MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬರಡು ಭೂಮಿಯಲ್ಲಿ ಸುರಂಗ ತೋಡಿ ನೀರು ಹರಿಸಿದ್ದೇಗೆ? ಮಹಾಲಿಂಗ ನಾಯ್ಕರ ಸಾಧನೆ ಬಗ್ಗೆ ತಿಳಿಯಿರಿ

ಬರಡು ಭೂಮಿಯಲ್ಲಿ ಸುರಂಗ ತೋಡಿ ನೀರು ಹರಿಸಿದ್ದೇಗೆ? ಮಹಾಲಿಂಗ ನಾಯ್ಕರ ಸಾಧನೆ ಬಗ್ಗೆ ತಿಳಿಯಿರಿ

ಛಲವೊಂದಿದ್ದರೆ ಎನನ್ನೂ ಸಾಧಿಸಬಹುದು ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರೇ ಸಾಕ್ಷಿ. ಬೋಳುಗುಡ್ಡೆಯಲ್ಲಿ ಸುರಂಗ ನಿರ್ಮಿಸಿ, ನೀರು ಹರಿಸಿ ಬಂಗಾರ ಬೆಳೆದ ಭಗೀರಥ. ಶಾಲೆ, ಕಾಲೇಜುಗಳಿಗೆ ಹೋಗದಿದ್ದರೂ, ನೀರನೆಮ್ಮದಿಯನ್ನು ಕಂಡು ಪ್ರಗತಿಪರ ಕೃಷಿಕರೆನಿಸಿಕೊಂಡವರು. ಮಹಾಲಿಂಗ ನಾಯ್ಕರ ಸಾಧನೆ ಮನ್ನಿಸಿ ಅವರನ್ನು ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ.

3 Min read
Author : Suvarna News
Published : Jan 25 2022, 11:11 PM IST
Share this Photo Gallery
  • FB
  • TW
  • Linkdin
  • Whatsapp
110

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಗಡಿನಾಡು ಅಡ್ಯನಡ್ಕ ಸಮೀಪದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರಿಗೆ ಕೃಷಿ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  

210

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಅಮೈ ಮಹಾಲಿಂಗ ನಾಯ್ಕ ಪದ್ಮಶ್ರೀ ಪುರಸ್ಕಾರ ಸಂದಿದೆ. 

310

‘ಜಲಸಾಹಸ’ ದೂರದರ್ಶನದ ‘ವಾಟರ್ ವಾರಿಯರ್’ ಧಾರಾವಾಹಿಯಲ್ಲಿ ಪ್ರಕಟವಾಗಿದೆ. ಕನ್ನಡಪ್ರಭ ಸುವರ್ಣನ್ಯೂಸ್ ಅಸಮಾನ್ಯ ಕನ್ನಡಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

410

73 ವರ್ಷದ ಮಹಾಲಿಂಗ ನಾಯ್ಕ,  ಸರ್ಕಾರದಿಂದ ಸಿಗುವ ಸವಲತ್ತಿಗೆ ಕೈಚಾಚದೇ ತಮ್ಮ ಪರಿಶ್ರಮವನ್ನು ಮಾತ್ರ ನಂಬಿ ಹಾಗೇ ಜೀವಿಸಿದವರು. ಸರ್ಕಾರದಿಂದ ನೀಡುವ ಕೃಷಿ ಪಂಡಿತ ಪ್ರಶಸ್ತಿ, ಮಂಗಳೂರು ಪ್ರೆಸ್‌ಕ್ಲಬ್ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ. 

510

ಇಡೀ ದಿನ ಸುರಂಗ ತೋಡಿದರೆ ಊಟಕ್ಕೆ ತತ್ವಾರ. ಅದಕ್ಕೆಂದೇ ಅರ್ಧದಿನ ತೆಂಗಿನ ಮರ, ಅಡಕೆ ಮರ ಏರುವ ಕೂಲಿ ಕೆಲಸ ಮಾಡಿ, ಉಳಿದ ಅರ್ಧ ದಿನ ಮತ್ತು ರಾತ್ರಿವೇಳೆ ಸೀಮೆಎಣ್ಣೆ ದೀಪ ಬಳಸಿ 25-30 ಮೀಟರ್ ಉದ್ದದ ಒಟ್ಟು  7 ಸುರಂಗವನ್ನು ಏಕಾಂಗಿಯಾಗಿ ನಿರ್ಮಿಸಿದ ಸಾಹಸಿ ಇವರು. ಅಷ್ಟಕ್ಕೂ ಇವರಲ್ಲಿ ಸ್ವಂತ ಜಮೀನು ಇರಲಿಲ್ಲ. ತಾನು ಕೆಲಸ ಮಾಡುತ್ತಿದ್ದ ಅಮೈ ಮಹಾಬಲ ಭಟ್ಟರಲ್ಲಿ 1978ರಲ್ಲಿ ಎರಡು ಎಕ್ರೆ ಜಾಗ ‘ದರ್ಖಾಸು’ ಪಡೆದು, ಕೃಷಿಯ ಕನಸು ಬೆನ್ನತ್ತಿದರು. ಇದಕ್ಕೆ ಬೇಕಾದ ನೀರಿಗಾಗಿ ಹರ ಸಾಹಸ ಪಟ್ಟರು.

610

ವರ್ಷಕ್ಕೊಂದೊಂದೇ ಸುರಂಗದಂತೆ ಐದು ಸುರಂಗ ನಿರ್ಮಿಸಿಯೂ ನೀರು ಕಾಣದಾದರೂ ಮಹಾಲಿಂಗ ಅವರು ಛಲ ಬಿಡದೇ ತನ್ನ ಸಾಹಸ ಮುಂದುವರಿಸುತ್ತಾರೆ. ೬ ನೇ ಸುರಂಗದಿಂದ ಸ್ವಲ್ಪ ನೀರು ಜಿನುಗಲು ಪ್ರಾಾರಂಭವಾಗುತ್ತದೆ. ೭ ನೇ ಸುರಂಗ ನಿರ್ಮಿಸಿದಾಗ ತನ್ನ ಒಂದು ಎಕ್ರೆ ತೋಟಕ್ಕೆ ಸಾಕಾಗುವಷ್ಟು ನೀರು ಕಾಣಿಸುತ್ತಾರೆ. ಈಗ ಎರಡು ಬೋರವೆಲ್‌ಗಳನ್ನು ತೋಡಿ, ಅದಕ್ಕೆ ಪಂಪ್ ಹಾಕಿಸಿದ್ದಾರೆ. ಸುರಂಗದ ನೀರನ್ನು ಮಣ್ಣಿನ ಟ್ಯಾಂಕ್‌ಲ್ಲಿ ಸಂಗ್ರಹಿಸಿ ಜಮೀನು ಹಸನಾಗಿಸಿ ಬೆಳೆ ಬೆಳೆದಿದ್ದಾರೆ. ತೋಟದ ನಡುವೆ ಅಲ್ಲಲ್ಲಿ ಇಂಗುಗುಂಡಿ ನಿರ್ಮಿಸಿದ್ದಾರೆ.

710

ಅಡಕೆ, ತೆಂಗಿನ ಮರ ಏರುವುದರಲ್ಲಿ  ಪರಿಣತರಾಗಿದ್ದ ಕೃಷಿ ಕೂಲಿ ಕಾರ್ಮಿಕ ಮಹಾಲಿಂಗ ನಾಯ್ಕ ೪೦ ವರ್ಷಗಳ ಹಿಂದೆ ಸ್ವಂತ ಊರಿನ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಕನಸು ಕಂಡಿದ್ದರು. ಆದರೆ ಇದಕ್ಕಾಾಗಿ ಅವರಲ್ಲಿ ಜಮೀನು ಇರಲಿಲ್ಲ. ಭೂ ಮಾಲಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾಲು ಕೂಲಿ ಕೆಲಸಕ್ಕೆ ಹೋಗುತ್ತಿಿದ್ದರು. ಮಹಾಬಲ ಭಟ್ ಅವರು ಮಹಾಲಿಂಗ ನಾಯ್ಕರಿಗೆ ಎರಡು ಎಕ್ರೆ ಜಮೀನು ನೀಡಲು ಒಪ್ಪಿಕೊಂಡರು. ಎರಡು ಎಕ್ರೆ ಗುಡ್ಡ ದರ್ಖಾಸ್ತು ರೂಪದಲ್ಲಿ ಮಹಾಲಿಂಗ ನಾಯ್ಕ ಪಡೆದರು.

810

ನೀರಿಲ್ಲದ ಇಳಿಜಾರು ಬೋಳು ಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ದೊಡ್ಡ ಸವಾಲಾಯಿತು. ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿಕೊಂಡರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದದ್ದು ಸುರಂಗ ತಂತ್ರಜ್ಞಾನ. ದಕ್ಷಿಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಗಡಿ ಭಾಗದಲ್ಲಿ ನೀರಿಗಾಗಿ ಹಲವರು ಸುರಂಗ ತೋಡುವುದನ್ನು ಕೇಳಿ ತಿಳಿದಿದ್ದರು. ಅರ್ಧ ದಿನ ಕೂಲಿ ಕೆಲಸ , ಉಳಿದರ್ಧ ದಿನ ಮತ್ತು ರಾತ್ರಿಿ ಹೊತ್ತು ತಾನೇ ಸ್ವತಃ ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನ ನಡೆಸಿದರು.

910

ಮೊದಲು 30 ಮೀಟರ್ ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ಮತ್ತೆ ಪ್ರಯತ್ನ ಮುಂದುವರಿಸಿದರು. ಸೀಮೆ ಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಸುರಂಗ ತೋಡುವ ಅಪಾಯಕಾರಿ ಪ್ರಯತ್ನಕ್ಕೆ  ಫಲ ದೊರೆಯಲಿಲ್ಲ. ಸುರಂಗ ತೋಡುವಾಗ ಮಣ್ಣು ಕುಸಿದರೆ ಜೀವಕ್ಕೇ ಅಪಾಯವೂ ಇತ್ತು. ಅದನ್ನೂ ಲೆಕ್ಕಿಸದೇ ತನ್ನ ಭಗೀರಥ ಪ್ರಯತ್ನವನ್ನು ನಿಲ್ಲಿಸದೆ ಕಾಯಕ ಮುಂದುವರಿಸಿದ ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು. ಈ ಪ್ರಯತ್ನದಲ್ಲಿ ಸ್ವಲ್ಪ ನೀರು ಕಾಣಿಸಿತು. ೨೫ ಮೀಟರ್ ಉದ್ದದ ಸುರಂಗದಲ್ಲಿ ಸಿಕ್ಕಿದ ನೀರಿನಲ್ಲಿ ಕೃಷಿ ಸಾಧ್ಯವಿಲ್ಲ ಎನ್ನುವುದು ಅವರಿಗೆ ಅರಿವಾಯಿತು.

1010

ಮಹಾಲಿಂಗ ನಾಯ್ಕ ಒಂದು ಎಕ್ರೆಯಲ್ಲಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸಿನ ಕೃಷಿ ಕೈಗೊಂಡಿದ್ದಾರೆ. ಇನ್ನೊಂದು ಎಕ್ರೆಯಲ್ಲಿ ಕಾಡು ಬೆಳೆಸಿದ್ದಾರೆ. ಗೇರು ಕೃಷಿಯೂ ಇದೆ. ಮಣ್ಣಿನ ಟ್ಯಾಾಂಕಿಯಿಂದ ವಿದ್ಯುತ್ ಖರ್ಚಿಲ್ಲದೆ ಗ್ರಾವಿಟಿ ಮೂಲಕ ಅಡಿಕೆ, ತೆಂಗು ಮತ್ತು ಬಾಳೆ ಗಿಡಗಳಿಗೆ ನೀರು ಉಣಿಸುತ್ತಾಾರೆ. ಅವರ ತೋಟದಲ್ಲಿ ೩೦೦ ಅಡಕೆ, 75 ತೆಂಗು, 200 ಬಾಳೆ ಗಿಡಗಳಿವೆ. ಹಟ್ಟಿಗೊಬ್ಬರ, ಕಾಂಪೋಸ್‌ಟ್‌ ಹೊರತು ಬೇರೆ ಯಾವುದೇ ಗೊಬ್ಬರದ ಬಳಸಿಲ್ಲ. ಇಂಗು ಗುಂಡಿಗಳ ಮೂಲಕ ಜಲಕೊಯ್ಲು ಮಾಡುತ್ತಾಾರೆ. ನಾಲ್ಕು ವರ್ಷಗಳ ಹಿಂದೆ ಎರಡು ಬೋರ್‌ವೆಲ್ ತೆಗೆಸಿದ್ದಾರೆ. ಮೊದಲ ಬೋರ್‌ವೆಲ್ ೪೦೦ ಅಡಿ ಸಾಗಿದ್ದರೂ ನೀರು ದೊರೆಯಲಿಲ್ಲ. ಎರಡನೇ ಬೋರ್‌ನಲ್ಲಿ ೩೭೦ ಅಡಿ ತಲುಪುವ ಹೊತ್ತಿಗೆ ಒಂದು ಇಂಚು ನೀರು ಸಿಕ್ಕಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ದಕ್ಷಿಣ ಕನ್ನಡ
ರೈತರು
ನೀರು

Latest Videos
Recommended Stories
Recommended image1
BGS ಕಾಲೇಜು ವಿದ್ಯಾರ್ಥಿಯ ಅದ್ಭುತ ಸಂಶೋಧನೆ: 'HybridEcoISA' ತಂತ್ರಜ್ಞಾನಕ್ಕೆ ಪ್ರತಿಷ್ಠಿತ ಡಾ. ಎಸ್. ಕೆ. ಶಿವಕುಮಾರ್ ಪ್ರಶಸ್ತಿ!
Recommended image2
Internal Reservation Row: ಸಿಎಂ ನೇತೃತ್ವದಲ್ಲಿ ದಲಿತ ಸಚಿವರ ಮಹತ್ವದ ಸಭೆ, ಮೂರು ಮಹತ್ವದ ನಿರ್ಧಾರ, ರಾಜಭವನಕ್ಕೆ ಸಚಿವರ ನಿಯೋಗ ದೌಡು!
Recommended image3
Karnataka Budget: ರಾಜ್ಯ ಬಜೆಟ್‌ ಬಳಿಕ ಆಟೋಚಾಲಕರ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved