜ್ - ಟಿನ್ ಫ್ಯಾಕ್ಟರಿ - ರಿಂಗ್ ರೋಡ್ - ಹೆಬ್ಬಾಳ ಮಾರ್ಗವಾಗಿ ಯಶವಂತಪುರ ತಲುಪಿತು.

ಯಶವಂತಪುರ ಟು ಮುಂಬೈ: ಯಶವಂತಪುರದಿಂದ ಖಾಸಗಿ ಬಸ್ ಮೂಲಕ ನೇರವಾಗಿ ಮಹಾರಾಷ್ಟ್ರದ ಮುಂಬೈಗೆ ಪರಾರಿಯಾದರು.

ಮುಂಬೈ ಟು ಲಕ್ನೋ: ಮುಂಬೈನಿಂದ ರೈಲು ಅಥವಾ ಬಸ್ ಮೂಲಕ ಉತ್ತರ ಪ್ರದೇಶದ ಲಕ್ನೋ ತಲುಪಿದರು.

ಬಾರ್ಡರ್ ದಾಟಿದ್ದು ಹೀಗೆ: ಲಕ್ನೋದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ 'ರುಪಾಡಿಯಾ' ಎಂಬ ಗಡಿ ಪ್ರದೇಶಕ್ಕೆ ತೆರಳಿದ ಗ್ಯಾಂಗ್, ಅಲ್ಲಿನ ಅತೀ ಸೂಕ್ಷ್ಮ ಹಾಗೂ ಕಳ್ಳದಾರಿಗಳ ಮೂಲಕ ನೇಪಾಳಕ್ಕೆ ಪ್ರವೇಶ ಮಾಡಿದೆ.

ಅಂತಿಮ ತಾಣ: ಚಿನ್ನದ ದೊಡ್ಡ ಚೀಲದೊಂದಿಗೆ ನೇಪಾಳದ 'ಗಂಜ್' ಎಂಬ ಪ್ರದೇಶಕ್ಕೆ ತಲುಪಿದ ಆರೋಪಿಗಳು ಅಲ್ಲಿಂದ ಎಲ್ಲಿಗೆ ಹೋದರು ಎಂಬುದು ಈಗ ಯಕ್ಷಪ್ರಶ್ನೆಯಾಗಿದೆ.

45
ಪೊಲೀಸರಿಗೆ ಎದುರಾದ ಸವಾಲು
Image Credit : Asianet News

ಪೊಲೀಸರಿಗೆ ಎದುರಾದ ಸವಾಲು

ನೇಪಾಳದಲ್ಲಿ ಸ್ಥಳೀಯ ಪೊಲೀಸರ ಸಹಕಾರ ಪಡೆದರೂ, ಆರೋಪಿಗಳು ವಾಸಿಸುವ ಪ್ರದೇಶಗಳು ಅತ್ಯಂತ ದುರ್ಗಮವಾಗಿದ್ದವು. ಅಲ್ಲದೆ, ನೇಪಾಳಿ ಗ್ಯಾಂಗ್‌ಗಳು ಇಂತಹ ಕೃತ್ಯವೆಸಗಿ ತಮ್ಮ ಮೂಲ ಹಳ್ಳಿಗಳಿಗೆ ಸೇರಿದ ಮೇಲೆ ಅವರನ್ನು ಪತ್ತೆ ಹಚ್ಚುವುದು ಅಸಾಧ್ಯ ಎಂಬಂತಾಗಿದೆ. ಸದ್ಯಕ್ಕೆ 18 ಕೋಟಿ ಮೌಲ್ಯದ ಚಿನ್ನವನ್ನು ರಿಕವರಿ ಮಾಡುವ ಪೊಲೀಸರ ಕನಸು ಭಗ್ನಗೊಂಡಂತಿದ್ದು, ಬರಿಗೈಲಿ ವಾಪಸ್ಸಾದ ತಂಡ ಈಗ ಮುಂದಿನ ಕಾನೂನು ಹಾದಿಯ ಬಗ್ಗೆ ಚರ್ಚಿಸುತ್ತಿದೆ.

55
ಮನೆ ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಎಚ್ಚರ
Image Credit : Asianet News

ಮನೆ ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಎಚ್ಚರ

ರಾಜಧಾನಿಯಲ್ಲಿ ಕೆಲಸಕ್ಕೆ ಸೇರಿಕೊಳ್ಳುವ ನೇಪಾಳಿ ಮೂಲದ ಕೆಲಸಗಾರರ ಪೂರ್ವಾಪರ ವಿಚಾರಿಸದೆ ಮನೆಯೊಳಗೆ ಬಿಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಈ 18 ಕೋಟಿ ರೂಪಾಯಿ ದರೋಡೆ ಪ್ರಕರಣ ಒಂದು ದೊಡ್ಡ ಪಾಠವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಬೆಂಗಳೂರು
ಚಿನ್ನದ ಕಳ್ಳತನ
ಚಿನ್ನ
ನೇಪಾಳ

Latest Videos
Recommended Stories
Recommended image1
ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ: ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!
Recommended image2
KAS ಪರೀಕ್ಷೆ ಅಕ್ರಮ 24 ಗಂಟೆಯಲ್ಲಿ ತನಿಖಾ ವರದಿ ಕೊಟ್ಟ KPSC; 'ಅಕ್ರಮ ನಡೆದಿಲ್ಲ, ತನಿಖಾ ಸಮಿತಿ ಅಗತ್ಯವಿಲ್ಲ'
Recommended image3
ಬೆಂಗಳೂರು ಏರ್‌ಪೋರ್ಟ್‌ ವಿಶ್ವದಲ್ಲೇ ಬೆಸ್ಟ್‌: ಅರೈವಲ್ಸ್‌ನಲ್ಲಿ ಸತತ 4ನೇ ವರ್ಷ ಈ ಬಿರುದು
Related Stories
Recommended image1
ತಿರುಪತಿಗೆ ತೆರಳಿದ್ದಾಗ ಬಿಜೆಪಿ ನಾಯಕನ ಮನೆ ದೋಚಿದ ನೇಪಾಳಿ ವಾಚ್‌ಮನ್‌ ದಂಪತಿ
Recommended image2
ಪಕ್ಕಾ ಪ್ಲಾನ್ ಮಾಡಿ ಬೆಂಗಳೂರಿನ ಮನೆಯಿಂದ 18 ಕೋಟಿ ರೂ ಚಿನ್ನಾಭರಣ ಕಳವು, ಕೆಲಸದವರ ಕೈಚಳಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved