ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವ ಆಚರಣೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2ನಲ್ಲಿ ಅಕ್ಟೋಬರ್ 11ರವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ.

ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ಸಂಸ್ಕೃತಿಯನ್ನು ಕಣ್ತುಂಬಿಸಿಕೊಳ್ಳಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕುಚ್ಚುಪುಡಿ, ಡೊಳ್ಳು ಕುಣಿತ, ತಮಟೆ ವಾಧ್ಯ, ನಾಟ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಟರ್ಮಿನಲ್ 1 ಮತ್ತು 2ನಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಸಂಭ್ರಮಾಚರಣೆಯ ಭಾಗವಾಗಿ ಬೆಂಗಳೂರು ವಿಮಾನ ನಿಲ್ದಾಣ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಅಕ್ಟೋಬರ್ 8ರಂದು ಯಕ್ಷಗಾನ, ತಮಟೆವಾಧ್ಯ ಜರುಗಿತು, ಜೊತೆಗೆ, ಜಾನಪದ ಗಾಯನ ಮತ್ತು ನೃತ್ಯ ರೂಪಕ, ವಿದ್ವಾನ್ ರೂಪಶ್ರೀ ಮಧುಸೂದನ್ ಅವರಿಂದ ನೃತ್ಯ ಮತ್ತು ಸಂಗೀತ ಕಲಾ ಪ್ರದರ್ಶನ ಜರುಗಿತು.
ಅ.9 ರಂದು ಕರ್ನಾಟಕ ಸಂಗೀತ ಹಾಗೂ ನೃತ್ಯ ರೂಪಕ, ಅ.10 ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕುಚುಪುಡಿ ನೃತ್ಯ ಪ್ರದರ್ಶನ, ಅ.11: ಬೊಂಬೆ ಪ್ರದರ್ಶನ ನಡೆಯಲಿದೆ. ಈ ಎಲ್ಲಾ ಸಾಂಪ್ರದಾಯಕ ಮನರಂಜನೆಯೊಂದಿಗೆ ದಸರಾ ಹಬ್ಬವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಣ್ತುಂಬಿಕೊಳ್ಳಬಹುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ