ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಹಲೆವೆಡೆ ಭಾರೀ ಮಳೆ ಸೂಚನೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಲ್ಲಿ ಸದ್ಯ ಮೋಡ ಮುಸುಕಿದ ವಾತಾವರಣವಿದೆ. ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿಗೆ ಯೆಲ್ಲೋ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಹಲೆವೆಡೆ ಭಾರಿ ಮಳೆಯಾಗಿದೆ. ಗಾಳಿ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಇದೇ ವೇಳೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ವಾಯುಭಾರ ಕುಸಿತದಿಂದ ರಾಜ್ಯದ ಹಲೆವೆಡೆ ಭಾರಿ ಮಳೆ
ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ವೈಪರಿತ್ಯವಾಗಿದೆ. ಪರಿಣಾಮ ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಜೋರು ಮಳೆ ಮುನ್ಸೂಚನೆ ನೀಡಲಾಗಿದೆ.
ಮಳೆ ಜೊತೆ 30 ರಿಂದ 40 ಕಿಮಿ ವೇಗದಲ್ಲಿ ಗಾಳಿ
ಒಳನಾಡು ಕರಾವಳಿ ಪ್ರದೇಶದಲ್ಲಿ ಮಳೆ ಜೊತೆಗೆ ಗಂಟೆಗೆ 30ರಿಂದ 40ಕಿ.ಮೀ ವೇಗ ದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿ, ಕೊಡಗು, ಚಿಕ್ಕಮಗಳೂರುಸೇರಿದಂತೆ ಕೆಲ ಭಾಗದಲ್ಲಿ ಮಳೆ ಹಾಗೂ ಗಾಳಿ ಜನರನ್ನು ತೀವ್ರ ಕಂಗಾಲು ಮಾಡಲಿದೆ
ಯೆಲ್ಲೋ ಅಲರ್ಟ್ ಜಿಲ್ಲೆ
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ & ದಕ್ಷಿಣ ಕನ್ನಡ , ಚಿಕ್ಕಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ , ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜೆಲ್ಲಿಗಳಲಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿಗೆ ಎರಡು ದಿನ ಯೆಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಎರಡೂ ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಸೂಚಿಸಿದೆ. ಇದರ ಜೊತೆಗೆ ಕೇರಳಕ್ಕೆ ಮೇ.26ರಂದು ಮುಂಗಾರು ಪ್ರವೇಶವಾಗುವುದರಿಂದ ರಾಜ್ಯದಲ್ಲಿ ಮಳೆಗಾಲ ಆರಂಭಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

