ಬೆಂಗಳೂರು: KSRTC ಬಸ್ ನಿಲ್ದಾಣವಾಯ್ತು ಕೊರೋನಾ ಸೆಂಟರ್..!
ಬೆಂಗಳೂರು(ಆ.06): ಕೊರೋನಾ ರೋಗ ಲಕ್ಷಣ ಇಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೆಎಸ್‌ಆರ್‌ಟಿಸಿಗೆ ಸೇರಿದ ಪೀಣ್ಯದಲ್ಲಿನ ಬಸವೇಶ್ವರ ಬಸ್ ನಿಲ್ದಾಣದಲ್ಲಿ ಕೊರೋನಾ ಆರೈಕೆ ಕೇಂದ್ರ ಆರಂಭಿಸಲಾಗಿದೆ.

<p>ನೂತನ ಕೊರೋನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ </p>
ನೂತನ ಕೊರೋನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ
<p>ರೋಟರಿ, ಅದ್ವಿಕಾ ಕೇರ್ ಫೌಂಡೇಶನ್ ಮತ್ತು ನಯೋನಿಕಾ ಐ ಟ್ರಸ್ಟ್ ಸಹಯೋಗದೊಂದಿಗೆ ಕೇಂದ್ರ ಪ್ರಾರಂಭಿಸಿದ್ದು, ಇಂದಿನಿಂದ(ಗುರುವಾರ) ಕಾರ್ಯ ನಿರ್ವಹಿಸಲಿದೆ. </p>
ರೋಟರಿ, ಅದ್ವಿಕಾ ಕೇರ್ ಫೌಂಡೇಶನ್ ಮತ್ತು ನಯೋನಿಕಾ ಐ ಟ್ರಸ್ಟ್ ಸಹಯೋಗದೊಂದಿಗೆ ಕೇಂದ್ರ ಪ್ರಾರಂಭಿಸಿದ್ದು, ಇಂದಿನಿಂದ(ಗುರುವಾರ) ಕಾರ್ಯ ನಿರ್ವಹಿಸಲಿದೆ.
<p>ಬಸ್ ನಿಲ್ದಾಣದ ಕೆಳ ಮತ್ತು ಮೊದಲ ಮಹಡಿಯಲ್ಲಿ ಸೋಂಕಿತರ ಆರೈಕೆಗಾಗಿ 200 ಹಾಸಿಗೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಶೇ.50 ಹಾಸಿಗೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಉಳಿದ ಹಾಸಿಗೆಗಳ ಪೈಕಿ ಶೇ.10 ರೋಟರಿ ಮತ್ತು ಟೈಟಾನ್ ಸಂಸ್ಥೆಯಿಂದ ಶಿಫಾರಸು ಮಾಡಲ್ಪಟ್ಟ ರೋಗಿಗಳಿಗೆ ಕಾಯ್ದಿರಿಸಲಾಗಿದೆ.</p>
ಬಸ್ ನಿಲ್ದಾಣದ ಕೆಳ ಮತ್ತು ಮೊದಲ ಮಹಡಿಯಲ್ಲಿ ಸೋಂಕಿತರ ಆರೈಕೆಗಾಗಿ 200 ಹಾಸಿಗೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಶೇ.50 ಹಾಸಿಗೆಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಉಳಿದ ಹಾಸಿಗೆಗಳ ಪೈಕಿ ಶೇ.10 ರೋಟರಿ ಮತ್ತು ಟೈಟಾನ್ ಸಂಸ್ಥೆಯಿಂದ ಶಿಫಾರಸು ಮಾಡಲ್ಪಟ್ಟ ರೋಗಿಗಳಿಗೆ ಕಾಯ್ದಿರಿಸಲಾಗಿದೆ.
<p>ಕೇಂದ್ರ ತುರ್ತು ಚಿಕಿತ್ಸಾ ವಾರ್ಡ್ ಮತ್ತು 10 ಹಾಸಿಗೆಗಳ ಐಸಿಯು ಕೂಡ ಹೊಂದಿದೆ</p>
ಕೇಂದ್ರ ತುರ್ತು ಚಿಕಿತ್ಸಾ ವಾರ್ಡ್ ಮತ್ತು 10 ಹಾಸಿಗೆಗಳ ಐಸಿಯು ಕೂಡ ಹೊಂದಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ