BSY ಭೇಟಿ ಮಾಡಿದ ಸಿಎಂ ಬೊಮ್ಮಾಯಿ: ಉಭಯ ನಾಯಕರ ಸುದೀರ್ಘ ಚರ್ಚೆ
ಬೆಂಗಳೂರು(ಅ.15): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು(ಶುಕ್ರವಾರ) ಭೇಟಿ ಮಾಡಿ ದಸರಾ ಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ.

ಇಂದು(ಶುಕ್ರವಾರ) ನಗರದ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ವಿಜಯದಶಮಿ ಹಬ್ಬದ ಶುಭ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಯಡಿಯೂರಪ್ಪ ಅವರ ನಿವಾಸದಲ್ಲಿರುವ ಪೂಜಾ ಕೋಣೆಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವರಿಗೆ ನಮಸ್ಕರಿಸಿ ಭಗವಂತನ ಆಶೀರ್ವಾದ ಪಡೆದಿದ್ದಾರೆ.
ಬಳಿಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಶಾಲು ಹೊದಿಸಿ ಹಾರ ಹಾಕಿ ಸತ್ಕರಿಸಿ ಆಶೀರ್ವಾದ ಪಡೆದ ನಾಡಿದ ದೊರೆ ಬಸವರಾಜ ಬೊಮ್ಮಾಯಿ
ಇದೇ ವೇಳೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪನವರ ಜೊತೆ ಒಂದು ಗಂಟೆಗಳ ಕಾಲ ಚರ್ಚೆ ಮಾಡಿ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ