ಸೋನಮ್ ವಾಂಗ್ಚುಕ್ ಬೆಂಬಲಿಸಿ ಬೆಂವಿವಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ
Bengaluru University student protest: ಜಂತರ್‌ಮಂತರ್‌ನಲ್ಲಿ ಸೋನಮ್ ವಾಂಗ್‌ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಬೆಂಗಳೂರು ವಿವಿ ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳು ಇಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಸೋನಮ್ ವಾಂಗ್ಚುಕ್ ಬೆಂಬಲಿಸಿ ಬೆಂಗಳೂರು ವಿವಿ ವಿದ್ಯಾರ್ಥಿಗಳಿಂದ ಸತ್ಯಾಗ್ರಹ
ನೀಟ್ ಅಕ್ರಮ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಕಳೆದ ಹತ್ತೊಬ್ಬಂತು ದಿನಗಳಿಂದ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಬೆಂಗಳೂರಿನ ವಿವಿ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯುತ್ತಿದೆ.
ಸೋನಮ್ ವಾಂಗ್‌ಚುಕ್ ವಿದ್ಯಾರ್ಥಿಗಳ ಧ್ವನಿ
ಬೆಂಗಳೂರು ವಿವಿ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪರೀಕ್ಷಾ ಪ್ರಕ್ರಿಯೆ ಲೋಪಗಳ ವಿರುದ್ಧ ವಿದ್ಯಾರ್ಥಿಗಳ ಧ್ವನಿಯಾಗಿ ಸೋನಮ್ ವಾಂಗ್‌ಚುಕ್ ಶಾಂತಿಯುತ ಹೋರಾಟ ನಡೆಸಿದ್ದಾರೆ. ಕಳೆದ ಹತ್ತೊಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ಅರಂಭಿಸಿದರೂ ಕೇಂದ್ರ ಸರ್ಕಾರ ಸೋನಂ ವಾಂಗ್‌ಚುಕ್ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಬೇಡಿಕೆ ಈಡೇರಿಕೆಗೆ ಅಗ್ರಹ
ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತೆಗೆ, ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಶಿಫ್ಟ್
ಸೋನಮ್ ವಾಂಗ್‌ಚುಕ್ ಕಳೆದ ಹತ್ತೊಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿನ್ನೆಲೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು ಅವರ ಜೀವ ರಕ್ಷಣೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆ ಅವರನ್ನು ಇಂದು ಜಂತರ್ ಮಂತರ್‌ನಿಂದ ಸ್ಥಳಾಂರಿಸಿ ಆಸ್ಸಸ್ಪತ್ರೆಗೆ ದಾಖಲಾಗಿದೆ.
ವಾಂಗ್‌ಚುಕ್ ಅವರು ಉಪವಾಸ ಸತ್ಯಾಗ್ರಹಕ್ಕೆ ಅರವಿಂದ್ ಕೇಜ್ರಿವಾಲ್ ಸಂಸದ ಚಂದ್ರಶೇಖರ್ ಅಜಾದ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳಿಂದ ಬೆಂಬಲ ವ್ಯಕ್ತವಾಗಿದೆ. ಉಪವಾಸ ಸತ್ಯಾಗ್ರಹ ಆರಂಭಿಸಿ ಹತ್ತೊಂಬತ್ತು ದಿನಗಳೇ ಕಳೆದರೂ ಕೇಂದ್ರ ಇದುವರೆಗೆ ಏಕೆ ಸ್ಪಂದಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಸದ್ಯ ವಾಂಗ್ಚುಕ್ ಆಸ್ಪತ್ರೆಗೆ ದಾಖಲಾಗಿದ್ದು ವ್ಯದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

