ದಾವಣಗೆರೆ ಕುಂದೂರು ಗ್ರಾಮದಲ್ಲಿ ಆರ್.ಅಶೋಕ್ ಗ್ರಾಮ ವಾಸ್ತವ್ಯ : ಸಿಎಂ ಉದ್ಘಾಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನ್ಯಾಮತಿ ತಾಲ್ಲೂಕಿನಲ್ಲಿ "ಜಿಲ್ಲಾಧಿಕಾರಿಗಳ ನಡೆ - ಹಳ್ಳಿಗಳ ಕಡೆ" ಮತ್ತು 'ಗ್ರಾಮ ವಾಸ್ತವ್ಯ' ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಿ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು

CM Bommai
ಕೋವಿಡ್ ನಂತರ ಇದೇ ಮೊದಲ ಬಾರಿಗೆ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಇಂದು ಕಂದಾಯ ಸಚಿವರ ಆರ್. ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನ್ಯಾಮತಿ ತಾಲ್ಲೂಕಿನಲ್ಲಿ "ಜಿಲ್ಲಾಧಿಕಾರಿಗಳ ನಡೆ - ಹಳ್ಳಿಗಳ ಕಡೆ" ಮತ್ತು 'ಗ್ರಾಮ ವಾಸ್ತವ್ಯ' ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಿ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು .
CM Bommai
ನ್ಯಾಮತಿ ತಾ. ಸುರಹೊನ್ನೆ ಗ್ರಾಮದ ಸರ್ಕಾರಿ ಪಪೂ ಮಹಿಳಾ ಕಾಲೇಜು ಆವರಣದಲ್ಲಿ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ವಿತರಣೆ ಸೇರಿ ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಿಎಂ. ಹೊನ್ನಾಳಿ ತಾ. ಕುಂದೂರಿಗೆ ತೆರಳಿ ಗ್ರಾಮದ ಕಸ್ತೂರಬಾ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿರುವ ’ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಗ್ರಾಮವಾಸ್ತವ್ಯಕ್ಕೆ ಚಾಲನೆ
CM Bommai
ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ. ಪಿ. ರೇಣುಕಾಚಾರ್ಯ, ಶನಿವಾರ ಅವಳಿ ತಾಲೂಕುಗಳಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯದಲ್ಲಿಯೇ ಮಾದರಿಯಾಗಿರಬೇಕು. ನ ಭೋತೋ ನ ಭವಿಷ್ಯತಿ ಎನ್ನುವ ರೀತಿಯಲ್ಲಿ ಕಾರ್ಯಕ್ರಮ ನಡೆಸಲು ಎಲ್ಲ ರೀತಿಯಲ್ಲಿ ಜಿಲ್ಲಾ ಮತ್ತು ತಾಲೂಕು ಅಡಳಿತ ಸಿದ್ಧಗೊಂಡಿವೆ ಎಂದು ಹೇಳಿದರು.
CM Bommai
ಶಾಸಕರ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ. ಸಿಎಂ ಜೊತೆ, ಕಂದಾಯ ಸಚಿವ ಆರ್.ಅಶೋಕ್, ಸಂಸದ ಜಿ.ಎಂ.ಸಿದ್ದೇಶ್ವರ, ಸಚಿವ ಈಶ್ವರಪ್ಪ, ಆಯನೂರ ಮಂಜುನಾಥ್, ಹಿರಿಯರಾದ ಎಸ್.ಎ,ರವಿಂದ್ರನಾಥ್, ಶಾಸಕರಾದ ಮಾಡಾಳ್‌ವಿರೂಪಾಕ್ಷಪ್ಪ, ಲಿಂಗಣ್ಣ, ಎಸ್.ವಿ.ರಾಮಚಂದ್ರಪ್ಪ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಭಾಗಿ.
CM Bommai
ನ್ಯಾಮತಿ ತಾಲೂಕಿನ ಸುರಹೊನ್ನೆ ಹಾಗೂ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕಂದಾಯ ಸಚಿವ ಆರ್. ಆಶೋಕ ಅವರ ನೇತೃತ್ವದಲ್ಲಿ ಜರುಗುತ್ತಿದೆ. ಕೋವಿಡ್ ಕಾರಣದಿಂದ ಸ್ಥಗಿತಕೊಂಡಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಮೂಲಕ ಚಾಲನೆ ನೀಡಲಾಗಿದೆ.
CM Bommai
ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಂಪೂರ್ಣ ಸಹಕಾರದೊಂದಿಗೆ ಗ್ರಾಮವಾಸ್ತವ್ಯ ಕಾರ್ಯಕ್ರಮ ಸಿದ್ದತೆಗಳು ನಡೆಯುತ್ತಿವೆ ಇದಕ್ಕೆ ಅಧಿಕಾರಿಗಳು ಗ್ರಾಮಸ್ಥರ ಸಹಕಾರ ಕೂಡ ಇದೆ ಎಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ