- Home
- News
- State
- ಇಂದು ಸಿಂಧನೂರು ಪಟ್ಟಣಕ್ಕೆ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!
ಇಂದು ಸಿಂಧನೂರು ಪಟ್ಟಣಕ್ಕೆ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಡಿಸಿಎಂ ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬಸನಗೌಡ ಫೌಂಡೇಶನ್‌ನಿಂದ ಬೃಹತ್ ಕಾರ್ಯಕ್ರಮ
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬಸನಗೌಡ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಸಮಾರಂಭದಲ್ಲಿ ಡಿಕೆಶಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಈ ಅದ್ಧೂರಿ ಕಾರ್ಯಕ್ರಮ ಆಯೋಜನೆಗೊಂಡಿದೆ.
ಸಾಮೂಹಿಕ ವಿವಾಹ ಹಾಗೂ ಸಾಧನಾ ಕೈಪಿಡಿ ಬಿಡುಗಡೆ:
ಈ ಸಮಾರಂಭದಲ್ಲಿ ಉಚಿತ ಸಾಮೂಹಿಕ ವಿವಾಹ ಹಾಗೂ 5001 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಎಂಎಲ್‌ಸಿ ಬಸನಗೌಡ ಬಾದರ್ಲಿ ಅವರು ಪರಿಷತ್ ಸದಸ್ಯರಾಗಿ ಕಳೆದ ಒಂದು ವರ್ಷದಲ್ಲಿ ಮಾಡಿದ ಜನಪರ ಸಾಧನೆಗಳ ಕೈಪಿಡಿಯನ್ನು ಗಣ್ಯರು ಅನಾವರಣಗೊಳಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಗಣ್ಯರ ದಂಡು
ಕಾರ್ಯಕ್ರಮದಲ್ಲಿ ಡಿಸಿಎಂ ಜೊತೆಗೆ ಸಚಿವರಾದ ಈಶ್ವರ್ ಖಂಡ್ರೆ, ಆರ್.ವಿ. ತಿಮ್ಮಾಪುರ, ಮಧು ಬಂಗಾರಪ್ಪ ಹಾಗೂ ಎನ್.ಎಸ್. ಬೋಸರಾಜು ಭಾಗವಹಿಸಲಿದ್ದಾರೆ. ಅಲ್ಲದೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಹತ್ತಾರು ಶಾಸಕರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಗಣ್ಯರ ಆಗಮನದ ಹಿನ್ನೆಲೆಯಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದೆ. ಸಭೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆಯಾಗಿ 50 ರಿಂದ 60 ಸಾವಿರ ಜನರು ಸೇರುವ ನಿರೀಕ್ಷೆಯಿದೆ.
ಬಿಸಿಲ ನಾಡಲ್ಲಿ ವಿಶೇಷ ವ್ಯವಸ್ಥೆ
ಬೇಸಿಗೆಯ ತಾಪ ಹೆಚ್ಚಿರುವುದರಿಂದ ಕಾರ್ಯಕ್ರಮಕ್ಕೆ ಬರುವ ಜನರಿಗೆ ಯಾವುದೇ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಏರ್ ಕೂಲರ್, ತಣ್ಣೀರು, ಮಜ್ಜಿಗೆ ಹಾಗೂ ಭರ್ಜರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

