ಗುಂಡ್ಲುಪೇಟೆಯಲ್ಲಿ ಕೇರಳಿಗ ಅಳವಡಿಸಿದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ 2 ವರ್ಷದ ಹುಲಿ ಮರಿ ಸಾವು
tiger cub died by Electric shock: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ, ಕೇರಳ ಮೂಲದ ವ್ಯಕ್ತಿಯೊಬ್ಬರು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಎರಡು ವರ್ಷದ ಹುಲಿಯೊಂದು ಸಾವನ್ನಪ್ಪಿದೆ. ಡ್ರೋನ್ ಮೂಲಕ ಪರಿಶೀಲನೆ ನಡೆಸುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.
ಇದನ್ನೂ ಓದಿ: ಹರ್ಮುಜ್ ಜಲಸಂಧಿಯನ್ನು ಇರಾನ್ ಹಿಡಿತದಿಂದ ಬಿಡಿಸಲು ಚೀನಾಗೆ ಬೆದರಿಸುತ್ತಲೇ ನ್ಯಾಟೋ ರಾಷ್ಟ್ರಗಳ ಸಹಾಯ ಕೇಳಿದ ಟ್ರಂಪ್
ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷ ವಯಸ್ಸಿನ ಹುಲಿಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಒಡಿಶಾದಲ್ಲಿ ರಣ ಭೀಕರ ಸುಂಟರಗಾಳಿಗೆ ಇಬ್ಬರು ಬಲಿ: 70ಕ್ಕೂ ಹೆಚ್ಚು ಮನೆಗಳಿಗೆ ಹಾನಿ: ವೀಡಿಯೋ ವೈರಲ್
ಸ್ಥಳೀಯರ ಜಮೀನನ್ನು ಗುತ್ತಿಗೆ ಪಡೆದಿದ್ದ ಕೇರಳ ಮೂಲದ ಪರಮೇಶ್ ಎಂಬುವವರು ಇಲ್ಲಿ ಜಮೀನಿಗೆ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದರು.
ಇದನ್ನೂ ಓದಿ:
ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರ ಹೆಚ್ಚಿರುವ ಹಿನ್ನೆಲೆ, ಅಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ಇಲ್ಲಿ ಹುಲಿ ಸತ್ತು ಬಿದ್ದಿರೋದು ಗಮನಕ್ಕೆ ಬಂದಿದೆ.
ಈ ಹಿಂದೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಶನಕ್ಕೆ ಒಳಗಾಗಿ 6 ಹುಲಿಗಳು ಸಾವನ್ನಪ್ಪಿದ್ದವು. ಹಾಗೆಯೇ ಬಿಆರ್ ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಉರುಳಿಗೆ ಸಿಲುಕಿಒಂದು ಹುಲಿ ಸಾವನ್ನಪ್ಪಿತ್ತು. ಇದೀಗ ಗುಂಡ್ಲುಪೇಟೆ ಭಾಗದಲ್ಲಿ ಈಗ ಮತ್ತೊಂದು ಹುಲಿ ಸಾವನ್ನಪ್ಪಿದೆ.
ಇದನ್ನೂ ಓದಿ: ಎಲ್‌ಪಿಜಿ ಸಿಲಿಂಡರ್ ಬೇಕಿದ್ರೆ ಕೆವೈಸಿ ನೀಡುವುದು ಕಡ್ಡಾಯ: ಇಲ್ಲಿದೆ ಕೆವೈಸಿ ಪ್ರಕ್ರಿಯೆಯ ಡಿಟೇಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

