MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬೆಂಗಳೂರು, 2 ಗಂಟೆಯಲ್ಲಿ 78MM ಮಳೆ 50ಕ್ಕೂ ಹೆಚ್ಚು ಮರ ಧರಶಾಹಿ, ಪ್ರಾಣಹಾನಿ!

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬೆಂಗಳೂರು, 2 ಗಂಟೆಯಲ್ಲಿ 78MM ಮಳೆ 50ಕ್ಕೂ ಹೆಚ್ಚು ಮರ ಧರಶಾಹಿ, ಪ್ರಾಣಹಾನಿ!

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ 50ಕ್ಕೂ ಹೆಚ್ಚು ಮರಗಳು ಉರುಳಿ, ರಸ್ತೆಗಳು ಜಲಾವೃತಗೊಂಡಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.

3 Min read
Author : Gowthami K
Published : Apr 29 2026, 07:38 PM IST
Share this Photo Gallery
  • FB
  • TW
  • Linkdin
  • Whatsapp
18
ಒಟ್ಟು 78 ಮಿ.ಮೀ ಮಳೆ
Image Credit : Asianet News

ಒಟ್ಟು 78 ಮಿ.ಮೀ ಮಳೆ

ಬೆಂಗಳೂರು: ನಗರದಲ್ಲಿ ಕಳೆದ ಎರಡು ಗಂಟೆಗಳ ಅವಧಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿವಿಧ ಭಾಗಗಳಲ್ಲಿ ಒಟ್ಟು 78 ಮಿ.ಮೀ ಮಳೆಯಾಗಿದ್ದು, ಹೆಚ್‌ಎಎಲ್ ಏರ್‌ಪೋರ್ಟ್ ಪ್ರದೇಶದಲ್ಲಿ ಮಾತ್ರವೇ 24.7 ಮಿ.ಮೀ ಮಳೆ ದಾಖಲಾಗಿದೆ. ಬೇಸಿಗೆಯ ಉರಿಯಾಟದಿಂದ ಕಂಗಾಲಾಗಿದ್ದ ನಗರಕ್ಕೆ ಮಳೆ ತಂಪು ನೀಡಿದರೂ, ಬಿರುಗಾಳಿ, ಆಲಿಕಲ್ಲು ಹಾಗೂ ಭಾರೀ ಮಳೆಯಿಂದ ಅನಾಹುತಗಳ ಸರಮಾಲೆ ಸಂಭವಿಸಿದೆ. ಬಿಬಿಎಂಪಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಪ್ರಕಾರ 50 ಸ್ಥಳಗಳಲ್ಲಿ ಮರಗಳು ಉರುಳಿವೆ. ಇದರ ಜತೆಗೆ ಈವರೆಗೆ 8 ಜನ ಮೃತಪಟ್ಟಿರುವ ಮಾಹಿತಿ ಲಭ್ಯವಿದೆ.

28
ಆಲಿಕಲ್ಲು ಮಳೆ
Image Credit : Asianet News

ಆಲಿಕಲ್ಲು ಮಳೆ

ನಗರದ ಬನಶಂಕರಿ, ಸೌತ್ ಎಂಡ್ ಸರ್ಕಲ್, ಜಯನಗರ, ಶಾಂತಿನಗರ, ಯುಬಿ ಸಿಟಿ, ಕಾರ್ಪೋರೇಶನ್ ಪ್ರದೇಶ ಸೇರಿದಂತೆ ಹಲವೆಡೆ ಗುಡುಗು-ಗಾಳಿ ಸಹಿತ ಭಾರೀ ಮಳೆ ಮಾತ್ರವಕ್ಕ ಕಾಶ್ಮೀರದಲ್ಲಿ ಮಂಜು ಇರುವ ರೀತಿಯಲ್ಲಿ ಆಲಿಕಲ್ಲು ಬಿದ್ದಿದೆ. ವಿಧಾನಸೌಧ ಸುತ್ತಮುತ್ತ ಆಲಿಕಲ್ಲು ಮಳೆ ದಾಖಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ಆಲಿಕಲ್ಲುಗಳು ರಾಶಿಯಾಗಿ ಬಿದ್ದಿರುವ ದೃಶ್ಯಗಳು ಕಂಡುಬಂದವು. ಚರ್ಚ್ ಸ್ಟ್ರೀಟ್, ಅವೆನ್ಯೂ ರೋಡ್ ಹಾಗೂ ಇಂದಿರಾನಗರ ಭಾಗದಲ್ಲೂ ಆಲಿಕಲ್ಲು ಮಳೆ ಜನರಲ್ಲಿ ಕುತೂಹಲ ಮೂಡಿಸಿದರೆ, ಕೆಲವರು ಅದರಲ್ಲಿ ಮೋಜುಮಸ್ತಿಯನ್ನೂ ನಡೆಸಿದರು.

Related Articles

Related image1
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಆರ್ಭಟ: 22 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ
Related image2
ಆಲಿಕಲ್ಲು ಮಳೆಗೆ ಬೆಂಗಳೂರು ಅಸ್ತವ್ಯಸ್ತ: ದರೆಗುರುಳಿದ ಮರ, ವಿವಿಧೆಡೆ ಜಲಾವೃತ; ರಾಜ್ಯದಲ್ಲಿ ಮುಂದಿನ 7 ದಿನವೂ ಮಳೆ!
38
ಸಾಲು ಸಾಲು ಮರಗಳು ಧರೆಗೆ, ವಾಹನಗಳಿಗೆ ಹಾನಿ
Image Credit : Asianet News

ಸಾಲು ಸಾಲು ಮರಗಳು ಧರೆಗೆ, ವಾಹನಗಳಿಗೆ ಹಾನಿ

ಮಳೆಯ ತೀವ್ರತೆಗೆ ನಗರದ ಅನೇಕ ಕಡೆ ಮರಗಳು ಧರೆಗೆ ಉರುಳಿದ್ದು, ವಾಹನಗಳಿಗೆ ಹಾನಿಯಾಗಿದೆ. ಶಿವಾನಂದ ಸರ್ಕಲ್, ಕ್ರೆಸೆಂಟ್ ರಸ್ತೆ, ಜಯನಗರ ಹಾಗೂ ಇತರೆ ಪ್ರದೇಶಗಳಲ್ಲಿ ಮರ ಬಿದ್ದು ಕಾರು, ಬೈಕ್‌ಗಳು ಜಖಂಗೊಂಡಿವೆ. ಕೆಲವೆಡೆ ಒಂದೇ ರಸ್ತೆಯಲ್ಲಿ ಹಲವು ಮರಗಳು ಉರುಳಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಮೆಜೆಸ್ಟಿಕ್ ಕಾರ್ ಪಾರ್ಕಿಂಗ್ ಪ್ರದೇಶದಲ್ಲೂ ಬೃಹತ್ ಮರ ಬಿದ್ದು ಮೂರು ಕಾರುಗಳು ಹಾನಿಗೊಳಗಾದವು. ಅದೃಷ್ಟವಶಾತ್ ಹಲವೆಡೆ ಪ್ರಾಣಹಾನಿ ತಪ್ಪಿದರೂ, ಶಿವಾಜಿನಗರದ ಬಳಿ ಗೋಡೆ ಕುಸಿದು ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಎಷ್ಟು ಜನವೆಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಅಲ್ಲದೆ ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ಮುಂಭಾಗದಲ್ಲಿದ್ದ ಕಟೌಟ್ ಕೂಡ ಗಾಳಿಗೆ ಬಿದ್ದು ಹಾನಿಯಾಗಿದೆ.

48
ಹೈಕೋರ್ಟ್ ಗೂ ನುಗ್ಗಿದ ನೀರು
Image Credit : Asianet News

ಹೈಕೋರ್ಟ್ ಗೂ ನುಗ್ಗಿದ ನೀರು

ಭಾರೀ ಮಳೆಯ ಪರಿಣಾಮ ನಗರದ ಅನೇಕ ರಸ್ತೆಗಳು ಜಲಾವೃತಗೊಂಡಿದ್ದು, ಶಿವಾನಂದ ಸರ್ಕಲ್ ರೈಲ್ವೆ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ಕೆರೆಯಂತಾಗಿದೆ. ಅಂಡರ್‌ಪಾಸ್‌ನಲ್ಲಿ ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬಸವನಗುಡಿ ಅಂಡರ್‌ಪಾಸ್ ಕೂಡ ಸಂಪೂರ್ಣವಾಗಿ ನೀರಿನಿಂದ ತುಂಬಿ ಸಂಚಾರಕ್ಕೆ ಅಡ್ಡಿಯಾಗಿದೆ. ಎಚ್‌ಎಸ್‌ಆರ್ ಲೇಔಟ್, ಸರಜಾಪುರ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ, ಕಾಮರಾಜ ರಸ್ತೆ ಸೇರಿದಂತೆ ಹಲವೆಡೆ ವಾಹನಗಳು ಅರ್ಧ ಮುಳುಗಡೆಗೊಂಡಿವೆ.

58
ನಿವಾಸಿಗಳ ಸಂಕಷ್ಟ
Image Credit : Asianet News

ನಿವಾಸಿಗಳ ಸಂಕಷ್ಟ

ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಸಮೀಪ ಬಿರುಗಾಳಿಗೆ ತಗಡಿನ ತಡೆಗೋಡೆ ಕಿತ್ತು ಬಿದ್ದಿದ್ದು, ಮತ್ತಷ್ಟು ಅಪಾಯದ ಭೀತಿ ಮೂಡಿಸಿದೆ. ಲಗ್ಗೆರೆಯಲ್ಲಿ ಗಾಳಿ-ಮಳೆಗೆ ಶೆಡ್‌ಗಳು ಕಿತ್ತು ಹೋಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ ಆವರಣದ ಅಡ್ವೋಕೇಟ್ ಜನರಲ್ ಕಚೇರಿಗೆ ಮಳೆ ನೀರು ನುಗ್ಗಿ ದಾಖಲೆಗಳಿಗೆ ಹಾನಿಯಾಗಿದೆ. ವಿಧಾನಸೌಧದ ಪಶ್ಚಿಮ ದ್ವಾರ ಹಾಗೂ ಕೆಲವು ಕಚೇರಿಗಳಲ್ಲೂ ನೀರು ಒಳನುಗ್ಗಿದ ಘಟನೆಗಳು ವರದಿಯಾಗಿವೆ.

68
ಕಾಂಪೌಂಡ್ ಗೋಡೆ ಕುಸಿದು 8 ಮಂದಿ ಸಾವು!
Image Credit : Asianet News

ಕಾಂಪೌಂಡ್ ಗೋಡೆ ಕುಸಿದು 8 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಸಮೀಪ ಕಾಂಪೌಂಡ್ ಗೋಡೆ ಕುಸಿದು 8 ಮಂದಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ ಮೃತ ದುರ್ಧೈವಿಗಳು ಹಳೆಯ ಗೋಡೆಗೆ ದೊಡ್ಡ ಟಾರ್ಪಲ್‌ ಹಾಕಿ ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಮಳೆ ಜೋರಾಗಿ ಸುರಿದ ಕಾರಣ ರಕ್ಷಣೆಗೆ ವ್ಯಾಪಾರಿಗಳು ಮತ್ತು ಪಾದಾಚಾರಿಗಳು ಟಾರ್ಪಲ್‌ ಆಡಿ ನಿಂತಿದ್ದಾರೆ. ಈ ವೇಳೆ ಬಿರುಗಾಳಿ ಸಹಿತ ಮಳೆಗೆ ಗೋಡೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದುರಂತದಿಂದ ಸಾವನ್ನಪ್ಪಿದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸಿಎಂ ಸಿದ್ದರಾಮಯ್ಯ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಜರಸಿಬಿ ಮೂಲಕ ತೆರವು ಕಾರ್ಯಾಚರಣೆ ಮಾಡಲಾಗಿದೆ.

78
ಮೆಟ್ರೋ ಸೇವೆಯ ಮೇಲೂ ಮಳೆ ಪರಿಣಾಮ
Image Credit : Asianet News

ಮೆಟ್ರೋ ಸೇವೆಯ ಮೇಲೂ ಮಳೆ ಪರಿಣಾಮ

ಮೆಟ್ರೋ ಸೇವೆಯ ಮೇಲೂ ಮಳೆಯ ಪರಿಣಾಮ ಕಂಡುಬಂದಿದ್ದು, ಬನಶಂಕರಿ ಮೆಟ್ರೋ ನಿಲ್ದಾಣದ ಒಳಗೂ ನೀರು ಹರಿದು ಟಿಕೆಟ್ ಕೌಂಟರ್ ಭಾಗಗಳಲ್ಲಿ ನೀರು ನಿಂತಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಕಚೇರಿಗಳಿಂದ ಮನೆಗಳಿಗೆ ತೆರಳುತ್ತಿದ್ದವರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಗಂಟೆಗಳ ಕಾಲ ಸಂಕಷ್ಟ ಅನುಭವಿಸಿದ್ದಾರೆ. ಕಾರ್ಪೋರೇಶನ್, ಮೆಜೆಸ್ಟಿಕ್, ಶಾಂತಿನಗರ, ಹೆಬ್ಬಾಳ ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

88
ಬೆಂಗಳೂರು ಗ್ರಾಮಾಂತರದಲ್ಲೂ ಮಳೆ
Image Credit : Asianet News

ಬೆಂಗಳೂರು ಗ್ರಾಮಾಂತರದಲ್ಲೂ ಮಳೆ

ಬೆಂಗಳೂರು ಗ್ರಾಮಾಂತರ ಭಾಗಗಳಾದ ಹೊಸಕೋಟೆ ಸುತ್ತಮುತ್ತಲೂ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಬೇಸಿಗೆಯ ಬಿಸಿಯಿಂದ ಬಳಲುತ್ತಿದ್ದ ಜನರಿಗೆ ಈ ಮಳೆ ತಂಪು ನೀಡಿದರೂ, ಕೆಲವೆಡೆ ಹಾನಿ ಉಂಟುಮಾಡಿದೆ. ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ 26 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಒಟ್ಟಾರೆಯಾಗಿ, ಮಳೆರಾಯನ ಆಗಮನದಿಂದ ಬಿಸಿಲಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದರೂ, ಭಾರೀ ಮಳೆಯ ಪರಿಣಾಮ ಬೆಂಗಳೂರಿನ ಜನಜೀವನ ತತ್ತರಿಸಿ ಹೋಗಿರುವುದು ಸ್ಪಷ್ಟವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ಕರ್ನಾಟಕ ಮಳೆ
ಮಳೆ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಮಳೆ

Latest Videos
Recommended Stories
Recommended image1
ಒಂದೇ ಮಳೆಗೆ ಹಾಳೂರಾದ ಬೆಂಗಳೂರು, 7 ಸಾವು, ಸಂಪೂರ್ಣ ಅಸ್ತವ್ಯಸ್ತಕ್ಕೆ ಯಾರು ಹೊಣೆ?
Recommended image2
ಕರ್ನಾಟಕದಲ್ಲಿ 56,834 ಹುದ್ದೆಗಳ ನೇಮಕಾತಿಗೆ ಶೀಘ್ರವೇ ಗ್ರೀನ್ ಸಿಗ್ನಲ್: ಗೃಹ ಸಚಿವ ಪರಮೇಶ್ವರ
Recommended image3
ಮಡಿಕೇರಿ ಜೈಲಿನಲ್ಲಿ ನಿವೃತ್ತ ಅಧಿಕಾರಿ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕೇರ್ ಟೇಕರ್ ಮಹಿಳೆಯಿಂದಲೇ ಹನಿಟ್ರ್ಯಾಪ್ ಆರೋಪ!
Related Stories
Recommended image1
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಆರ್ಭಟ: 22 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ
Recommended image2
ಆಲಿಕಲ್ಲು ಮಳೆಗೆ ಬೆಂಗಳೂರು ಅಸ್ತವ್ಯಸ್ತ: ದರೆಗುರುಳಿದ ಮರ, ವಿವಿಧೆಡೆ ಜಲಾವೃತ; ರಾಜ್ಯದಲ್ಲಿ ಮುಂದಿನ 7 ದಿನವೂ ಮಳೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved