ಬೆಂಗಳೂರಿನಲ್ಲಿ ಮಳೆ ಆರಂಭ, ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರಿನ ಹಲೆವೆಡೆ ಮಳೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾಗಿ ಸೂಚಿಸಿದೆ.

ಬೆಂಗಳೂರಿನಲ್ಲಿ ಮಳೆ ಆರಂಭ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಆರಂಭಗೊಂಡಿದೆ. ಇದೀಗ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಶುರುವಾಗಿದೆ. ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ, ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರಿಗೆ ಇದೀಗ ಮಳೆಯ ಸಿಂಚನವಾಗಿದೆ. ಹಲೆವೆಡೆ ಗಾಳಿ ಜೋರಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿಗೆ ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಮಳೆ ಆರಂಭಗೊಳ್ಳುತ್ತಿದ್ದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಟೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲು ಭಾರಿ ಮಳೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ವಿಜಯನಗರ, ಬಳ್ಳಾರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ ಮೂರು ಗಂಟೆ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಜ್ಯದಲ್ಲೂ ಮುಂದಿನ ಮೂರು ದಿನ ಮಳೆ
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿ ಪರಿಣಾಮ ವಾಯುಭಾರ ಕುಸಿತಕಂಡಿದೆ. ಹೀಗಾಗಿ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸದ್ಯ ಮುಂಗಾರು ದುರ್ಬಲವಾಗಿದೆ. ಆದರೆ ವಾಯುಭಾರ ಕುಸಿತದಿಂದ ತೀವ್ರ ಮಳೆಯಾಗಲಿದೆ ಎಂದಿದೆ
ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಮುಂದಿನ 3 ದಿನ ಜೋರು ಮಳೆಯಾಗಲಿದೆ ಎಂದಿದೆ. ಮೂರು ದಿನಗಳ ಕಾಲ ವಿಪರೀತ ಮಳೆಯಿಂದ ಜನಸಾಮಾನ್ಯರು ತೀವ್ರ ಎಚ್ಚರಿಕೆ ನೀಡಲಾಗಿದೆ. ವಿದ್ಯಾರ್ಥಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜೂನ್ 15ರ ವರೆಗೆ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೂನ್ 13ರಿಂದ ಜೂನ್15ವರೆಗೆ ಲಘು ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

