MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಮೈಸೂರ್ ಸ್ಯಾಂಡಲ್ ಸೋಪ್ ಉತ್ಪಾದನಾ ಘಟಕಕ್ಕೆ ಬ್ರಿಟೀಷ್ ಹೈಕಮಿಷನರ್ ಲಿಂಡಿ ಭೇಟಿ; ಬಾರ್ ಸೋಪ್ ನೋಡಿ ಸಂತಸ!

ಮೈಸೂರ್ ಸ್ಯಾಂಡಲ್ ಸೋಪ್ ಉತ್ಪಾದನಾ ಘಟಕಕ್ಕೆ ಬ್ರಿಟೀಷ್ ಹೈಕಮಿಷನರ್ ಲಿಂಡಿ ಭೇಟಿ; ಬಾರ್ ಸೋಪ್ ನೋಡಿ ಸಂತಸ!

ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಕೆಎಸ್‌ಡಿಎಲ್ ಗೆ ಭೇಟಿ ನೀಡಿ, ಸಂಸ್ಥೆಯ ಇತಿಹಾಸ, ಕಾರ್ಯವಿಧಾನ ಮತ್ತು ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದರು. ಮೈಸೂರು ಸ್ಯಾಂಡಲ್ ಸೋಪಿನ ಉಗಮದಲ್ಲಿ ಬ್ರಿಟನ್ನಿನ ಪಾತ್ರವನ್ನು ಕೇಳಿ ಅಚ್ಚರಿ ವ್ಯಕ್ತಪಡಿಸಿದರು.

2 Min read
Author : Sathish Kumar KH
Published : Jun 25 2025, 05:53 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರು (ಜೂ.25): ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (ಕೆಎಸ್‌ಡಿಎಲ್) ಹಾಗೂ ಮೈಸೂರು ಸ್ಯಾಂಡಲ್ ಸೋಪು ಉತ್ಪಾದನಾ ಘಟಕಕ್ಕೆ ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್‌ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡರು.

25
Image Credit : Asianet News

ಕೆಎಸ್‌ಡಿಎಲ್‌ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬರಮಾಡಿಕೊಂಡರು. ಜತೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ.ಎಸ್. ನಾಡಗೌಡ ಕೂಡ ಇದ್ದರು. ಈ ಸಂದರ್ಭದಲ್ಲಿ, ಕೆಎಸ್‌ಡಿಎಲ್ ಚರಿತ್ರೆಯನ್ನು ಕಟ್ಟಿಕೊಡುವ ಪ್ರಾತ್ಯಕ್ಷಿಕೆಯನ್ನು ಲಿಂಡಿ ಮತ್ತು ಅಯ್ಯರ್ ಇಬ್ಬರಿಗೂ ಪ್ರದರ್ಶಿಸಲಾಯಿತು. 

ಸಂಸ್ಥೆಯ ಉಗಮದ ಹಿನ್ನೆಲೆಯಲ್ಲಿ ಬ್ರಿಟನ್ನಿನ ಪಾತ್ರ ಇರುವುದನ್ನು ಕೇಳಿ, ಇಬ್ಬರೂ ಅಚ್ಚರಿ ವ್ಯಕ್ತಪಡಿಸಿದರು. ಜತೆಯಲ್ಲೇ ಕೆಎಸ್‌ಡಿಎಲ್ ಉತ್ಪನ್ನಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಲಿಂಡಿ ಮತ್ತು ಅಯ್ಯರ್ ಇಬ್ಬರೂ ಸಂಸ್ಥೆಯ ಉತ್ಪನ್ನಗಳ ತಯಾರಿಕೆ ವಿಧಾನವನ್ನು ವೀಕ್ಷಿಸಿದರು.

Related Articles

Related image1
KSDL ದಾಖಲೆ ವಹಿವಾಟು: ಮೈಸೂರು ಸ್ಯಾಂಡಲ್ ಫ್ಯಾಕ್ಟರಿಗೆ 416 ಕೋಟಿ ರೂ. ಲಾಭ!
Related image2
ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, KSDL ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
35
Image Credit : Asianet News

ಈ ಸಂದರ್ಭದಲ್ಲಿ ಮಾತನಾಡಿದ ಲಿಂಡಿ ಕ್ಯಾಮರಾನ್, ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವುದರಿಂದ ಎರಡೂ ದೇಶಗಳಿಗೂ ಸಾಕಷ್ಟು ಲಾಭವಾಗಲಿದೆ. ನಾವು ನಮ್ಮ ನಮ್ಮ ನೈಪುಣ್ಯಗಳನ್ನು ಪರಸ್ಪರರ ಹಿತಗಳಿಗೆ ಧಕ್ಕೆಯಾಗದಂತೆ ವಿನಿಮಯ ಮಾಡಿಕೊಳ್ಳಬೇಕು. ಈ ಒಡಂಬಡಿಕೆಯ ಲಾಭವು ಕೈಗಾರಿಕಾ ಬೆಳವಣಿಗೆ ಮತ್ತು ವಾಣಿಜ್ಯ ವಹಿವಾಟಿನಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕಕ್ಕೂ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

45
Image Credit : Asianet News

108 ವರ್ಷಗಳ ಹಿಂದೆ, ಅಂದರೆ 20ನೇ ಶತಮಾನದ ಎರಡನೆಯ ದಶಕದಲ್ಲಿ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಸ್ಥಾನದಿಂದ ಪರಿಣತರೊಬ್ಬರನ್ನು ಬ್ರಿಟನ್ನಿಗೆ ಕಳುಹಿಸಿ, ಸಾಬೂನು ತಯಾರಿಕೆ ತಂತ್ರಜ್ಞಾನದ ಪರಿಚಯ ಮಾಡಿಕೊಂಡರು. ಆಮೇಲೆ, ನಾಲ್ವಡಿ ಮತ್ತು ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಗೊಂಡ ಕೆಎಸ್‌ಡಿಎಲ್ ಉತ್ಕೃಷ್ಟ ಮಟ್ಟಕ್ಕೆ ಬೆಳೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಪಾಟೀಲ ತಿಳಿಸಿದರು.

55
Image Credit : Asianet News

ಕೆಎಸ್‌ಡಿಎಲ್ ಉತ್ಪನ್ನಗಳನ್ನು ಸದ್ಯಕ್ಕೆ 23 ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಯೂರೋಪಿಯನ್ ರಾಷ್ಟ್ರಗಳಿಗೂ ಮೈಸೂರು ಸ್ಯಾಂಡಲ್ ಸೋಪ್, ಶವರ್ ಜೆಲ್ ಮುಂತಾದ ಗುಣಮಟ್ಟದ ಉತ್ಪನ್ನಗಳನ್ನು ಮತ್ತಷ್ಟು ರವಾನಿಸಲಾಗುವುದು. ಇದಕ್ಕೆ ಬ್ರಿಟನ್ನಿನ ಸಹಕಾರವೂ ನಮಗೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಾರುಕಟ್ಟೆ ವಿಸ್ತರಣೆ ನಡೆಯುತ್ತಿದೆ ಎಂದರು. 

ಕೆಎಸ್‌ಡಿಎಲ್ ಸಂಸ್ಥೆಯು ಕಳೆದ ಸಾಲಿನಲ್ಲಿ 416 ಕೋಟಿ ರೂ. ಲಾಭ ಗಳಿಸಿದ್ದು, 2028ರ ವೇಳೆಗೆ ವಾರ್ಷಿಕ ವಹಿವಾಟನ್ನು 3,000 ಕೋಟಿ ರೂ.ಗಳಿಗೆ ಕೊಂಡೊಯ್ಯಲಾಗುವುದು. ಜತೆಗೆ ವಿಜಯಪುರದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಉತ್ಪಾದನಾ ಘಟಕವನ್ನೂ ಆರಂಭಿಸಲಾಗುವುದು. ಸದ್ಯದಲ್ಲೇ ಸಂಸ್ಥೆಯ ವತಿಯಿಂದ ನಾನಾ ತರಹದ ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದರು.

ಈ ವೇಳೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಇದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಮೈಸೂರು
ಎಂ. ಬಿ. ಪಾಟೀಲ್
ಬೆಂಗಳೂರು

Latest Videos
Recommended Stories
Recommended image1
ಬೆಂಗಳೂರಿನ ರಸ್ತೆಗೆ ₹2,671 ಕೋಟಿ; ವಿಶ್ವಬ್ಯಾಂಕ್‌ನಿಂದ ₹1600 ಕೋಟಿ ಸಾಲ ಪಡೆದು ರಾಜಕಾಲುವೆ ನಿರ್ಮಾಣ
Recommended image2
ಅತ್ಯುತ್ತಮ ವಿವಿ ಕಟ್ಟಲು ಏಕೆ ಆಗುತ್ತಿಲ್ಲ? ಕುಲಪತಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್‌
Recommended image3
ನ್ಯಾಯಾಂಗ ಅಪರಾಧ ದ್ವೇಷಿಸಬೇಕೇ ವಿನಃ ಅಪರಾಧಿಯನ್ನಲ್ಲ: ಹೈಕೋರ್ಟ್
Related Stories
Recommended image1
KSDL ದಾಖಲೆ ವಹಿವಾಟು: ಮೈಸೂರು ಸ್ಯಾಂಡಲ್ ಫ್ಯಾಕ್ಟರಿಗೆ 416 ಕೋಟಿ ರೂ. ಲಾಭ!
Recommended image2
ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, KSDL ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved