MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಚಿಕ್ಕಮಗಳೂರು: ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಕಾಡಾನೆಗಳ ಅಪರೂಪದ ದೃಶ್ಯ

ಚಿಕ್ಕಮಗಳೂರು: ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಕಾಡಾನೆಗಳ ಅಪರೂಪದ ದೃಶ್ಯ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಬೆಳೆ ನಾಶವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆಯೇ, ಆನೆಗಳು ತಮ್ಮ ಮರಿಗಳನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರುವ ಅಪರೂಪದ ದೃಶ್ಯ ಡ್ರೋನ್‌ನಲ್ಲಿ ಸೆರೆಯಾಗಿದೆ.

2 Min read
Author : Anusha Kb
Published : Mar 19 2026, 11:38 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಲ ದಿನಗಳಿಂದ ಕಾಡಾನೆಗಳ ಹಾವಳಿ ಜೋರಾಗಿದ್ದು, ಜನ ಮನೆಯಿಂದ ಹೊರಬಂದು ರಸ್ತೆ ನಡೆಯುವುದಕ್ಕೆ ಭಯ ಪಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸುತ್ತಿರು ಘಟನೆಗಳು ವರದಿಯಾಗಿವೆ. ಇದರ ನಡುವೆ ಈಗ ಅಪರೂಪದ ದೃಶ್ಯವೊಂದು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ದಾವಣಗೆರೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಪಡೆದ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದೇನು?

26
Image Credit : Asianet News

ಹೌದು ಆನೆಗಳು ತಮ್ಮ ಮರಿಗಳನ್ನು ಬಹಳ ಕಾಳಜಿಯಿಂದ ಕರೆದುಕೊಂಡು ಜೊತೆಯಾಗಿ ಸಾಗುತ್ತಿರುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ-ಕಸ್ಕೆಬೈಲು ಗ್ರಾಮದಲ್ಲಿ ಆನೆಗಳು ಮರಿಗಳ ಜೊತೆ ಬಹಳ ಜಾಗರೂಕತೆಯಿಂದ ಸಂಚರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಅನೇಕರು ತಮ್ಮ ಮರಿಗಳ ಬಗ್ಗೆ ಬಹಳ ಕಾಳಜಿಯಿಂದ ಇರುತ್ತವೆ. ತಮ್ಮ ಮರಿಗಳ ಸುರಕ್ಷತೆ ಅವುಗಳ ಪ್ರಮುಖ ಆದ್ಯತೆಯಾಗಿದ್ದು, ಅದನ್ನು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ವೀಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಅಣ್ಣಾಮಲೈ ಹುಲಿ ಅಭಯಾರಣ್ಯದ ತಪ್ಪಲಲ್ಲಿ ಕಂಡು ಬಂದ ಹಕ್ಕಿಗಳ ಹರಟೆಯ ಅದ್ಭುತ ದೃಶ್ಯ

Related Articles

Related image1
ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವ ವೇಳೆ ಜೇನು ನೊಣಗಳ ದಾಳಿ: ಕೃಷಿಕ ಸಾವು
Related image2
ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳ ಮುಖಂಡನ ಗಡಿಪಾರಿಗೆ ಪೊಲೀಸರ ಶಿಫಾರಸು!
36
Image Credit : Asianet News

ಇತ್ತ ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ಕಾಡಾನೆ ಹಾವಳಿ ಜೋರಾಗಿದ್ದು, ಒಂದೆರಡು ವರ್ಷದ ಅಡಿಕೆ ತೋಟದಲ್ಲಿ ಕಾಡಾನೆಗಳ ಸಂಚಾರದಿಂದ ಅಡಿಕೆ ಗಿಡಗಳು ಧ್ವಂಸಗೊಂಡಿವೆ. ಕಾಡಾನೆಗಳ ನಿರಂತರ ಹಾವಳಿಯಿಂದ ಗ್ರಾಮಸ್ಥರು ಕಂಗೆಟ್ಟಿದ್ದು, ತೋಟಗಳಲ್ಲಿ ಕೂಲಿ ಕೆಲಸಕ್ಕೂ ಹೋಗುವುದಕ್ಕೆ ಭಯಪಟ್ಟು ಮನೆಯಲ್ಲಿ ಕಳೆಯುವಂತಾಗಿದೆ.

ಇದನ್ನೂ ಓದಿ: ಇವರು ನೀರಲ್ಲಿ ಬಿದ್ದು ಸತ್ತ ಪ್ರೇಮಿಗಳಲ್ಲ: ಇದು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಭಾರಿ ವೈರಲ್

46
Image Credit : Asianet News

ಕೂಡಲೇ ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಮೂಡಿಗೆರೆಯಲ್ಲಿ 70ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಸ್ಥಳೀಯವಾಗಿ ಬೀಟಮ್ಮ, ಭೀಮ ಎಂಬ ಹೆಸರಿನ ಗುಂಪಿನ ಕಾಡಾನೆಗಳು ಕಾಫಿ ತೋಟ, ಭತ್ತದ ಗದ್ದೆಗಳಿಗೆ ನುಗ್ಗಿ ಹಾನಿ ಮಾಡಿದ್ದವು. ಇವುಗಳ ಹಾವಳಿಯಿಂದ ರೈತರು ಕೃಷಿ ಜಮೀನಿನಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ.

ಇದನ್ನೂ ಓದಿ: ಭಾರತದಲ್ಲಿ ನಕ್ಸಲರು ಹಾಗೂ ದಂಗೆಕೋರ ಗುಂಪುಗಳಿಗೆ ತರಬೇತಿ : ಅಮೆರಿಕನ್ ಪ್ರಜೆಯೂ ಸೇರಿ 7 ವಿದೇಶಿಗರ ಬಂಧನ

56
Image Credit : Asianet News

ಒಂದೇ ತಾಲೂಕಿನಲ್ಲಿ ಹಲವು ಗುಂಪುಗಳಾಗಿ ಕಾಡಾನೆಗಳು ಸಂಚರಿಸುತ್ತಿದ್ದು, ಕಸ್ಕೆಬೈಲು, ಜಿ.ಹೊಸಳ್ಳಿ ಸೇರಿ ಅನೇಕ ಗ್ರಾಮಗಳಲ್ಲಿ ಕಾಡಾನೆಗಳು ಕೃಷಿಕರಿಗೆ ತೊಂದರೆ ಮಾಡಿದ್ದು, ಕಾಡಾನೆಗಳ ಹಾವಳಿಯಿಂದ ವಿದ್ಯಾರ್ಥಿಗಳು ಪರೀಕ್ಷೆಗ ಹೋಗುವುದಕ್ಕೂ ಭಯಪಡುವಂತಾಗಿದೆ. ಕಾಡಾನೆಗಳ ಹಾವಳಿಯಿಂದ ಕೃಷಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದ್ದು, ಕಾಡಾನೆ ದಾಳಿಯಿಂದ ಈಗಾಗಲೇ ಹಲವು ಸಾವು ನೋವುಗಳು ಸಂಭವಿಸಿವೆ.

ಇದನ್ನೂ ಓದಿ: ಯುದ್ಧದ ನಡುವೆಯೇ ಇರಾನ್‌ನಿಂದ ಮಿಲಿಯನ್‌ಗಟ್ಟಲೇ ಬ್ಯಾರೆಲ್ ತೈಲ ರಫ್ತು: ಹರ್ಮುಜ್ ದಾಟಿ ಹೊರಟ 90 ಹಡಗುಗಳು

66
Image Credit : Asianet News

ಅರಣ್ಯ ಇಲಾಖೆ, ಎಲಿಫೆಂಟ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಆನೆಗಳನ್ನು ನಾಡಿನಿಂದ ದೂರ ಅಟ್ಟುವುದಕ್ಕೆ ಪ್ರಯತ್ನ ಮಾಡುತ್ತಿದ್ದು, ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲು, ಜಿ ಹೊಸಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಮಾರಾಟಕ್ಕಿಟ್ಟ ಮೀನಿಗೆ ಜಿರಳೆ ಔಷಧಿ ಹಿಟ್ ಸ್ಪ್ರೇ ಮಾಡಿದ ಯುವಕ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ವನ್ಯಜೀವಿ
ಆನೆಗಳು
ಚಿಕ್ಕಮಗಳೂರು
Latest Videos
Recommended Stories
Recommended image1
ಶಾಸಕರ ಭವನದಲ್ಲೇ ಇಡ್ಲಿ, ದೋಸೆ ಸಿಗುತ್ತಿಲ್ಲ! ವಿಧಾನ ಪರಿಷತ್‌ನಲ್ಲಿ ಉಪಹಾರದ ಸಮಸ್ಯೆ ಪ್ರಸ್ತಾಪಿಸಿದ ಐವನ್ ಡಿಸೋಜಾ
Recommended image2
ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಸಿಗ್ತಿದ್ದಂತೆ ಹಮಾಲಿಯಾಗಿದ್ದ ತಂದೆಯ ನೆನೆದು ಭಾವುಕರಾದ ಶ್ರೀನಿವಾಸ್ ದಾಸಕರಿಯಪ್ಪ
Recommended image3
ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆ ಕೇಸ್ ಸ್ಫೋಟಕ ಮಾಹಿತಿ, ಆರೋಪಿ ಶಬೀಲ್ ಕೌರ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು
Related Stories
Recommended image1
ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವ ವೇಳೆ ಜೇನು ನೊಣಗಳ ದಾಳಿ: ಕೃಷಿಕ ಸಾವು
Recommended image2
ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳ ಮುಖಂಡನ ಗಡಿಪಾರಿಗೆ ಪೊಲೀಸರ ಶಿಫಾರಸು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved