ಅಂಗಾಂಗ ದಾನಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ
ಇಂದು ಮುಖ್ಯಮಂತ್ರಿಗಳ ಅಧಿಕೃತ ಗೃಹನಿವಾಸ ಕಾವೇರಿ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು.ಅಂಗಾಂಗ ದಾನ ಮಾಡಿದ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸ ಪತ್ರ ನೀಡಿ ಗೌರವಿಸಿ ಸನ್ಮಾಸಿದರು. ಅಂಗಾಂಗ ದಾನ ಮಾಡುವುದು ಪುಣ್ಯದ ಕೆಲಸ ಅಂಗಾಂಗ ದಾನ ಮಾಡುವ ಕುಟುಂಬಗಳಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಭರವಸೆ ನೀಡಿದರು.

ಇಂದು ಸಿಎಂ ಗೃಹ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ದಾನಿಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸ ಪತ್ರ ನೀಡಿ ಗೌರವಿಸಿ ಸನ್ಮಾನಿಸಿದರು.
ಸಿಎಂ ಗೃಹ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಚಿವ ಚಲುವರಾಯಸ್ವಾಮಿ, ಹಿರಿಯ ಅಧಿಕಾರಿಗಳು ಉಪಸ್ಥಿತಿಯಿದ್ದರು.
ಜೀವಸಾರ್ಥಕತೆ ಅಡಿಯಲ್ಲಿ ಅಂಗಾಂಗ ದಾನಕ್ಕೆ ಒತ್ತು ನೀಡಿರುವ ಆರೋಗ್ಯ ಇಲಾಖೆ. ಅಂಗಾಂಗ ದಾನ ಮಾಡಿದ 7 ಕುಟುಂಬಗಳನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸನ್ಮಾನಿಸಿದರು.
ಅಂಗಾಂಗ ದಾನ ಮಾಡುವುದು ಮಹತ್ಕಾರ್ಯ. ಒಬ್ಬರ ಜೀವ ಹೋಗಿರುವ ಸಂದರ್ಭದಲ್ಲಿ ಇನ್ನೊಬ್ಬರ ಜೀವ ಉಳಿಸುವ ಬಗ್ಗೆ ದಾನಿಗಳ ಕುಟುಂಬ ಯೋಚಿಸುವುದು ಸಾಮಾನ್ಯವಲ್ಲ. ಅಂಗಾಂಗ ದಾನ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೆಚ್ಚಿನ ಒತ್ತು ನೀಡಿದ್ದಾರೆ. ದೇಶದಲ್ಲಿಯೇ ಕರ್ನಾಟಕ ಇಂದು ಅಂಗಾಂಗ ದಾನದಲ್ಲಿ ಎರಡನೇ ಸ್ಥಾನದಲ್ಲಿದೆ. ಅಂಗಾಂಗ ದಾನಿಗಳ ಯಾವುದೇ ತೊಂದರೆಗಳಾದಂತೆ ಸರ್ಕಾರ ಕೂಡ ನೋಡಿಕೊಳ್ಳಲಿದೆ.ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ