MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ತೇಜಸ್ವಿ ಸೂರ್ಯ-ಶಿವಶ್ರೀ ಕಲ್ಯಾಣ; ಮದುವೆಗೆ ಯಾರೆಲ್ಲಾ ಬಂದಿದ್ರು? ಫೋಟೋಗಳಲ್ಲಿ ನೋಡಿ

ತೇಜಸ್ವಿ ಸೂರ್ಯ-ಶಿವಶ್ರೀ ಕಲ್ಯಾಣ; ಮದುವೆಗೆ ಯಾರೆಲ್ಲಾ ಬಂದಿದ್ರು? ಫೋಟೋಗಳಲ್ಲಿ ನೋಡಿ

Tejasvi Surya Marriage: ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹವು ಬೆಂಗಳೂರಿನಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ರಾಜಕೀಯ ಗಣ್ಯರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.

2 Min read
Mahmad Rafik
Published : Mar 06 2025, 12:39 PM IST| Updated : Mar 06 2025, 08:21 PM IST
Share this Photo Gallery
  • FB
  • TW
  • Linkdin
  • Whatsapp
112

ಬಿಜೆಪಿ ಯುವ ಘಟಕದ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಖ್ಯಾತ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದೆ. ಬೆಂಗಳೂರಿನ ಹೆಸರಘಟ್ಟ ರೆಸಾರ್ಟ್‌ನಲ್ಲಿ ಇಬ್ಬರ ಮದುವೆ ಸಂಪ್ರದಾಯಬದ್ಧವಾಗಿ ನಡೆದಿದೆ. 

212

ಇಂದು ಬೆಳಗ್ಗೆ ಶುಭ ಮುಹೂರ್ತ 10.45ರ ತುಲಾ ಲಗ್ನದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರ ಮದುವೆ ನಡೆದಿದೆ. ಇಂದು ಸಂಜಯೇ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. 

312

ಬುಧವಾರ ಸಂಜೆಯಿಂದಲೇ ರೆಸಾರ್ಟ್‌ನಲ್ಲಿ ವರಪೂಜೆ ಸೇರಿದಂತೆ ವಿವಿಧ ಮದುವೆ ಶಾಸ್ತ್ರಗಳು ಅರಂಭಗೊಂಡಿದ್ದವು. ಮದುವೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ಸಿಎನ್ ಮಂಜುನಾಥ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ವಿನಯ್ ಗುರೂಜಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ರಾಜಕೀಯ ಮತ್ತು ರಾಜಕೀಯೇತರ ಮುಖಂಡರು ಭಾಗವಹಿಸಿದ್ದರು.

412

ಮದುವೆಗೆ ಎರಡು ಕುಟುಂಬದ ಆಪ್ತ ಸದಸ್ಯರು ಮತ್ತು ಅತ್ಯಾಪ್ತ ರಾಜಕೀಯ ಗಣ್ಯರಿಗೆ ಆಹ್ವಾನಿಸಲಾಗಿತ್ತು. ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ವೈವಾಹಿಕ ಜೀವನಕ್ಕೆ ಕಾಲಿಟಿದ್ದಾರೆ. 

512

ಪ್ರತಾಪ್ ಸಿಂಹ ಪೋಸ್ಟ್ 
ಮಾಜಿ ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಗೆಳೆಯ ತೇಜಸ್ವಿ ಸೂರ್ಯ ಮದುವೆಗೆ ಆಗಮಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಗಣ್ಯರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನವಜೋಡಿಗೆ ಪ್ರತಾಪ್ ಸಿಂಹ ಶುಭ ಹಾರೈಸಿದ್ದಾರೆ. 

612

ಮಾರ್ಚ್ 9ರಂದು ಅದ್ಧೂರಿಯಾಗಿ ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ  ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. 

712

ಬೆಂಗಳೂರಲ್ಲಿ ನಡೆದ ಏರೋ ಶೋಗೂ ಸಹ ಭಾವೀ ಪತ್ನಿಯೊಂದಿಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದರು. ನಂತರ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದರು. ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು.

812
Tejasvi Surya Marriage

Tejasvi Surya Marriage

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

912

ಯಾರು ಈ ಶಿವಶ್ರೀ?
ತಮಿಳುನಾಡು ಮೂಲದ ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

1012

ಸಂಸದ ತೇಜಸ್ವಿ ಸೂರ್ಯ ಮದುವೆ ಕರ್ನಾಟಕ ಮತ್ತು ತಮಿಳು ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ. ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮದುವೆಗೆ ಆಗಮಿಸಿ ನವಜೋಡಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

1112

ಗಾಯಕಿ ಮತ್ತು ಭರತನಾಟ್ಯ  ಪ್ರವೀಣೆಯಾಗಿರುವ ಶಿವಶ್ರೀ ಸ್ಕಂದಪ್ರಸಾದ್ ಬಹುಮುಖ ಪ್ರತಿಭೆ. ಚಿತ್ರಕಲೆ ಮತ್ತು ಮಾಡೆಲಿಂಗ್ ಅಂದ್ರೆ ಶಿವಶ್ರೀ ಅವರಿಗೆ ಇಷ್ಟ. ಕೆಲವು ವೇದಿಕೆಗಳಲ್ಲಿ ಮಾಡೆಲಿಂಗ್ ಸಹ ಮಾಡಿದ್ದಾರೆ. ತಮಿಳಿನ ಸೂಪರ್ ಹಿಟ್ ಸಿನಿಮಾ ಪೊನ್ನಿಯಿನ್ ಸೆಲ್ವನ್ ಹಾಡುಗಳಿಗೆ ಶಿವಶ್ರೀ ಧ್ವನಿಯಾಗಿದ್ದಾರೆ.

1212

ಭಾರತದ ರಾಜಕಾರಣದಲ್ಲಿ ಉನ್ನತ ಸ್ಥಾನಕ್ಕೆ ತಲುಪುವ ಭರವಸೆ ನಾಯಕನೆಂದು ಖ್ಯಾತಿ ಆಗಿರುವ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ಸತತ 2ನೇ ಸಂಸದರಾಗಿ ಆಯ್ಕೆ ಆಗಿದ್ದಾರೆ. 

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು ದಕ್ಷಿಣ
ಮದುವೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved