666 ಕೋಟಿ ರೂ. ರಿಲೀಸ್, ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಖಾತ್ರಿಪಡಿಸಿಕೊಂಡ ಸಿಎಂ

First Published Jun 2, 2020, 10:08 PM IST

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್‌ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.