MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ದಾವಣಗೆರೆ: ಕುಕ್ಕವಾಡ ಅರಣ್ಯದಲ್ಲಿ ಕಬ್ಬಿಣದ ಅದಿರು ದಂಧೆ ಬಯಲು! ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್, ಓರ್ವ ಪರಾರಿ!

ದಾವಣಗೆರೆ: ಕುಕ್ಕವಾಡ ಅರಣ್ಯದಲ್ಲಿ ಕಬ್ಬಿಣದ ಅದಿರು ದಂಧೆ ಬಯಲು! ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್, ಓರ್ವ ಪರಾರಿ!

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ಕವಾಡ ಮೀಸಲು ಅರಣ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಕಬ್ಬಿಣದ ಅದಿರು ದಂಧೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

1 Min read
Author : Ravi Janekal
Published : Jun 11 2026, 10:41 AM IST
Share this Photo Gallery
  • FB
  • TW
  • Linkdin
  • Whatsapp
18
ಕುಕ್ಕವಾಡ ಅರಣ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಾಲ್ವರ ಬಂಧನ
Image Credit : Asianet News

ಕುಕ್ಕವಾಡ ಅರಣ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಾಲ್ವರ ಬಂಧನ

ಅಕ್ರಮ ಗಣಿಗಾರಿಕೆ ಮತ್ತು ಸಾಗಾಟದಲ್ಲಿ ತೊಡಗಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿದ ಘಟನೆ ದಾವನಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ರವಾಡ ಮೀಸಲು ಅರಣ್ಯದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28
ಅರಣ್ಯದಲ್ಲಿ ಕಬ್ಬಿಣದ ಅದಿರು ಅಕ್ರಮ ಸಾಗಾಟ
Image Credit : Asianet News

ಅರಣ್ಯದಲ್ಲಿ ಕಬ್ಬಿಣದ ಅದಿರು ಅಕ್ರಮ ಸಾಗಾಟ

ಆರೋಪಿಗಳು ಮೀಸಲು ಅರಣ್ಯ ಪ್ರದೇಶದಲ್ಲೇ ಕಬ್ಬಿಣದ ಅದಿರು ಕಲ್ಲುಗಳನ್ನು ಅಕ್ರಮವಾಗಿ ಸಂಗ್ರಹಿಸಿ, ಬಳಿಕ ಅವುಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದರು. ಹಲವು ದಿನಗಳಿಂದ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ.

Related Articles

Related image1
ಬಳ್ಳಾರಿ: ಅಕ್ರಮ ಅದಿರು ಸಾಗಣೆ ಆರೋಪ, 54 ಮಂದಿ ವಿರುದ್ಧ FIR
Related image2
ಅಕ್ರಮ ಗಣಿಗಾರಿಕೆ ಪ್ರಕರಣಗಳ ಮರು ತನಿಖೆ?: ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ
38
ದಾವಣಗೆರೆ: ಟ್ರ್ಯಾಕ್ಟರ್‌ನಲ್ಲಿ ಕಬ್ಬಿಣದ ಅದಿರು ಸಾಗಾಟಕ್ಕೆ ಯತ್ನ!
Image Credit : Asianet News

ದಾವಣಗೆರೆ: ಟ್ರ್ಯಾಕ್ಟರ್‌ನಲ್ಲಿ ಕಬ್ಬಿಣದ ಅದಿರು ಸಾಗಾಟಕ್ಕೆ ಯತ್ನ!

ಕಾನೂನುಬಾಹಿರವಾಗಿ ಸಂಗ್ರಹಿಸಿದ ಅದಿರು ಕಲ್ಲುಗಳನ್ನು ಟ್ರ್ಯಾಕ್ಟರ್ ಮತ್ತು ಟ್ರೈಲರ್ ಮೂಲಕ ಸಾಗಿಸಿ ಮಾರಾಟ ಮಾಡಲು ಐವರು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ನಡೆದಿದ್ದು, ಆರೋಪಿಗಳ ಯೋಜನೆ ವಿಫಲವಾಗಿದೆ.

48
ಒಬ್ಬ ಪರಾರಿ, ನಾಲ್ವರು ಬಂಧನ
Image Credit : Asianet News

ಒಬ್ಬ ಪರಾರಿ, ನಾಲ್ವರು ಬಂಧನ

ದಾಳಿ ವೇಳೆ ಐವರ ಪೈಕಿ ಒಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದ ನಾಲ್ವರನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪರಾರಿಯಾದ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

58
ತೋಟದಲ್ಲಿ ಅಡಗಿಸಿಟ್ಟಿದ್ದ ಅದಿರು
Image Credit : Asianet News

ತೋಟದಲ್ಲಿ ಅಡಗಿಸಿಟ್ಟಿದ್ದ ಅದಿರು

ಬಂಧಿತರು ಅರಣ್ಯ ಪ್ರದೇಶದಿಂದ ಸಂಗ್ರಹಿಸಿದ್ದ ಕಬ್ಬಿಣದ ಅದಿರು ಕಲ್ಲುಗಳನ್ನು ಸಮೀಪದ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಬಳಿಕ ಅವುಗಳನ್ನು ಬೇರೆಡೆಗೆ ಸಾಗಿಸುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ.

68
ಬಂಧಿತರು ಯಾರು?
Image Credit : Asianet News

ಬಂಧಿತರು ಯಾರು?

ಬಂಧಿತರನ್ನು ಸಯ್ಯದ್ ಸಗೀರ್ ಅಹ್ಮದ್ ಅಲಿಯಾಸ್ ಕಲೀಮ್, ಪ್ರಸನ್ನ ಅಲಿಯಾಸ್ ತಿಪ್ಪೇಶಪ್ಪ ಉಗ್ರಾಣಿ, ನಜೀಬ್ ಬಿನ್ ಅಬ್ದುಲ್ ಸಾಬ್ ಹಾಗೂ ಮುಕ್ರಂ ಬಿನ್ ಅಬ್ದುಲ್ ರಹೀಮ್ ಎಂದು ಗುರುತಿಸಲಾಗಿದೆ. ಆರೋಪಿಗಳ ಹಿನ್ನೆಲೆ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

78
ಅಕ್ರಮಕ್ಕೆ ಬಳಸಿದ್ದ ಟ್ರ್ಯಾಕ್ಟರ್-ಟ್ರೈಲರ್ ಜಪ್ತಿ
Image Credit : Asianet News

ಅಕ್ರಮಕ್ಕೆ ಬಳಸಿದ್ದ ಟ್ರ್ಯಾಕ್ಟರ್-ಟ್ರೈಲರ್ ಜಪ್ತಿ

ಕಾರ್ಯಾಚರಣೆ ವೇಳೆ ಕಬ್ಬಿಣದ ಅದಿರು ತುಂಬಿದ್ದ ಒಂದು ಟ್ರ್ಯಾಕ್ಟರ್ ಟ್ರೈಲರ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ಅದಿರು ಹಾಗೂ ವಾಹನದ ಮೌಲ್ಯವನ್ನು ಅಂದಾಜು ಮಾಡಲಾಗುತ್ತಿದೆ.

88
ತನಿಖೆ ಮುಂದುವರಿಕೆ
Image Credit : Asianet News

ತನಿಖೆ ಮುಂದುವರಿಕೆ

ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಕ್ರಮ ಗಣಿಗಾರಿಕೆ ಜಾಲದ ಸುಳಿವು ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ, ಇದರ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ದಾವಣಗೆರೆ
ಅರಣ್ಯ
ಕರ್ನಾಟಕ ಸುದ್ದಿ
Latest Videos
Recommended Stories
Recommended image1
Kogilu layout eviction case: ಸರ್ಕಾರ ಮನೆ ಕೊಟ್ಟರೂ ಸ್ಥಳ ಬಿಡದ ಕೋಗಿಲು ನಿವಾಸಿಗಳು!ಅಧಿಕಾರಿಗಳಿಗೆ ಹೊಸ ತಲೆನೋವು
Recommended image2
ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ
Recommended image3
Karnataka News Live: ಆರ್‌ಎಸ್‌ಎಸ್ ನೋಂದಣಿ ಮಾಡಿಸಬೇಕು - ಪ್ರಿಯಾಂಕ್ ಹೇಳಿಕೆ ಸಮರ್ಥಿಸಿದ ಎಂಬಿ ಪಾಟೀಲ್!
Related Stories
Recommended image1
ಬಳ್ಳಾರಿ: ಅಕ್ರಮ ಅದಿರು ಸಾಗಣೆ ಆರೋಪ, 54 ಮಂದಿ ವಿರುದ್ಧ FIR
Recommended image2
ಅಕ್ರಮ ಗಣಿಗಾರಿಕೆ ಪ್ರಕರಣಗಳ ಮರು ತನಿಖೆ?: ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved