ಯೋಧರ ಪ್ಯಾರಾ ಸೈಕ್ಲಿಂಗ್‌ಗೆ ಸಿಎಂ ಯಡಿಯೂರಪ್ಪ ಚಾಲನೆ
ಬೆಂಗಳೂರು(ಡಿ.28): ದೇಶದ ರಕ್ಷಣೆಗೆ ನಿರತರಾಗಿ ಕಾರಣಾಂತರಗಳಿಂದ ಅಂಗ ವೈಕಲ್ಯಕ್ಕೆ ತುತ್ತಾಗಿರುವ ಯೋಧರಿಗಾಗಿ ಹಮ್ಮಿಕೊಂಡಿದ್ದ ಸಾಹಸ ಯಾತ್ರೆ ಪ್ಯಾರಾ ಸೈಕ್ಲಿಂಗ್ ‘ಇನ್ಫಿನಿಟಿ 2020’ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

<p>ಜೀವದ ಹಂಗನ್ನು ತೊರೆದು ದೇಶದ ಗಡಿಗಳನ್ನು ಕಾಯುವ ಯೋಧರಿಗೆ ಈ ಕಾರ್ಯಕ್ರಮ ಮಾನಸಿಕ ಸ್ಥೈರ್ಯ ಮತ್ತು ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಿದೆ ಎಂದು ಹೇಳಿದ ಮುಖ್ಯಮಂತ್ರಿ ಯಡಿಯೂರಪ್ಪ</p>
ಜೀವದ ಹಂಗನ್ನು ತೊರೆದು ದೇಶದ ಗಡಿಗಳನ್ನು ಕಾಯುವ ಯೋಧರಿಗೆ ಈ ಕಾರ್ಯಕ್ರಮ ಮಾನಸಿಕ ಸ್ಥೈರ್ಯ ಮತ್ತು ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಿದೆ ಎಂದು ಹೇಳಿದ ಮುಖ್ಯಮಂತ್ರಿ ಯಡಿಯೂರಪ್ಪ
<p>ಆತ್ಮವಿಶ್ವಾಸದಿಂದ ದೇಶದ ಉದ್ದಗಲಕ್ಕೂ ಸಂಚರಿಸಿ ಈ ಯಾತ್ರೆ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಸಂದೇಶ ಯೋಧರು ರವಾನೆ ಮಾಡುತ್ತಿದ್ದಾರೆ. ಈ ರೀತಿಯ ಕಾರ್ಯಕ್ರಮಗಳು ಯೋಧರಿಗೆ ಮತ್ತಷ್ಟು ಉತ್ತೇಜನ ನೀಡಲಿವೆ. ಈ ಯಾತ್ರೆ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ ಸಿಎಂ</p>
ಆತ್ಮವಿಶ್ವಾಸದಿಂದ ದೇಶದ ಉದ್ದಗಲಕ್ಕೂ ಸಂಚರಿಸಿ ಈ ಯಾತ್ರೆ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಸಂದೇಶ ಯೋಧರು ರವಾನೆ ಮಾಡುತ್ತಿದ್ದಾರೆ. ಈ ರೀತಿಯ ಕಾರ್ಯಕ್ರಮಗಳು ಯೋಧರಿಗೆ ಮತ್ತಷ್ಟು ಉತ್ತೇಜನ ನೀಡಲಿವೆ. ಈ ಯಾತ್ರೆ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ ಸಿಎಂ
<p>ವಿಧಾನಸೌಧದ ಪೂರ್ವ ದ್ವಾರದ ಬಳಿ ಭಾನುವಾರ ಗಡಿ ಭದ್ರತಾ ಪಡೆ(ಬಿಎಸ್‌ಎಫ್), ದಿವ್ಯಾಂಗ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ಆದಿತ್ಯಾ ಮೆಹ್ತಾ ಪ್ರತಿಷ್ಠಾನಗಳು ಜಂಟಿಯಾಗಿ ಆಯೋಜಿದ್ದ ಸೈಕಲಿಂಗ್‌ನಲ್ಲಿ 30ಕ್ಕೂ ಹೆಚ್ಚು ಯೋಧರು ಭಾಗಿಯಾಗಿದ್ದರು. ಸುಮಾರು ದೇಶದ 35 ನಗರಗಳಲ್ಲಿ 43 ದಿನಗಳ ಕಾಲ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯಲಿದೆ.</p>
ವಿಧಾನಸೌಧದ ಪೂರ್ವ ದ್ವಾರದ ಬಳಿ ಭಾನುವಾರ ಗಡಿ ಭದ್ರತಾ ಪಡೆ(ಬಿಎಸ್‌ಎಫ್), ದಿವ್ಯಾಂಗ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ಆದಿತ್ಯಾ ಮೆಹ್ತಾ ಪ್ರತಿಷ್ಠಾನಗಳು ಜಂಟಿಯಾಗಿ ಆಯೋಜಿದ್ದ ಸೈಕಲಿಂಗ್‌ನಲ್ಲಿ 30ಕ್ಕೂ ಹೆಚ್ಚು ಯೋಧರು ಭಾಗಿಯಾಗಿದ್ದರು. ಸುಮಾರು ದೇಶದ 35 ನಗರಗಳಲ್ಲಿ 43 ದಿನಗಳ ಕಾಲ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯಲಿದೆ.
<p>ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿಎಸ್‌ಎಫ್‌ನ ಐಜಿ ಎಸ್.ಕೆ.ತ್ಯಾಗಿ ಮತ್ತುತರರು ಉಪಸ್ಥಿತರಿದ್ದರು.</p>
ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿಎಸ್‌ಎಫ್‌ನ ಐಜಿ ಎಸ್.ಕೆ.ತ್ಯಾಗಿ ಮತ್ತುತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ