ಸಚಿವ ಡಿ ಸುಧಾಕರ್ ಆರೋಗ್ಯ ಗಂಭೀರ, ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಸಚಿವ ಡಿ ಸುಧಾಕರ್ ಆರೋಗ್ಯ ಗಂಭೀರ, ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಸೇರಿ ಪ್ರಮುಖರು ಆಸ್ಪತ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಡಿ ಸುಧಾಕರ್ ಆರೋಗ್ಯ ಹೇಗಿದೆ.

ಸಚಿವ ಡಿ ಸುಧಾಕರ್ ಆರೋಗ್ಯ ವಿಚಾರಿಸಲು ಆಗಮಿಸಿದ ಸಿಎಂ
ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ ಸುಧಾಕರ್ ಅವರನ್ನು ಇತ್ತೀಚೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಡಿ ಸುಧಾಕರ್ ಆರೋಗ್ಯ ಕ್ಷೀಣಿಸುತ್ತಿದ್ದ ಕಾರಣ ಆತಂಕ ಮನೆ ಮಾಡಿತ್ತು. ಇದೀಗ ಡಿ ಸುಧಾಕರ್ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿದ್ದಾರೆ.
ತೀವ್ರ ನಿಘಾಘಟದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಡಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಡಿ ಸುಧಾಕರ್ ಆರೋಗ್ಯ ಗಂಭೀರವಾಗಿದೆ. ಆಸ್ಪತ್ರೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ವೈದ್ಯರ ಜೊತೆ ಚರ್ಚಿಸಿದ್ದಾರೆ. ಡಿ ಸುಧಾಕರ್ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಡಿ ಸುಧಾಕರ್ ಕುಟುಂಬಸ್ಥರ ಭೇಟಿಯಾದ ಸಿಎಂ
ಡಿ ಸುಧಾಕರ್ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಸಿದ್ದರಾಮಯ್ಯ ಬಳಿಕ ಕುಟುಂಬಸ್ಥರ ಭೇಟಿಯಾಗಿ ಮಾತನಾಡಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯಗೆ ಜಮೀರ್ ಸೇರಿ ಇತರರ ಸಾಥ್
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಗೂಳಿಹಟ್ಟಿ ಶೇಕರ್ ಸೇರಿದಂತೆ ಪ್ರಮುಖರು ಸಾಥ್ ನೀಡಿದರು. ಭೇಟಿ ವೇಳೆ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.
ಉಲ್ಬಣಗೊಂಡ ಶ್ವಾಸಕೋಶದ ಸೋಂಕು
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ ಸುಧಾಕರ್‌ಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಸಮಸ್ಯೆ ಉಲ್ಬಣಗೊಂಡ ಕಾರಣ ಆರೋಗ್ಯ ಹದಗೆಟ್ಟಿತ್ತು. ನಾಲ್ಕು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ಪೆಗೆ ಶಿಫ್ಟ್ ಮಾಡಲಾಗಿತ್ತು.
ಉಲ್ಬಣಗೊಂಡ ಶ್ವಾಸಕೋಶದ ಸೋಂಕು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

