Bharat Jodo Yatra; ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಆಯೋಜಿಸಿರುವ ಭಾರತ್ ಜೋಡೋ ಯಾತ್ರೆಯು ಭಾನುವಾರ ಸಂಜೆ ಮೈಸೂರು ತಲುಪಿತು. ಇದಕ್ಕೂ ಮುನ್ನ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ
ಭಾರತ್ ಜೋಡೋ ಕಾರ್ಯಕ್ರಮದ ಹಿನ್ನೆಲೆ ನಂಜನಗೂಡು ಬಳಿಯ ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ರಾಹುಲ್
ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ದೇವರಿಗೆ ಬಿಲ್ವಪತ್ರೆ ಅರ್ಚನೆ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ರಾಹುಲ್ ಗೆ ಜೊತೆಯಾದರು.
ಭಾರತ್ ಜೋಡೋ ಯಾತ್ರೆಯು ಭಾನುವಾರ ಸಂಜೆ ಮೈಸೂರು ತಲುಪಿದ್ದು, ರಾಹುಲ್ ಗಾಂಧಿ ಅವರಿಗೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ